ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಾ. ಅಶ್ವಥ್ ನಾರಾಯಣ್ ಭೇಟಿ ಮಾಡಿದ ಶಿವರಾಜ್ ಕುಮಾರ್

|
Google Oneindia Kannada News

ಬೆಂಗಳೂರು, ಆ. 13: ಕೊರೊನಾ ವೈರಸ್ ತಂದಿಟ್ಟಿರುವ ಲಾಕ್‌ಡೌನ್‌ ಇತರ ಕಾರಣಗಳಿಂದ ಸ್ಯಾಂಡಲ್‌ವುಡ್ ಸ್ಥಬ್ದವಾಗಿದೆ. ಕಳೆದ ನಾಲ್ಕು ತಿಂಗಳುಗಳಿಂದ ಚಿತ್ರೀಕರಣ ನಡೆದಿಲ್ಲ. ಹೀಗಾಗಿ ಕಲಾವಿದರು, ಅದರಲ್ಲೂ ಪೋಷಕ ಕಲಾವಿದರು, ತಂತ್ರಜ್ಞರು ಹಾಗೂ ಚಿತ್ರರಂಗದ ಇತರ ಅಸಂಘಟಿತ ದಿನಗೂಲಿ ನೌಕರರ ಬದುಕು ಬೀದಿಗೆ ಬೀಳುವಂತಾಗಿದೆ.

ಇದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟರು, ಹಿರಿಯ ಪೋಷಕ ಕಲಾವಿದರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಂಕಷ್ಟಗಳನ್ನು ಸರ್ಕಾರ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರನ್ನು ಹಿರಿಯ ನಟ ಡಾ. ಶಿವರಾಜ್ ಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಜೊತೆಗೆ ಹಲವು ಪೋಷಕ ಕಲಾವಿದರು ಸರ್ಕಾರದ ಗಮನ ಸೆಳೆದಿದ್ದಾರೆ.

ಸರ್ಕಾರಕ್ಕೆ ಮತ್ತೆ ಹಿರಿಯ ಕಲಾವಿದರ ಮನವಿಸರ್ಕಾರಕ್ಕೆ ಮತ್ತೆ ಹಿರಿಯ ಕಲಾವಿದರ ಮನವಿ

ಡಿಸಿಎಂ ಭೇಟಿ ಮಾಡಿದ ಶಿವಣ್ಣ

ಡಿಸಿಎಂ ಭೇಟಿ ಮಾಡಿದ ಶಿವಣ್ಣ

ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರನ್ನು ನಟ ಶಿವರಾಜ್ ಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದರು. ಕೋವಿಡ್-19 ಕಾರಣದಿಂದ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಿವರಾಜ್ ಕುಮಾರ್ ಅವರು ಡಾ. ಅಶ್ವಥ್ ನಾರಾಯಣ್ ವಿವರಿಸಿದರು. ಮುಂದಿನ ವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಸ್ಯೆಗಳ ಪರಿಹಾರದ ಬಗ್ಗೆ ಮಾತುಕತೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಅದಕ್ಕೆ ಪೂರ್ವಭಾವಿಯಾಗಿ ಇವತ್ತು ಚಿತ್ರರಂಗದ ಹಿರಿಯ ಕಲಾವಿದರು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ಕೋವಿಡ್ ಕಾರಣಕ್ಕೆ ಚಿತ್ರರಂಗ ಕಂಗೆಟ್ಟಿದೆ. ಸರಕಾರವೇ ನಮ್ಮ ಚಿತ್ರರಂಗವನ್ನು ರಕ್ಷಿಸಬೇಕು. ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅರೊಂದಿಗೆ ಜತೆ ನಡೆಸಿದ ಮಾತುಕತೆ ಸಕಾರಾತ್ಮಕವಾಗಿತ್ತು. ಮುಂದಿನ ವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇವೆ ಎಂದಿದ್ದಾರೆ.

ಫಿಲ್ಮ್‌ಸಿಟಿ ನಿರ್ಮಾಣ

ಫಿಲ್ಮ್‌ಸಿಟಿ ನಿರ್ಮಾಣ

ಕನ್ನಡ ಚಿತ್ರರಂಗದ ಬಹುನಿರೀಕ್ಷೆಯ ಫಿಲ್ಮ್‌ಸಿಟಿಯನ್ನು ರೋರಿಚ್ ಎಸ್ವೇಟಿನ ಬದಲು ಹೆಸರಘಟ್ಟದಲ್ಲಿಯೇ ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿದೆ. ರೋರಿಚ್ ಎಸ್ಟೇಟ್‌ನಲ್ಲಿ ಪರಿಸರಾತ್ಮಕ ಸಮಸ್ಯೆಗಳು ಎದುರಾಗಿವೆ. ಹೀಗಾಗಿ ಅಲ್ಲಿ ಈ ಯೋಜನೆ ಸಾಧ್ಯವಾಗುತ್ತಿಲ್ಲ. ಹೆಸರಘಟ್ಟದಲ್ಲಿ ಪಶುಸಂಗೋಪನಾ ಇಲಾಖೆಯ 450 ಎಕರೆ ಭೂಮಿ ಇದ್ದು, ಅದರಲ್ಲಿ 150 ಎಕರೆಯನ್ನು ಫಿಲ್ಮ್‌ಸಿಟಿ ನಿರ್ಮಾಣಕ್ಕೆ ನೀಡಲಾಗುವುದು. ಫಿಲ್ಮ್‌ಸಿಟಿ ಸಂಪರ್ಕಕ್ಕೆ ಬೇಕಾದ ರಸ್ತೆಯೊಂದನ್ನು ಮಾಡಿ ಆ ಜಾಗವನ್ನು ಹಸ್ತಾಂತರ ಮಾಡಲಾಗುವುದು. ಈಗಾಗಲೇ ಇದಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ನಡೆಯುತ್ತಿವೆ. ಆದಷ್ಟು ತ್ವರಿತವಾಗಿ ಫಿಲ್ಮ್‌ಸಿಟಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರು ಶಿವರಾಜ್ ಕುಮಾರ್ ಅವರಿಗೆ ಭರವಸೆ ಕೊಟ್ಟಿದ್ದಾರೆ.

ಕೊರೊನಾ ಕಂಟ್ರೋಲ್ ಮಾಡಲು ಹೊಸ ಯೋಜನೆಕೊರೊನಾ ಕಂಟ್ರೋಲ್ ಮಾಡಲು ಹೊಸ ಯೋಜನೆ

ದಿನಗೂಲಿ ನೌಕರರ ಸಂಕಷ್ಟ

ದಿನಗೂಲಿ ನೌಕರರ ಸಂಕಷ್ಟ

ಅದರೊಂದಿಗೆ ಕೋವಿಡ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಗುರಿ ಆಗಿರುವ ಚಿತ್ರರಂಗದ ಪುನಶ್ಚೇತನಕ್ಕೆ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ನಿರ್ಧಾರ ಮಾಡಿದೆ.

ಚಿತ್ರರಂಗದಲ್ಲಿ ಅಸಂಘಟಿತ ದಿನಗೂಲಿ ನೌಕರರ ಹಿತ ಕಾಯುವ ಬಗ್ಗೆ ಆದಷ್ಟು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಕಾರ್ಮಿಕ ಇಲಾಖೆ ಅಡಿಗೆ ತಂದು ಸರಕಾರದ ಸವಲತ್ತುಗಳು ಅವರಿಗೂ ಸಿಗುವಂತೆ ನೋಡಿಕೊಳ್ಳಲಾಗುವುದು. ಪ್ರದರ್ಶಕ ವಲಯದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ಕಾರ್ಮಿಕರಿಗೂ ಸರಕಾರ ಸಹಾಯ ಹಸ್ತ ಚಾಚಲಿದೆ.

ಜಿಎಸ್‌ಟಿ ವಿಚಾರದಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳು, ಸಿನಿಮಾ ನಿರ್ಮಾಣಕ್ಕೆ ಪೂರಕ ಮೂಲಸೌಕರ್ಯ ಒದಗಿಸುವುದೂ ಸೇರಿದಂತೆ ಅನೇಕ ಸಂಗತಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಭೆ ನಡೆದ ನಂತರ ಇವೆಲ್ಲಕ್ಕೂ ಪರಿಹಾರ ಸಿಗಲಿದೆ ಎಂದು ಡಾ. ಅಶ್ವತ್ಥನಾರಾಯಣ ಭೆಟಿ ಬಳಿಕ ಹೇಳಿಕೆ ಕೊಟ್ಟಿದ್ದಾರೆ.

ಮಾರ್ಗಸೂಚಿ ಬದಲಾವಣೆ

ಮಾರ್ಗಸೂಚಿ ಬದಲಾವಣೆ

ಕೋವಿಡ್-19 ಕಾರಣಕ್ಕೆ ಎಸ್‌ಒಪಿ ಜಾರಿಯಲ್ಲಿದೆ. ಕಲಾವಿದರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಈ ನಿಯಮಗಳಲ್ಲಿ ಸ್ವಲ್ಪ ಮಟ್ಟಿಗೆ ರಿಯಾಯಿತಿ ನೀಡುವಂತೆ ಚಿತ್ರರಂಗದ ಗಣ್ಯರು ಕೇಳಿದ್ದಾರೆ. ಆ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದ ಡಿಸಿಎಂ, ಸದ್ಯಕ್ಕೆ ಎಸ್‌ಒಪಿ ಪ್ರಕಾರ ಶೂಟಿಂಗ್ ಮತ್ತಿತರೆ ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ 40 ಜನ ಮಾತ್ರ ಇರಬೇಕು. ಇದರಿಂದ ಕೈಕಾಲು ಕಟ್ಟಿಹಾಕಿದಂತೆ ಆಗಿದ್ದು, ಅನೇಕ ಕಲಾವಿದರು ಮತ್ತು ಕಾರ್ಮಿಕರಿಗೆ ಕಷ್ಟವಾಗುತ್ತಿದೆ. ಹೀಗಾಗಿ ಈ ಮಿತಿಯನ್ನು ಸಡಿಲ ಮಾಡುವಂತೆ ಕೇಳಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಚಿತ್ರರಂಗಕ್ಕೆ ಕೊಡಲಾಗಿದೆ.

ಹೊಸ ಚಲನಚಿತ್ರ ನೀತಿ

ಹೊಸ ಚಲನಚಿತ್ರ ನೀತಿ

ಕನ್ನಡ ಚಲನಚಿತ್ರರಂಗ ಸರಕಾರದ ಹಲವಾರು ಇಲಾಖೆಗಳಲ್ಲಿ ಹಂಚಿಹೋಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ ಇತ್ಯಾದಿಗಳ ಅಡಿಯಲ್ಲಿ ಸಿನಿಮಾ ಕ್ಷೇತ್ರದ ಕೆಲಸಗಳು ಆಗುತ್ತಿವೆ. ಇವೆಲ್ಲವನ್ನೂ ಒಟ್ಟಾಗಿ ಅನುಸಂಧಾನಗೊಳಿಸಿ ಕನ್ನಡ ಚಲನಚಿತ್ರ ಉತ್ತೇಜನಾ ಮಂಡಳಿಯನ್ನು ರಚಿಸಲು ಸಾಧ್ಯವೇ? ಎಂಬ ಚಿಂತನೆಯೂ ಇದೆ.

ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದಿಗೆ ಚರ್ಚೆ ಮಾಡಲಾಗುವುದು. ಹಾಗೆಯೇ ಈಗಾಗಗಲೇ ಇರುವ ಚಲನಚಿತ್ರ ನೀತಿ ಹಳೆಯದಾಗಿದ್ದು, ಆದಷ್ಟು ಬೇಗ ಹೊಸ ನೀತಿಯನ್ನು ರೂಪಿಸಲಾಗುವುದು. ಅದರಲ್ಲಿ ಜನತಾ ಥಿಯೇಟರ್ ಸ್ಥಾಪನೆ, ಈಗಿರುವ ಟಾಕೀಸ್‌ಗಳನ್ನು ಉತ್ತಮಪಡಿಸಿ ಪ್ರದರ್ಶನ ವಲಯಕ್ಕೆ ಶಕ್ತಿ ತುಂಬುವ ಅಂಶಗಳನ್ನು ಮುಂಬರುವ ನೀತಿಯಲ್ಲಿ ಸೇರಿಸಲಾಗುವುದು ಎಂದು ಅವರು ಶಿವರಾಜ್ ಕುಮಾರ್ ಅವರಿಗೆ ಭರವಸೆ ಕೊಟ್ಟಿದ್ದಾರೆ.

English summary
Senior actors and senior supporting artists of Kannada cinema industry have appealed to the government to help during lockdown. Dr. Shivraj Kumar meets DCM Dr. Ashwath Narayan is talking about this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X