ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಕಿರಿಕ್: ಕ್ವಾರಂಟೈನ್ ಗೆ ಹೋಗಲು ನಕಾರ

|
Google Oneindia Kannada News

ಬೆಂಗಳೂರು, ಮೇ 25: ಎರಡು ತಿಂಗಳ ಬಳಿಕ ಭಾರತದಲ್ಲಿ ದೇಶೀಯ ವಿಮಾನಯಾನ ಪುನರಾರಂಭಗೊಂಡಿದೆ. ಲಾಕ್ ಡೌನ್ ನಿಂದಾಗಿ ದೇಶದ ವಿವಿದೆಡೆ ಸಿಲುಕಿದ್ದವರು ಇಂದು ಫ್ಲೈಟ್ ಮೂಲಕ ಬೆಂಗಳೂರಿಗೆ ಮರಳುತ್ತಿದ್ದಾರೆ.

Recommended Video

ಕುರಿ ಕಳೆದುಕೊಂಡ ಕುಟುಂಬಕ್ಕೆ 50 ಸಾವಿರ ಕೊಟ್ಟ ಕಾಂಗ್ರೆಸ್ ನಾಯಕ | Chitradurga | Oneindia Kannada

ದೆಹಲಿ, ಚೆನ್ನೈ ಸೇರಿದಂತೆ ಹಲವು ಕಡೆಯಿಂದ ವಿಮಾನಗಳು ಇಂದು ಬೆಳಗ್ಗಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದೆ. ಹಾಗೆ, ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ ವಿಶೇಷ ಮಾರ್ಗಸೂಚಿಗಳನ್ನು ಕರ್ನಾಟಕ ಸರ್ಕಾರ ನೀಡಿದೆ.

ದೇಶೀಯ ವಿಮಾನಯಾನ ಆರಂಭ: ಕರ್ನಾಟಕಕ್ಕೆ ಬರುವವರಿಗೆ 'ಈ' ನಿಯಮಗಳು ಕಡ್ಡಾಯ!ದೇಶೀಯ ವಿಮಾನಯಾನ ಆರಂಭ: ಕರ್ನಾಟಕಕ್ಕೆ ಬರುವವರಿಗೆ 'ಈ' ನಿಯಮಗಳು ಕಡ್ಡಾಯ!

ಮಾರ್ಗಸೂಚಿ ಅನ್ವಯ 7 ದಿನ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್. ಬಳಿಕ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ 7 ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ನಲ್ಲಿರಬೇಕು.

ಆದರೆ, ಇಂದು ಬೆಂಗಳೂರಿಗೆ ಬಂದಿಳಿದ ಕೆಲ ಪ್ರಯಾಣಿಕರು ಕ್ವಾರಂಟೈನ್ ನಲ್ಲಿರಲು ವಿರೋಧ ವ್ಯಕ್ತಪಡಿಸಿದರು. ಇದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಕಿರಿಕ್ ಉಂಟಾಯಿತು.

ವಿಮಾನ ನಿಲ್ದಾಣದಲ್ಲಿ ವಾಗ್ವಾದ

ವಿಮಾನ ನಿಲ್ದಾಣದಲ್ಲಿ ವಾಗ್ವಾದ

ದೆಹಲಿಯಿಂದ ಬಂದ ವಿಮಾನದಲ್ಲಿದ್ದ ಕೆಲ ಪ್ರಯಾಣಿಕರು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ನಲ್ಲಿರಲು ಒಪ್ಪಲಿಲ್ಲ. ''ನಾವು ಪಂಜಾಬ್ ನಿಂದ ದೆಹಲಿಗೆ ಹೋಗಿ, ಅಲ್ಲಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದೇವೆ. ಹೀಗಾಗಿ ನಾವು ಕ್ವಾರಂಟೈನ್ ಗೆ ಹೋಗುವುದಿಲ್ಲ'' ಎಂಬುದು ಪ್ರಯಾಣಿಕರ ವಾದವಾಗಿತ್ತು.

ಮಾರ್ಗಸೂಚಿಯಲ್ಲೇನಿದೆ.?

ಮಾರ್ಗಸೂಚಿಯಲ್ಲೇನಿದೆ.?

ಕರ್ನಾಟಕ ಸರ್ಕಾರದ ಮಾರ್ಗಸೂಚಿ ಅನ್ವಯ ಹೆಚ್ಚು ಪ್ರಕರಣಗಳು ದಾಖಲಾದ ಪ್ರದೇಶಗಳಿಂದ ಪ್ರಯಾಣ ಮಾಡುವವರಿಗೆ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಕಡ್ಡಾಯ. ಕಡಿಮೆ ಪ್ರಕರಣಗಳು ದಾಖಲಾದ ಪ್ರದೇಶಗಳಿಂದ ಪ್ರಯಾಣ ಮಾಡುವವರಿಗೆ ಹೋಮ್ ಕ್ವಾರಂಟೈನ್ ಕಡ್ಡಾಯ. ಪಂಜಾಬ್ ನಲ್ಲಿ ಕಡಿಮೆ ಪ್ರಕರಣ ದಾಖಲಾಗಿದೆ. ಆದರೆ, ದೆಹಲಿಯಲ್ಲಿ ಹೆಚ್ಚು ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಹೀಗಾಗಿ, ದೆಹಲಿಯಿಂದ ಪ್ರಯಾಣ ಮಾಡುವವರೆಲ್ಲರಿಗೂ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅನಿವಾರ್ಯ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.

ದೆಹಲಿಯಿಂದ ಏಕಾಂಗಿಯಾಗಿ ಬೆಂಗಳೂರಿಗೆ ಬಂದು ತಾಯಿಯ ಮಡಿಲು ಸೇರಿದ 5 ವರ್ಷದ ಪೋರ!ದೆಹಲಿಯಿಂದ ಏಕಾಂಗಿಯಾಗಿ ಬೆಂಗಳೂರಿಗೆ ಬಂದು ತಾಯಿಯ ಮಡಿಲು ಸೇರಿದ 5 ವರ್ಷದ ಪೋರ!

ಎಚ್ಚರಿಕೆಗೆ ಮಣಿದ ಪ್ರಯಾಣಿಕರು

ಎಚ್ಚರಿಕೆಗೆ ಮಣಿದ ಪ್ರಯಾಣಿಕರು

ಇಂದು ಬೆಂಗಳೂರಿಗೆ ಬಂದಿಳಿದ ಪಂಜಾಬ್ ಮೂಲದವರು, ''ಹೋಮ್ ಕ್ವಾರಂಟೈನ್ ನಲ್ಲಿರುತ್ತೇವೆ'' ಎಂದು ಪಟ್ಟು ಹಿಡಿದರು. ಆದರೆ, ಅದಕ್ಕೆ ಅಧಿಕಾರಿಗಳು ಒಪ್ಪಲಿಲ್ಲ. ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ ಮೇಲೆ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಗೆ ಪ್ರಯಾಣಿಕರು ಒಪ್ಪಿಕೊಂಡರು.

ದೇಶೀಯ ವಿಮಾನ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ

ದೇಶೀಯ ವಿಮಾನ ಪ್ರಯಾಣಿಕರಿಗೆ ಸರ್ಕಾರದ ಮಾರ್ಗಸೂಚಿ

* ಮಹಾರಾಷ್ಟ್ರ, ಗುಜರಾತ್, ತಮಿಳು ನಾಡು, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ ಮುಂತಾದ ಹೆಚ್ಚು ಪ್ರಕರಣಗಳು ದಾಖಲಾಗಿರುವ ರಾಜ್ಯಗಳಿಂದ ಬರುವವರು 7 ದಿನಗಳ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ನಲ್ಲಿರಬೇಕು. ಬಳಿಕ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿರುವುದು ಕಡ್ಡಾಯ.

* ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕು.

* ಉಳಿದ ರಾಜ್ಯಗಳಿಂದ ಬಂದವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿರಬೇಕು.

* ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಗರ್ಭಿಣಿಯರು, 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು, ಅನಾರೋಗ್ಯದಿಂದ ಬಳಲುತ್ತಿರುವವರು, 10 ವರ್ಷದ ಒಳಗಿನ ಮಕ್ಕಳು ಹೋಮ್ ಕ್ವಾರಂಟೈನ್ ನಲ್ಲಿರಬೇಕು.

* ಪ್ರಯಾಣಕ್ಕೂ ಮುನ್ನ ICMR ನಿಂದ ಅನುಮತಿ ಪಡೆದಿರುವ ಲ್ಯಾಬ್ ಗಳಿಂದ ಕೋವಿಡ್-19 ನೆಗೆಟಿವ್ ಟೆಸ್ಟ್ ರಿಪೋರ್ಟ್ ತಂದ ಬಿಸಿನೆಸ್ ಪ್ಯಾಸೆಂಜರ್ ಗಳಿಗೆ ಕ್ವಾರಂಟೈನ್ ಇರುವುದಿಲ್ಲ.

* ಪ್ರಯಾಣ ಮಾಡುವವರೆಲ್ಲ ಸೇವಾ ಸಿಂಧು ಪೋರ್ಟಲ್ ನಿಂದ ಇ-ಪಾಸ್ ಪಡೆದಿರಬೇಕು.

* ಮೆಡಿಕಲ್ ಪ್ರೊಫೆಷನಲ್ಸ್, ನರ್ಸ್, ಸ್ಟಾಫ್ ಸೇರಿದಂತೆ ವೈದ್ಯಕೀಯ ಸಿಬ್ಬಂದಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಕಡ್ಡಾಯ.

* ಡಿಫೆನ್ಸ್, ಪ್ಯಾರಾ ಮಿಲಿಟರಿ, ಡಿ.ಆರ್.ಡಿ.ಓ, ಇಸ್ರೋ ಸಿಬ್ಬಂದಿಗೆ 14 ದಿನಗಳ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಕಡ್ಡಾಯ.

* ಗ್ರಾಮೀಣ ಪ್ರದೇಶಕ್ಕೆ ತೆರಳುವವರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಕಡ್ಡಾಯ.

English summary
Domestic Flight Operations Resume: Few Passenger are not ready for Institutional Quarantine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X