IISC: ಬೆಂಗಳೂರಲ್ಲಿ ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ಚಾಲನೆ
ಬೆಂಗಳೂರು, ಡಿಸೆಂಬರ್ 09: ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ಲಿಂಕ್ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರವು ಬೆಂಗಳೂರಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು.
ಐಟಿ ಬಿಟಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿವೆ. ಇವು ದೇಶದಲ್ಲಿಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ ಎಂದರು.
ಮುಂಬರುವ ವರ್ಷಗಳಲ್ಲಿ ಆಯಾ ವ್ಯಕ್ತಿಗಳ ಶರೀರ ಸ್ವಭಾವವನ್ನು ಆಧರಿಸಿ, ರೋಗಗಳನ್ನು ಗುಣಪಡಿಸುವತಹ ನಿರ್ದಿಷ್ಟ ಬಗೆಯ ಚಿಕಿತ್ಸಾ ಕ್ರಮಗಳು ಜನಪ್ರಿಯವಾಗಲಿದೆ. ಈ ನಿಟ್ಟಿನ ಚಿಕತ್ಸೆಗಳಿಗೆ ಈ 3ಡಿ ಬಯೋಪ್ರಿಂಟಿಂಗ್ ಮಹತ್ತರ ಪಾತ್ರ ವಹಿಸಲಿದೆ ಎಂದು ವಿವರಿಸಿದರು.

ಆಧುನಿಕ ಚಿಕಿತ್ಸಾ ಕೇಂದ್ರ ಪರಿಚಯ
ಉತ್ಕೃಷ್ಟತಾ ಕೇಂದ್ರವು ಆಧುನಿಕ ಚಿಕಿತ್ಸಾ ಕ್ರಮಗಳಿಗೆ ಸಂಬಂಧಿಸಿದ ಸಂಶೋಧನಾ ಉಪಕ್ರಮಗಳನ್ನು ಪರಿಚಯಿಸಲಿದೆ. ಜತೆಗೆ ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿರುವ ವೃತ್ತಿಪರರು ಹಾಗೂ ಉಳಿದವರಿಗೆ ವೈಜ್ಞಾನಿಕ ತರಬೇತಿ ಇಲ್ಲಿ ಸಿಗಲಿದೆ. 3ಡಿ ಬಯೋಪ್ರಿಂಟಿಂಗ್ ತಂತ್ರಜ್ಞಾನದ ಬಳಕೆಯನ್ನು ಪ್ರಚುರಪಡಿಸಲು ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಅಗತ್ಯವಿರುವ ಉಳಿದೆಡೆಗಳಲ್ಲಿ ಕಾರ್ಯಾಗಾರಗಳನ್ನು ಕೂಡ ಈ ಕೇಂದ್ರವು ಹಮ್ಮಿಕೊಳ್ಳಲಿದೆ ಎಂದು ಅವರು ತಿಳಿಸಿದರು.
ಜೈವಿಕ ತಂತ್ರಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿಗಳ ರಾಜಧಾನಿಯಾಗಿ ಬೆಂಗಳೂರು ಪ್ರತಿಷ್ಠಾಪಿತವಾಗಿದೆ. ಈ ಉತ್ಕೃಷ್ಟತಾ ಕೇಂದ್ರದಲ್ಲಿ ಟಿಶ್ಯೂ ಎಂಜಿನಿಯರಿಂಗ್, ಔಷಧಗಳ ಆವಿಷ್ಕಾರ, ಮೆಟೀರಿಯಲ್ ಸೈನ್ಸ್‌ನ ಬೆಳವಣಿಗೆ ಸುಗಮವಾಗಿ ನಡೆಯಲಿದೆ. ಇದರಿಂದಾಗಿ ದೇಶದ ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಲಿವೆ. ಇದರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಬಯೋಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ಕೇಂದ್ರವು ಸಕ್ರಿಯ ಪಾತ್ರ ವಹಿಸಲಿದೆ ಎಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಐಐಎಸ್‌ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್, ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ವಿಶಾಲ್ ರಾವ್, ಸೆಲ್‌ಲಿಂಕ್ ಕಂಪನಿಯ ಏಷ್ಯಾ-ಪೆಸಿಫಿಕ್ ಮುಖ್ಯಸ್ಥೆ ಟೊಮೋಕೊ ಬೈಲುಂಡ್, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರೂಪಕ್ ಪೊದ್ದಾರ್ ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications