ಭವಿಷ್ಯದ ರಾಜ್ಯ ನಾಯಕತ್ವದ ಬಗ್ಗೆ ಬಹಿರಂಗ ಹೇಳಿಕೆ ಬೇಡ: ಕಾಂಗ್ರೆಸ್

ಬೆಂಗಳೂರು, ನವೆಂಬರ್ 09:ಭವಿಷ್ಯದ ರಾಜ್ಯ ನಾಯಕತ್ವದ ಬಗ್ಗೆ ಬಗ್ಗೆ ಬಹಿರಂಗ ಹೇಳಿಕೆ ನೀಡುವುದು ಬೇಡ ಎಂದು ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನಾಯಕರು ಮತ್ತು ಕಾರ್ಯಕರ್ತರಿಗೆ ಒತ್ತಾಯಿಸಿದೆ.

ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರದಲ್ಲಿ ಯಾರು ಮುಖ್ಯಸ್ಥರಾಗುತ್ತಾರೆ ಎಂಬ ಬಗ್ಗೆ ಒಬ್ಬೊಬ್ಬ ನಾಯಕರು ಒಂದೊಂದು ಬಗೆಯ ಹೇಳಿಕೆ ನೀಡಿದ್ದ ನಂತರ ಇದೀಗ ಪಕ್ಷದ ಭವಿಷ್ಯದ ರಾಜ್ಯ ನಾಯಕತ್ವದ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡಬೇಡಿ ಎಂದು ಹೇಳಲಾಗಿದೆ.

ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಪಕ್ಷವನ್ನು ಸಂಘಟಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಮತ್ತು ನಮ್ಮ ರಾಜ್ಯದ ಹಿತದೃಷ್ಟಿಯಿಂದ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಕೆಲಸ ಮಾಡಿದರೆ ಉತ್ತಮ.

Don’t Comment On Future Leadership: Karnataka Congress

ಮಾಜಿ ಸಚಿವ ಮತ್ತು ಶಾಸಕ ಜಮೀರ್ ಅಹಮದ್ ಖಾನ್ ಇತ್ತೀಚೆಗೆ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದರೆ, ಅವರ ಪಕ್ಷದ ಕೆಲವು ಸಹೋದ್ಯೋಗಿಗಳಾದ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಶಾಸಕಿ ಸೌಮ್ಯಾ ರೆಡ್ಡಿ, ಮತ್ತು ಹನುಮಂತರಯಪ್ಪ ಅವರು ಶಿವಕುಮಾರ್ ಉನ್ನತ ಹುದ್ದೆಯನ್ನು ಅಲಂಕರಿಸುತ್ತಾರೆ ಎಂದು ಹೇಳಿದ್ದರು.

ನಾಯಕತ್ವದ ಸಂಬಂಧಿತ ಪ್ರಶ್ನೆಯನ್ನು ಆ ಪ್ರಶ್ನೆ ಉದ್ಭವಿಸಿದಾಗ ಕೇಳುವುದು ಜಾಣತನ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅವರ ಬೆಂಬಲಿಗರು ಹೇಳಿಕೊಳ್ಳುತ್ತಿರುವ ಹಿನ್ನೆಲೆ ಈ ಸೂಚನೆ ಗಮನ ಸೆಳೆದಿದೆ.

ನವೆಂಬರ್ 5 ರಂದು ನಡೆದ ಸಭೆಯಲ್ಲಿ, ಕೆಪಿಸಿಸಿ ಶಿಸ್ತು ಸಮಿತಿ ಶಾಸಕಾಂಗ ಪಕ್ಷದ ಭವಿಷ್ಯದ ನಾಯಕತ್ವದ ಪ್ರಶ್ನೆಯ ಬಗ್ಗೆ ಪಕ್ಷದ ಮುಖಂಡರು ವ್ಯಕ್ತಪಡಿಸುತ್ತಿರುವ ವಿಭಿನ್ನ ಅಭಿಪ್ರಾಯಗಳನ್ನು ಕಳವಳದಿಂದ ಆಲಿಸಿದೆ ಎಂದು ಸಮಿತಿ ಅಧ್ಯಕ್ಷ ಕೆ ರಹಮಾನ್ ಖಾನ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+