Mahadayi dispute: ಮಹದಾಯಿ ವಿಚಾರದಲ್ಲಿ ಡಬಲ್ ಗೇಮ್ ಬಿಡಿ; ಬಿಜೆಪಿಗೆ ಸಿದ್ದರಾಮಯ್ಯ ತರಾಟೆ
ಬೆಂಗಳೂರು, ಜ. 12: ಕಳಸಾ ಬಂಡೂರಿ ಯೋಜನೆಯ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಮತ್ತೆ ಮಹದಾಯಿ ನದಿ ನೀರು ವಿವಾದ ಹೆಚ್ಚಾಗಲು ಕಾರಣವಾಗಿದೆ. ಗುರುವಾರ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನೀರಾವರಿ ಸಚಿವ ಗಜೇಂದ್ರ ಸಿಂಗ್ ಭೇಟಿ ಮಾಡಿ ಅನುಮತಿ ಹಿಂಪಡೆಯುವಂತೆ ಮನವಿ ಮಾಡಿವೆ. ಇದಕ್ಕೆ ಆಶಾದಾಯಕ ಭರವಸೆ ಸಿಕ್ಕಿದೆ ಎನ್ನಲಾಗಿದೆ.
ಹೀಗಾಗಿ ಕೇಂದ್ರ ಸರ್ಕಾರ ಡಬಲ್ ಗೇಮ್ ಆಡುವುದನ್ನು ಬಿಟ್ಟು ಮಹದಾಯಿ ನದಿ ನೀರಿನ ಯೋಜನೆ ಬಗ್ಗೆ ಸ್ಪಷ್ಟ ನಿಲುವನ್ನು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಅವರು, "ಪ್ರಧಾನಿ ನರೇಂದ್ರ ಮೋದಿಯವರೇ, ಮಹದಾಯಿ ನದಿನೀರಿನ ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಸ್ಪಷ್ಟ ನಿಲುವನ್ನು ಘೋಷಿಸಿಬಿಡಿ. ಎರಡು ವರ್ಷ ಹತ್ತು ತಿಂಗಳ ವರೆಗೆ ಮುಚ್ಚಿಟ್ಟು ಈಗ ಅನುಮತಿ ನೀಡಿರುವುದು ನ್ಯಾಯದ ತೀರ್ಮಾನವೇ..? ಅನ್ಯಾಯದ ಆಟವೇ..?" ಎಂದು ಪ್ರಶ್ನಿಸಿದ್ದಾರೆ.

"ಗೋವಾ ಮುಖ್ಯಮಂತ್ರಿಗಳ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನೀರಾವರಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿ ಡಿಪಿಆರ್‌ಗೆ ನೀಡಿರುವ ಅನುಮತಿಯನ್ನು ಹಿಂದೆಗೆದುಕೊಳ್ಳಲು ಮನವಿ ಮಾಡಿದೆ. ಗೃಹಸಚಿವ ಅಮಿತ್ ಶಾ ಅವರು ಆಶಾದಾಯಕ ಭರವಸೆ ನೀಡಿದ್ದಾರಂತೆ. ಏನಿದು ಡಬಲ್ ಗೇಮ್..?" ಎಂದಿದ್ದಾರೆ.
ಗೋವಾ ಮುಖ್ಯಮಂತ್ರಿಗಳ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ @AmitShah ಮತ್ತು ನೀರಾವರಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿ ಡಿಪಿಆರ್ ಗೆ ನೀಡಿರುವ ಅನುಮತಿಯನ್ನು ಹಿಂದೆಗೆದುಕೊಳ್ಳಲು ಮನವಿ ಮಾಡಿದೆ. ಗೃಹಸಚಿವ ಅಮಿತ್ ಶಾ ಅವರು ಆಶಾದಾಯಕ ಭರವಸೆ ನೀಡಿದ್ದಾರಂತೆ. ಏನಿದು ಡಬಲ್ ಗೇಮ್? 2/4#Mahadayi pic.twitter.com/rr8Zlfgf07
— Siddaramaiah (@siddaramaiah) January 12, 2023
"ಮಹದಾಯಿ ನದಿ ನೀರಿನ ವಿವಾದ ಇತ್ಯರ್ಥಕ್ಕಾಗಿ ಗೋವಾ ಮುಖ್ಯಮಂತ್ರಿಗಳು ಪ್ರಾಧಿಕಾರ ರಚಿಸಲು ಕೇಳಿಕೊಂಡಿದ್ದಾರಂತೆ. ಇದು ವಿಳಂಬ ನೀತಿಯ ಕಾರ್ಯತಂತ್ರ. ಗೋವಾ ಸರ್ಕಾರದ ಒತ್ತಡಕ್ಕೆ ಮಣಿದು ಡಿಪಿಆರ್ ಗೆ ನೀಡಿರುವ ಅನುಮತಿಯನ್ನು ವಾಪಸು ಪಡೆಯಬಾರದು" ಎಂದು ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
"ರಾಜ್ಯದ ಮುಖ್ಯಮಂತ್ರಿಗಳು ಈ ಬೆಳವಣಿಗೆಯನ್ನು ಗಮನಿಸಿದ್ದಾರೆಂದು ನಂಬಿದ್ದೇನೆ. ಈ ರಾಜಕೀಯ ಜಿದ್ದಾಜಿದ್ದಿಯಲ್ಲಿ ಬಲಶಾಲಿಯಾಗಿದ್ದವರೇ ಗೆಲ್ಲುವುದು ರಾಜನೀತಿ. ಮುಖ್ಯಮಂತ್ರಿಗಳು ಮತ್ತು ರಾಜ್ಯದ ಇಪ್ಪತ್ತೈದು ಬಿಜೆಪಿ ಸಂಸದರು ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು." ಎಂದು ಒತ್ತಾಯಿಸಿದ್ದಾರೆ.
गोवा के यशस्वी मुख्यमंत्री श्री प्रमोद सावंत जी अपने प्रतिनिधिमंडल के साथ आज दिल्ली आवास पर मुलाकात के लिए आए।
— Gajendra Singh Shekhawat (@gssjodhpur) January 12, 2023
हमारे मध्य महादयी नदी के जल वितरण के संदर्भ में विचार विनिमय हुआ। निश्चित ही इस मुद्दे का समाधान शीघ्र निकल आएगा। pic.twitter.com/CLs5qOjY0a
ಇನ್ನು, ಗುರುವಾರ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗ ಗುರುವಾರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ಬಗ್ಗೆ ಅವರೇ ಟ್ವೀಟ್ ಮಾಡಿದ್ದಾರೆ.
"ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜಿ ಅವರು ತಮ್ಮ ನಿಯೋಗದೊಂದಿಗೆ ಇಂದು ದೆಹಲಿ ನಿವಾಸದಲ್ಲಿ ನನ್ನೊಂದಿಗೆ ಸಭೆ ನಡೆಸಿದರು. ನಮ್ಮ ನಡುವೆ ಮಹದಾಯಿ ನದಿ ನೀರು ಹಂಚಿಕೆ ಕುರಿತು ವಿಚಾರ ವಿನಿಮಯ ನಡೆಯಿತು. ಈ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗುವುದು ಖಚಿತ" ಎಂದಿದ್ದಾರೆ.











Click it and Unblock the Notifications