Bengaluru 2nd Airport: ಎರಡನೇ ವಿಮಾನ ನಿಲ್ದಾಣದ ಬಗ್ಗೆ ಜಿ.ಪರಮೇಶ್ವರ ಮಹತ್ವದ ಮಾಹಿತಿ
ಬೆಂಗಳೂರು, ಫೆಬ್ರವರಿ 07: ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರ ಮಧ್ಯೆ ತೀವ್ರ ಪೈಪೋ ಟಿ ಇದೆ. ಕರ್ನಾಟಕ ಸರ್ಕಾರ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಪ್ರಕ್ರಿಯೆಗೆ ವೇಗ ನೀಡಿದೆ. ಇದರ ಪರಿಣಾಮ ಬಿಡದಿ, ನೆಲಮಂಗಲ ಸೇರಿದಂತೆ ಹಲವು ಸ್ಥಳಗಳ ಬಗ್ಗೆ ತೀರಾ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಗೃಹ ಸಚಿವರು ಮಹತ್ವ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವರು, ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿಗೆ ನೀಡಬೇಕು. ತುಮಕೂರು ಬಳಿ ಏರ್‌ಪೋರ್ಟ್ ನಿರ್ಮಾಣವಾದರೆ ಹತ್ತಾರು ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಹೀಗಾಗಿ ತುಮಕೂರಿಗೆ ವಿಮಾನ ನಿಲ್ದಾಣ ಕೇಳಿದ್ದೇವೆ. ಈವರೆಗೆ ಯಾವ ಜಾಗದಲ್ಲಿ ನಿರ್ಮಾಣವಾಗಬೇಕು ಎಂಬುದು ನಿರ್ಧಾರವಾಗಿಲ್ಲ.

ಎರಡನೇ ವಿಮಾನ ನಿಲ್ದಾಣ ತುಮಕೂರದಲ್ಲಿ ಆಗಲಿ ಎಂಬುದು ನಮ್ಮ ಬೇಡಿಕೆ. ಇದನ್ನು ಸರ್ಕಾರದ ಮುಂದೆ ಇಟ್ಟಿದ್ದೇವೆ. ಅಂತಿಮ ನಿರ್ಣಯವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಅದಕ್ಕು ಮೊದಲೇ ಈ ಜಾತ, ಆ ಜಾಗ ಎಂದು ಅನಗತ್ಯ ಚರ್ಚೆ ನೀಡುವುದು ಬೇಡ. ನೀಡಿದರೆ ಗೊಂದಲ ಸೃಷ್ಟಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.
ಅನಗತ್ಯ ಚರ್ಚಿಸಿ ಗೊಂದಲ ಸೃಷ್ಟಿಸಬೇಡಿ
ಬೇರೆಯವರು ತಮ್ಮದೇ ಆದ ಬೇಡಿಕೆ ಇಟ್ಟಿರಬಹುದ. ಇಂತಲ್ಲೇ ಬೆಂಗಳೂರು ಏರ್‌ಪೋರ್ಟ್ ನಿರ್ಮಿಸುವಂತೆ ಬೇಡಿಕೆ ಇಟ್ಟಿರಬಹುದು. ಆದರೆ ಅನಗತ್ಯ ಚರ್ಚೆ ಮಾಡಿ ಗೊಂದಲ ಉಂಟು ಮಾಡುವುದು ಬೇಡ ಎಂದು ತಿಳಿಸಲಾಗಿದೆ.
ಕರ್ನಾಟಕದಂತೆ ನೆರೆಯ ತಮಿಳುನಾಡು ರಾಜ್ಯ ಸರ್ಕಾರ ತನ್ನ ವ್ಯಾಪ್ತಿಯಲ್ಲಿ ಹೊಸ ಏರ್‌ಪೋರ್ಟ್ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆ ಮೊದಲಿನಿಂದಲೂ ಇಟ್ಟಿದೆ. ಪ್ರಸ್ತಾವನೆ ಕಳುಹಿಸಿದ್ದಾರೆ ಎಂದು ವಿವರಿಸಿದರು.

ಬೆಂಗಳೂರಿನ ಹಾಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿದೆ. ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯತೆ ಇದೆ. ಬೆಂಗಳೂರಿಗೆ ಬೇರೆ ಬೇರೆ ದೇಶಗಳಿಂದ ಅನೇಕ ವಿಮಾನಗಳು ಬರುತ್ತವೆ. ವಿಮಾನಯಾನ ಅವಲಂಬನೆ ಸಹ ಹೆಚ್ಚಾಗತೊಡಗಿದೆ.
ಹೀಗಾಗಿ ಬೆಂಗಳೂರಿನಲ್ಲೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣವಾಗಬೇಕು. ಬೆಂಗಳೂರು ಮೆಟ್ರೋ ನಗರವಾಗಿದೆ. ಜನಸಂಖ್ಯೆ ಹೆಚ್ಚಾಗುತ್ತಿದೆ. ಮುಂಬೈ, ದೆಹಲಿಯಂತಹ ಮಹಾನಗರಗಳಲ್ಲಿ ಎರಡೆರಡು ವಿಮಾನ ನಿಲ್ದಾಣಗಳೂ ಇವೆ. ಅದೇ ರೀತಿ ಕರ್ನಾಟಕ ರಾಜಧಾನಿ ಬೆಂಗಳೂರಿಗೂ ಎರಡು ಏರ್‌ಪೋರ್ಟ್ ಅಗತ್ಯತೆ ಇದೆ.
ಇದೆಲ್ಲ ಮನಗಂಡು ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈ ಬಗ್ಗೆ ಏನು ತಿರ್ಮಾನ ಬರುತ್ತದೋ ನೋಡಬೇಕು ಎಂದು ಹೇಳಿದ್ದಾರೆ.
ಜಾತಿ ಅಂತಿಮ ತಿರ್ಮಾನ?
ಮಾಜಿ ಪ್ರಧಾನಿ ದೇವೇಗೌಡ ಅವರೇ ಹೇಳಿರುವಂತೆ ಅವರ ಕಾಲದಲ್ಲಿ ಈಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಿಡದಿಯಲ್ಲಿ ನಿರ್ಮಿಸುವ ಪ್ರಸ್ತಾವನೆ ಬಂದಿತ್ತು. ಅಂದು ದೇವನಹಳ್ಳಿಯಲ್ಲಿ ನಿರ್ಮಿಸಲು ಅನುಮೋದನೇ ನೀಡಲಾಯಿತು. ಇದೀಗ ಮತ್ತೆ ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಬಿಡದಿ ಜಾಗ ಫೈನಲ್ ಮಾಡುವಂತೆ ಬೇಡಿಕೆ ಬಂದಿವೆ. ಇನ್ನೂ ಕೆಲವರು ತುಮಕೂರು ಬಳಿ, ಹಾಸನ ರಸ್ತೆಯ ನೆಲಮಂಗಲ ಸಮೀಪ ಮಾಡುವಂತೆ ಕೋರಿದ್ದಾರೆ. ಈ ಬಗ್ಗೆ ಸರ್ಕಾರಗಳು ಮುಂದೆ ಏನು ತಿರ್ಮಾನಿಸುತ್ತವೆ ಎಂದು ಕಾದು ನೋಡಬೇಕಿದೆ.
ಇತ್ತ ಎಚ್‌ಡಿ ದೇವೇಗೌಡ ಅವರು ಸಹ ಕರ್ನಾಟಕದ ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯತೆ ಇದೆ. ತಮಿಳುನಾಡು ಸರ್ಕಾರ ಹೊಸೂರಿನಲ್ಲಿ ಏರ್‌ಪೋರ್ಟ್ ನಿರ್ಮಿಸಲು ಪ್ರಸ್ತಾಪಿಸಿದೆ. ಅನುಮೋದನೆ ನೀಡುವಾಗ ಕೇಂದ್ರ ಸರ್ಕಾರ ಕರ್ನಾಟಕದ ಬೆಂಗಳೂರ ಎರಡನೇ ಏರ್‌ಪೋರ್ಟ್ ನಿರ್ಮಿಸಲು ಅವಕಾಶ ಮಾಡಿಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.












Click it and Unblock the Notifications