ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರಗಳಲ್ಲಿ: 'ಡಾ. ಪಾರ್ವತಮ್ಮ ರಾಜ್ ಕುಮಾರ್ ಒಂದು ನೆನಪು'

|
Google Oneindia Kannada News

ಬೆಂಗಳೂರು, ಜೂನ್ 09 : ದೊಡ್ಮನೆ ಯಜಮಾನಿ ಡಾ. ಪಾರ್ವತಮ್ಮ ರಾಜ್ ಕುಮಾರ್ ಅವರ ನೆನಪಿಗಾಗಿ 'ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು' ಎಂಬ ಕಾರ್ಯಕ್ರಮ ಗುರುವಾರ ನಡೆಯಿತು.

ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಗಾಂಧೀ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು ಎಂಬ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಪುತ್ರರಾದ ಪುನೀತ್ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್‌ ಸೇರಿದಂತೆ ಗಣ್ಯರಿಂದ ಪಾರ್ವತಮ್ಮರ ಫೋಟೋಗೆ ಪುಷ್ಪನಮನ ಸಲ್ಲಿಸಿದರು.[ಕನ್ನಡ ಸಿನಿಮಾ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ವಿಧಿವಶ]

ಈ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್‌ ಅವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಅವರ ಸಿನಿ ಬದುಕಿನ ಗುಣಗಾನ ಸಹ ಮಾಡಲಾಯಿತು. ಇದೇ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರು, ಕನ್ನಡ ಚಲನಚಿತ್ರ ರಂಗದಲ್ಲಿ ಸಾಧನೆಗೈದ ಮಹಿಳೆಯರಿಗೆ ಡಾ.ಪಾರ್ವತಮ್ಮ ರಾಜ್‌ ಕುಮಾರ್ ಹೆಸರಿನಲ್ಲಿ ಒಂದು ಲಕ್ಷ ರೂ ಮೊತ್ತದ ಪ್ರಶಸ್ತಿ ನೀಡಲಾಗುವುರು ಎಂದು ಹೇಳಿದರು.

 ಅಮ್ಮನ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಜ್ ಕುಮಾರ್, ಪುನೀತ್

ಅಮ್ಮನ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಜ್ ಕುಮಾರ್, ಪುನೀತ್

ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು ಎಂಬ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಪುತ್ರರಾದ ಪುನೀತ್ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್‌ ಸೇರಿದಂತೆ ಗಣ್ಯರಿಂದ ಪಾರ್ವತಮ್ಮರ ಫೋಟೋಗೆ ಪುಷ್ಪನಮನ ಸಲ್ಲಿಸಿದರು.

 ಡಾ. ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಪ್ರಶಸ್ತಿ

ಡಾ. ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಪ್ರಶಸ್ತಿ

ಎಸ್.ವಿ.ರಾಜೇಂದ್ರಸಿಂಗ್ ಬಾಬು ರವರು, 'ಭಾರತ ಚಲನಚಿತ್ರ ರಂಗದಲ್ಲಿ 80 ಸಿನಿಮಾಗಳನ್ನು ನಿರ್ಮಿಸಿ ಇತಿಹಾಸ ಬರೆದಿರುವ ಏಕೈಕ ನಿರ್ಮಾಪಕಿ ಪಾರ್ವತಮ್ಮ. ಕನ್ನಡ ಚಲನಚಿತ್ರ ರಂಗಕ್ಕೆ ಅವರ ಕೊಡುಗೆ ಅಪಾರ ಹಾಗಾಗಿ ಅವರ ಹೆಸರಿನಲ್ಲಿ ಪ್ರಶಸ್ತಿಯೊಂದನ್ನು ಸ್ಥಾಪಿಸಿ ಚಲನಚಿತ್ರ ರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ನೀಡಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು' ಎಂದು ಹೇಳಿದರು.

 ಪುರುಷ ಪ್ರಧಾನ ಸಮಾಜದಲ್ಲಿ 80 ಚಿತ್ರಗಳನ್ನು ನಿರ್ಮಿಸಿದ್ದು ಸಾಧನೆ

ಪುರುಷ ಪ್ರಧಾನ ಸಮಾಜದಲ್ಲಿ 80 ಚಿತ್ರಗಳನ್ನು ನಿರ್ಮಿಸಿದ್ದು ಸಾಧನೆ

ರಾಜ್‌ ಕುಮಾರ್ ಪ್ರಭಾವಳಿ ಪಾರ್ವತಮ್ಮ ಅವರಲ್ಲಿತ್ತು. ಅದನ್ನು ಮೀರಿ ಅದರ ಆಚೇ ಒಬ್ಬ ನಿರ್ಮಾಪಕಿತಯಾಗಿ ಕನ್ನಡ ಚಲನಚಿತ್ರರಂಗದ ಮಹಿಳಾ ಶಕ್ತಿಯಾಗಿ ಬೆಳೆದಿದ್ದು ಅದು ಅವರತನ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಒಬ್ಬಳು ಬೆಳೆಯುವುದು ಕಷ್ಟಕರ. ಅಂತಹದರಲ್ಲಿ ಅವರು 80 ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದು ಒಂದು ಸಾಧನೆ ಎಂದು ಸಾಹಿತಿ ಹಾಗೂ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.

 ನೆನಪು ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿ

ನೆನಪು ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿ

'ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು' ಎಂಬ ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರದಾನ ಕಾರ್ಯದರ್ಶಿಯವರಾದ ಎಂ ಲಕ್ಷ್ಮಿನಾರಾಯಣ, ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ರಾಘವೇಂದ್ರ ರಾಜ್‌ ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್‌ ಕುಮಾರ್,ಚಿಂತಕ ಡಾ. ಬರಗೂರು ರಾಮಚಂದ್ರಪ್ಪ, ಸೇರಿದಂತೆ ರಾಜ್ ಕುಟುಂಬ ಸದಸ್ಯರು ಹಾಗೂ ಚಲನಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

English summary
Karnataka Film Chamber Of Commerce and karnataka Information and Public Relations Department organized Dr Parvathamma Rajkumar 'Ondu Nenapu' program on June 08th, in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X