ಚಿತ್ರಗಳಲ್ಲಿ: 'ಡಾ. ಪಾರ್ವತಮ್ಮ ರಾಜ್ ಕುಮಾರ್ ಒಂದು ನೆನಪು'
ಬೆಂಗಳೂರು, ಜೂನ್ 09 : ದೊಡ್ಮನೆ ಯಜಮಾನಿ ಡಾ. ಪಾರ್ವತಮ್ಮ ರಾಜ್ ಕುಮಾರ್ ಅವರ ನೆನಪಿಗಾಗಿ 'ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು' ಎಂಬ ಕಾರ್ಯಕ್ರಮ ಗುರುವಾರ ನಡೆಯಿತು.
ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಗಾಂಧೀ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು ಎಂಬ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಪುತ್ರರಾದ ಪುನೀತ್ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರಿಂದ ಪಾರ್ವತಮ್ಮರ ಫೋಟೋಗೆ ಪುಷ್ಪನಮನ ಸಲ್ಲಿಸಿದರು.[ಕನ್ನಡ ಸಿನಿಮಾ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ವಿಧಿವಶ]
ಈ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಅವರ ಸಿನಿ ಬದುಕಿನ ಗುಣಗಾನ ಸಹ ಮಾಡಲಾಯಿತು. ಇದೇ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರು, ಕನ್ನಡ ಚಲನಚಿತ್ರ ರಂಗದಲ್ಲಿ ಸಾಧನೆಗೈದ ಮಹಿಳೆಯರಿಗೆ ಡಾ.ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಒಂದು ಲಕ್ಷ ರೂ ಮೊತ್ತದ ಪ್ರಶಸ್ತಿ ನೀಡಲಾಗುವುರು ಎಂದು ಹೇಳಿದರು.

ಅಮ್ಮನ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಜ್ ಕುಮಾರ್, ಪುನೀತ್
ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು ಎಂಬ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಪುತ್ರರಾದ ಪುನೀತ್ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರಿಂದ ಪಾರ್ವತಮ್ಮರ ಫೋಟೋಗೆ ಪುಷ್ಪನಮನ ಸಲ್ಲಿಸಿದರು.

ಡಾ. ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಪ್ರಶಸ್ತಿ
ಎಸ್.ವಿ.ರಾಜೇಂದ್ರಸಿಂಗ್ ಬಾಬು ರವರು, 'ಭಾರತ ಚಲನಚಿತ್ರ ರಂಗದಲ್ಲಿ 80 ಸಿನಿಮಾಗಳನ್ನು ನಿರ್ಮಿಸಿ ಇತಿಹಾಸ ಬರೆದಿರುವ ಏಕೈಕ ನಿರ್ಮಾಪಕಿ ಪಾರ್ವತಮ್ಮ. ಕನ್ನಡ ಚಲನಚಿತ್ರ ರಂಗಕ್ಕೆ ಅವರ ಕೊಡುಗೆ ಅಪಾರ ಹಾಗಾಗಿ ಅವರ ಹೆಸರಿನಲ್ಲಿ ಪ್ರಶಸ್ತಿಯೊಂದನ್ನು ಸ್ಥಾಪಿಸಿ ಚಲನಚಿತ್ರ ರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ನೀಡಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು' ಎಂದು ಹೇಳಿದರು.

ಪುರುಷ ಪ್ರಧಾನ ಸಮಾಜದಲ್ಲಿ 80 ಚಿತ್ರಗಳನ್ನು ನಿರ್ಮಿಸಿದ್ದು ಸಾಧನೆ
ರಾಜ್ ಕುಮಾರ್ ಪ್ರಭಾವಳಿ ಪಾರ್ವತಮ್ಮ ಅವರಲ್ಲಿತ್ತು. ಅದನ್ನು ಮೀರಿ ಅದರ ಆಚೇ ಒಬ್ಬ ನಿರ್ಮಾಪಕಿತಯಾಗಿ ಕನ್ನಡ ಚಲನಚಿತ್ರರಂಗದ ಮಹಿಳಾ ಶಕ್ತಿಯಾಗಿ ಬೆಳೆದಿದ್ದು ಅದು ಅವರತನ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಒಬ್ಬಳು ಬೆಳೆಯುವುದು ಕಷ್ಟಕರ. ಅಂತಹದರಲ್ಲಿ ಅವರು 80 ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದು ಒಂದು ಸಾಧನೆ ಎಂದು ಸಾಹಿತಿ ಹಾಗೂ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.

ನೆನಪು ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿ
'ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು' ಎಂಬ ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರದಾನ ಕಾರ್ಯದರ್ಶಿಯವರಾದ ಎಂ ಲಕ್ಷ್ಮಿನಾರಾಯಣ, ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ರಾಘವೇಂದ್ರ ರಾಜ್ ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್,ಚಿಂತಕ ಡಾ. ಬರಗೂರು ರಾಮಚಂದ್ರಪ್ಪ, ಸೇರಿದಂತೆ ರಾಜ್ ಕುಟುಂಬ ಸದಸ್ಯರು ಹಾಗೂ ಚಲನಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications