ಡಾ. ಯತೀಂದ್ರ ಸಿದ್ದರಾಮಯ್ಯಗೆ ಕೋವಿಡ್ ಸೋಂಕು ದೃಢ

ಬೆಂಗಳೂರು, ಆ. 07: ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದೆ. ಕಳೆದ ಮೂರು ದಿನಗಳ ಹಿಂದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Recommended Video

      ಗಾಣಗಪುರದ ದತ್ತನ ದರ್ಶನವೇ ಡಿಕೆ ಶಿವಕುಮಾರ್ ಗೆ ಮುಳುವಾಯ್ತಾ? | Oneindia Kannada

      ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಾಗ ಅವರನ್ನು ಪುತ್ರ ಡಾ. ಯತೀಂದ್ರ ಅವರು ಆರೈಕೆ ಮಾಡಿದ್ದರು. ಸಿದ್ದರಾಮಯ್ಯ ಅವರ ಪ್ರಾಥಮಿಕ ಸಂಪರ್ಕಕ್ಕೆ ಅವರು ಬಂದಿದ್ದರು. ಇದೀಗ ಅವರಿಗೂ ಕೊರೊನಾ ವೈರಸ್ ತಗುಲಿದೆ.

      Dr Yathindra Siddaramaiah Tests Positive for Coronavirus

      ಕೋವಿಡ್ ಸೋಂಕು ದೃಢಪಟ್ಟಿರುವುದನ್ನು ಟ್ವಿಟರ್‌ನಲ್ಲಿ ಸ್ವತಃ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಜೊತೆಗೆ ಅವರೊಂದಿಗೆ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ, ಕ್ವಾರಂಟೈನ್‌ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ. ಡಾ. ಯತೀಂದ್ರ ಸಿದ್ದರಾಮಯ್ಯ ಅವರೂ ಇದೀಗ ಮಣಿಪಾಲ್ ಆಸ್ಪತ್ರೆಗೆ ತೆರಳಿ ದಾಖಲಾಗಲಿದ್ದಾರೆ ಎಂಬ ಮಾಹಿತಿಯಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+