ಬೆಂಗಳೂರಿಗೆ ರೈಲು ಮೂಲಕ ನಾಯಿ ಮಾಂಸ ಸರಬರಾಜು: ಮಾಂಸ ಪರೀಕ್ಷೆಗೆ ರವಾನೆ!
ಬೆಂಗಳೂರು ಜುಲೈ 27: ಬೆಂಗಳೂರು ನಗರಕ್ಕೆ ರೈಲುಗಳ ಮೂಲಕ ಪ್ರಾಣಿಗಳ ಮಾಂಸ ಸರಬರಾಜು ಆಗುತ್ತಿರುವ ಕುರಿತು ಬಿತ್ತರವಾಗುತ್ತಿರುವ ಸುದ್ದಿಗಳ ಕುರಿತ ಸ್ಪಷ್ಟನೆ ಇಲ್ಲಿದೆ.
ಈ ಕುರಿತು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು & ಪೊಲೀಸರು ತಪಾಸಣೆ ನಡೆಸಿದ್ದು ರಾಜಸ್ಥಾನದಿಂದ ಬಂದಿರುವ ಪಾರ್ಸೆಲ್ ಗಳಲ್ಲಿ ಪ್ರಾಣಿಗಳ ಮಾಂಸವಿರುವುದು ಕಂಡುಬಂದಿದೆ. ಯಾವ ಪ್ರಾಣಿಯ ಮಾಂಸ ಎಂದು ಖಚಿತಪಡಿಸಿಕೊಳ್ಳಲು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ವಿಶ್ಲೇಷಣೆಗೆ ಕಳುಹಿಸಲಾಗಿದೆ.

ಪಾರ್ಸೆಲ್ ಕಳುಹಿಸಿದವರ & ಸ್ವೀಕರಿಸಿದವರ ವಿವರ ಸಂಗ್ರಹಿಸಲಾಗಿದ್ದು ಪ್ರಯೋಗಾಲಯದ ಪರೀಕ್ಷಾ ಫಲಿತಾಂಶ ಬಂದ ನಂತರ ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ಮೇಲೆ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಅನಗತ್ಯ ಗೊಂದಲಗಳಿಗೆ ಒಳಗಾಗಬಾರದು ಎಂದು ತಿಳಿಸಲಾಗಿದೆ.
ಈ ಬಗ್ಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಬಿತ್ತರವಾಗುತ್ತಿವೆ. ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈ ಕೆಲ ಕ್ರಮಗಳನ್ನು ವಹಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೊಲೀಸ್ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ, ವ್ಯಾಪ್ತಿಯ ಅಂಕಿತಾಧಿಕಾರಿಗಳು ಮತ್ತು ಆಹಾರ ಸುರಕ್ಷತಾಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಪರಿಶೀಲನೆ ಸಂದರ್ಭದಲ್ಲಿ ರಾಜಸ್ಥಾನದಿಂದ ಬಂದ ರೈಲಿನ ಮೂಲಕ ಸ್ವೀಕೃತವಾದ ಪಾರ್ಸೆಲ್‌ಗಳನ್ನು ನಿಲ್ದಾಣದ ಹೊರ ಆವರಣದಲ್ಲಿ ಸಾಗಾಣಿಕ ವಾಹನದಲ್ಲಿರಿಸಿರುವುದು ಕಂಡುಬಂದಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಒಟ್ಟು 90 ಸಂಖ್ಯೆಯ ಪಾರ್ಸೆಲ್‌ಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿದೆ. ಇದರಲ್ಲಿ ಪ್ರಾಣಿಯ ಮಾಂಸವಿರುವುದು ಕಂಡುಬಂದಿರುತ್ತದೆ. ಯಾವ ಪ್ರಾಣಿಯ ಮಾಂಸವೆಂದು ಖಚಿತಪಡಿಸಿಕೊಳ್ಳಲು ಮಾಂಸದ ಮಾದರಿಯನ್ನು ಸಂಗ್ರಹಿಸಿ, ಆಹಾರ ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಸಲ್ಲಿಸಲಾಗಿರುತ್ತದೆ.
ವಿಶ್ಲೇಷಣಾ ಫಲಿತಾಂಶದ ಆಧಾರದ ಮೇಲೆ ಮುಂದಿನ ಕಾನೂನನಾತ್ಮಕ ಕ್ರಮಗಳನ್ನು ಜರುಗಿಸಲಾಗುತ್ತದೆ. ಪಾರ್ಸೆಗಳನ್ನು ಕಳುಹಿಸಿದವರ ಮತ್ತು ಸ್ವೀಕರಿಸಿದವರು ಎಫ್‌ಎಸ್‌ಎಸ್‌ಎಐ ಪರವಾನಗೆ ಸೇರಿಂದತೆ ವಿವರವಾದ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಲೋಪಲೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮಜರುಗಿಸಲಾಗುವುದು ಎಂದು ಆಹಾರ ಸುರಕ್ಷತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications