ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೀದಿ ನಾಯಿ ಹಾವಳಿ: ನಿಯಂತ್ರಣದ ಭರವಸೆ ಕೊಟ್ಟ ಬಿಬಿಎಂಪಿ
ಬೆಂಗಳೂರು, ಆ.23. ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿರುವ ನಿಮ್ಹಾನ್ಸ್ ಆಸ್ಪತ್ರೆ ಮತ್ತು ಅದರ ವಸತಿ ಸಂಕೀರ್ಣದಲ್ಲಿನ ಬೀದಿ ನಾಯಿ ಹಾವಳಿ ದಿನೇ ದಿನೇ ಮೀತಿ ಮೀರುತ್ತಿದೆ. ನೀವೇನಾದರೂ ಅಲ್ಲಿಗೆ ಹೋಗುವ ಹಾಗಿದ್ದರೆ ಹುಷಾರ್, ನೀವೂ ಅದರ ಬಾಯಿಗೆ ಆಹಾರವಾಗಬಹುದು.
ಇಂಥ ಬೀದಿ ನಾಯಿಗಳಿಂದ 9 ವರ್ಷದ ಬಾಲಕಿ ಕಚ್ಚಿಸಿಕೊಂಡಿದ್ದ ಘಟನೆ ಇತ್ತೀಚೆಗೆ ಸದ್ದು ಮಾಡಿತ್ತು. 9 ವರ್ಷದ ಬಾಲಕಿಯ ಪೋಷಕರು, ನಾಯಿಗಳಿಗೆ ಕಡಿವಾಣ ಹಾಕಲು ನಿರ್ದೇಶನ ನೀಡಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು.
ಇದೀಗ ಬೀದಿ ನಾಯಿಗಳನ್ನು ನಿಯಂತ್ರಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನಿಮ್ಹಾನ್ಸ್ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಆ ಕುರಿತ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದು ಮಾಸ್ಟರ್ ಜಿಷ್ಣು ಸಲ್ಲಿಸಿದ್ದ ಅರ್ಜಿಯು ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತು.
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ಪ್ರತಿವಾದಿಗಳಾದ ಬಿಬಿಎಂಪಿ ಮತ್ತು ನಿಮ್ಹಾನ್ಸ್ ಸಂಸ್ಥೆಗಳೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ನಿರ್ದೇಶನ ನೀಡುವ ಅಗತ್ಯವಿಲ್ಲವೆಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿತು.

ಪರಿಹಾರಕ್ಕೆ ಮಾರ್ಗಸೂಚಿ: ಜೊತೆಗೆ ಪ್ರಾಣಿಗಳ ಜನನ ನಿಯಂತ್ರಣ ನಿಯಮ 2001ರ ಪ್ರಕಾರ ರೋಗಗ್ರಸ್ಥ ಅಥವಾ ಕಿವುಡ ಬೀದಿ ನಾಯಿಗಳನ್ನು ಅವುಗಳು ಸಾಯುವವರೆಗೆ ಐಸೋಲೇಷನ್ ಕೇಂದ್ರಗಳಲ್ಲಿಡಬೇಕು. ಅಂತಹ ನಾಯಿಗಳೇ ಮಕ್ಕಳೂ ಸೇರಿದಂತೆ ವಯಸ್ಕ ಜನರ ಮೇಲೇರಗಿ ಹೆಚ್ಚಿನ ಕಾಟ ನೀಡುವುದರಿಂದ ಅವುಗಳನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ನ್ಯಾಯಾಲಯ ಆದೇಶಿಸಿದೆ.
ಅಲ್ಲದೆ, ಬೀದಿ ನಾಯಿ ಕಡಿತಕ್ಕೆ ತುತ್ತಾದವರಿಗೆ ಪರಿಹಾರ ನೀಡುವ ಸಂಬಂಧ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ ನ್ಯಾಯಾಲಯ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಮೇಲ್ವಿಚಾರಣೆಗೆ ಸಮಿತಿ ರಚನೆ: "ಸಂಸ್ಥೆಯ ಆವರಣದಲ್ಲಿ ಸೌಹಾರ್ದಯುತ ವಾತಾವರಣವನ್ನು ನಿರ್ಮಿಸಲು ಮತ್ತು ಸ್ಥಳೀಯ ಬಿಬಿಎಂಪಿ ಅಧಿಕಾರಿಗಳ ಸಂಪರ್ಕದಲ್ಲಿದ್ದುಕೊಂಡು ಪ್ರಾಣಿಗಳ ಜನನ ನಿಯಂತ್ರಣ ಮತ್ತು ಲಸಿಕೀಕರಣ ನೋಡಿಕೊಳ್ಳಲು 2021ರ ಅ.27ರಂದು ಸಮಿತಿಯನ್ನು ರಚನೆ ಮಾಡಲಾಗಿದೆ'' ನಿಮ್ಹಾನ್ಸ್ ನಿರ್ದೇಶಕರೂ ಸಹ ಹೈಕೋರ್ಟ್‌ಗೆ ತಮ್ಮ ಹೇಳಿಕೆ ಸಲ್ಲಿಸಿದ್ದಾರೆ.
ಅಲ್ಲದೆ, ಸಮಿತಿ ಇಡೀ ಸಂಸ್ಥೆ ಮತ್ತು ಅದರ ವಸತಿ ಸಂಕೀರ್ಣದ ಆವರಣದಲ್ಲಿನ ಬೀದಿ ನಾಯಿಗಳ ಮೇಲೆ ನಿಗಾವಹಿಸಲಿದೆ. ಜೊತೆಗೆ ಬೀದಿಗಳ ಹಾವಳಿ ನಿಯಂತ್ರಣಕ್ಕೆ ಸಾಧ್ಯವಾದ ಎಲ್ಲಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.
"ನಿಮ್ಹಾನ್ಸ್ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಕುರಿತು ದೂರು ಸ್ವೀಕರಿಸಿದ ಕೂಡಲೇ ತಾವೇ ಸ್ಥಳಕ್ಕೆ ಖುದ್ದು ಭೇಟಿಯಾಗಿ ನಾಯಿಗಳನ್ನು ಹಿಡಿಯಲು ಮತ್ತು ಅವುಗಳಿಗೆ ರೇಬಿಸ್ ಚುಚ್ಚುಮದ್ದು ಕೊಡಿಸಲು ಮತ್ತು ಅವುಗಳ ಸಂತತಿ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ'' ಎಂದು ಈ ಕುರಿತಂತೆ ಆಕ್ಷೇಪಣೆ ಸಲ್ಲಿಸಿರುವ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಹೇಳಿದ್ದಾರೆ.
3 ಲಕ್ಷಕ್ಕಿಂತ ಹೆಚ್ಚಿನ ಬೀದಿನಾಯಿಗಳಿವೆ:
ಬಿಬಿಎಂಪಿ ಅಂಕಿ ಅಂಶ ಪ್ರಕಾರ, 2020 ರಿಂದ ಬೆಂಗಳೂರಿನಲ್ಲಿ ಬೀದಿನಾಯಿಗಳಿಂದ 50,000 ಕ್ಕೂ ಹೆಚ್ಚು ದಾಳಿಗಳು ನಡೆದಿವೆ. 2022ರ ವರ್ಷದಲ್ಲಿ ಜುಲೈವರೆಗೆ ಸುಮಾರು 10,000 ಜನರಿಗೆ ಬೀದಿ ನಾಯಿಗಳು ಕಚ್ಚಿವೆ.
ಬಿಬಿಎಂಪಿಯ ಪಶುಸಂಗೋಪನಾ ಇಲಾಖೆಯು ನಗರದಲ್ಲಿ ಬೀದಿ ನಾಯಿಗಳ ಸಮಸ್ಯೆಗಳನ್ನು ನಿಭಾಯಿಸುತ್ತದೆ. ನಾಯಿಗಳನ್ನು ಸಂತಾನಹರಣ ಮಾಡುವ ಅನಿಮಲ್ ಬರ್ತ್ ಕಂಟ್ರೋಲ್ (ಎಬಿಸಿ) ನಂತಹ ವಿಧಾನಗಳನ್ನು ಅಳವಡಿಸಿಕೊಂಡಿದ್ದರೂ, ಇಲಾಖೆಯು ಬೀದಿನಾಯಿಗಳನ್ನು ಪತ್ತೆಹಚ್ಚಲು ಮತ್ತು ಹಿಡಿಯಲು ಇನ್ನೂ ಹೆಣಗಾಡುತ್ತಿದೆ. ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಡಾ.ಕೆ.ಪಿ.ರವಿಕುಮಾರ್ ಮಾತನಾಡಿ, ಬೀದಿನಾಯಿಗಳನ್ನು ಹಿಡಿಯುವುದು ಮತ್ತು ಅವುಗಳ ಸಂತಾನೋತ್ಪತ್ತಿ ಸಾಮರ್ಥ್ಯ ಬಿಬಿಎಂಪಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ.
ಬಿಬಿಎಂಪಿಯ ಅಂದಾಜಿನ ಪ್ರಕಾರ, ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ 3 ಲಕ್ಷಕ್ಕಿಂತ ಹೆಚ್ಚಿದೆ. ಇದರಲ್ಲಿ, ಬಿಬಿಎಂಪಿ 1,42,544 ಬೀದಿ ನಾಯಿಗಳ ಸಂತಾನಹರಣ ಮಾಡಿದೆ. 57,481 ನಾಯಿಗಳಿಗೆ ಜೂನ್ 2022 ರವರೆಗೆ ಸಂತಾನಹರಣ ಮಾಡಲಾಗಿದೆ. ಆದರೂ, ಬೀದಿ ನಾಯಿಗಳ ಸಂಖ್ಯೆಯ ಅರ್ಧದಷ್ಟು ನಾಯಿಗಳಿಗೆ ಇನ್ನೂ ಸಂತಾನಹರಣ ಮಾಡಲಾಗಿಲ್ಲ. ಈ ವರ್ಷ ಜೂನ್‌ವರೆಗೆ 1,67,368 ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಲಾಗಿದೆ ಎಂದು ಬಿಬಿಎಂಪಿ ಅಂಕಿ ಅಂಶ ತಿಳಿಸಿದೆ. ಸುಲಭವಾಗಿ ಗುರುತಿಸಲು, ನಾಯಿಗೆ ಸಂತಾನಹರಣ ಮತ್ತು ಲಸಿಕೆ ಹಾಕಿದ ನಂತರ, ಬಿಬಿಎಂಪಿ ಅಂಥ ನಾಯಿಗಳ ಎರಡು ಕಿವಿಗಳನ್ನು ಕ್ಲಿಪ್ ಮಾಡುತ್ತದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications