ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಡ್ರಿಂಕ್ ಅಂಡ್ ಡ್ರೈವ್ ಕೇಸ್: ಕಿಕ್ ಇಳ್ಸತಿದ್ದಾರೆ ಪೊಲೀಸ್!
Bengaluru Traffic Police: ಬೆಂಗಳೂರು ಟ್ರಾಫಿಕ್ ಪೊಲೀಸರು ಮತ್ತೆ ಫೀಲ್ಡ್‌ಗೆ ಇಳಿದಿದ್ದಾರೆ. ಡ್ರಿಂಕ್ ಅಂಡ್ ಡ್ರೈವರ್ಸ್‌ಗೆ ಭಾರೀ ಬಿಸಿ ಮುಟ್ಟಿಸುತ್ತಿದ್ದಾರೆ. ಯಾವುದೇ ಮುನ್ಸೂಚನೆಯನ್ನು ನೀಡದೆ ಬೆಂಗಳೂರು ಟ್ರಾಫಿಕ್ ಪೊಲೀಸರು ರಾತ್ರಿ ವೇಳೆ ಫೀಲ್ಡ್‌ಗೆ ಇಳಿಯುತ್ತಿದ್ದು, ಡ್ರಿಂಕ್ ಅಂಡ್ ಡ್ರೈವರ್ಸ್‌ಗಳ ಕಿಕ್ ಇಳಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಕುಡಿದು ವಾಹನ ಚಲಾಯಿಸುವವರ ಕಿಕ್ ಇಳಿಸುವುದಕ್ಕೆ ಬೆಂಗಳೂರು ಪೊಲೀಸರು ಡಿಢೀರ್ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ರೀತಿ ಕಳೆದ 10 ದಿನಗಳಲ್ಲಿ ಎರಡು ಬಾರಿ ಕಾರ್ಯಾಚರಣೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ ಡ್ರಿಂಕ್ ಅಂಡ್ ಡ್ರೈವರ್ಸ್ ಹೆಚ್ಚಳವಾಗಿದ್ದಾರೆಯೇ ಎನ್ನುವ ಅನುಮಾನವೂ ಎದುರಾಗಿದೆ. ಇದಕ್ಕೆ ಕಾರಣ ಬೆಂಗಳೂರು ಟ್ರಾಫಿಕ್ ಪೊಲೀಸರು ನಡೆಸಿರುವ ವಿಶೇಷ ಕಾರ್ಯಾಚರಣೆಯಲ್ಲಿ ಪತ್ತೆಯಾಗಿರುವ ಡ್ರಿಂಕ್ ಅಂಡ್ ಡ್ರೈವರ್ಸ್. ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಹಲವು ಬಾರಿ ಈ ರೀತಿ ದಿಢೀರ್ ಕಾರ್ಯಚರಣೆಗೆ ಇಳಿದಿದ್ದಾರೆ. ಕಳೆದ 10 ದಿನಗಳಲ್ಲೇ ಎರಡು ಬಾರಿ ವಿಶೇಷ ಕಾರ್ಯಾಚರಣೆ ನಡೆದಿದ್ದು, ನೂರು ಜನ ಡ್ರಿಂಕ್ ಅಂಡ್ ಡ್ರೈವರ್ಸ್‌ಗಳನ್ನು ಹಿಡಿಯಲಾಗಿದೆ. ಅವರಿಂದ ದಂಡವನ್ನೂ ವಸೂಲಿ ಮಾಡಲಾಗಿದೆ.

ದಿಢೀರ್ ಕಾರ್ಯಾಚರಣೆ: ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಬೆಂಗಳೂರಿನಲ್ಲಿ ಕುಡಿದು ವಾಹನ ಚಾಲನೆ ಮಾಡುವವರನ್ನು ಪತ್ತೆ ಹಚ್ಚುವುದಕ್ಕಾಗಿ ದಿಢೀರ್ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಮೊದಲೆಲ್ಲ ಡ್ರಿಂಕ್ ಅಂಡ್ ಡ್ರೈವ್‌ನ ಬಗ್ಗೆ ಮಾಹಿತಿ ನೀಡಲಾಗುತ್ತಿತ್ತು. ಇಲ್ಲವೇ ಈ ಭಾಗದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎನ್ನುವುದು ತಿಳಿಯುತ್ತಿತ್ತು. ಆದರೆ, ಈ ರೀತಿ ಮಾಡುವುದರಿಂದ ಡ್ರಿಂಕ್ ಅಂಡ್ ಡ್ರೈವರ್ಸ್ ತಪ್ಪಿಸಿಕೊಳ್ಳುತ್ತಿದ್ದರು. ಇದೀಗ ಇದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ಪೊಲೀಸರು ದಿಢೀರ್ ಫೀಲ್ಡ್‌ಗೆ ಇಳಿಯುತ್ತಿದ್ದಾರೆ. ಇದರಿಂದ ನೂರಾರು ಜನ ಡ್ರಿಂಕ್ ಅಂಡ್ ಡ್ರೈವರ್ಸ್ ಪೊಲೀಸರ ಬಲೆಗೆ ಬೀಳುತ್ತಿದ್ದಾರೆ. ಪೊಲೀಸರ ಈ ವಿಶೇಷ ಕಾರ್ಯಾಚರಣೆಯಿಂದ ಡ್ರಿಂಕ್ ಡ್ರೈವರ್ಸ್‌ಗಳ ಮಾಹಿತಿ ಹೊರ ಬೀಳುತ್ತಿದೆ.
ಈಚೆಗೆ 2 ವಿಶೇಷ ಕಾರ್ಯಾಚರಣೆ: ಬೆಂಗಳೂರಿನಲ್ಲಿ ಈಚೆಗೆ ಪೊಲೀಸರು ಎರಡು ಬಾರಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಸೆಪ್ಟೆಂಬರ್ 26ರಂದು ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬೆಂಗಳೂರಿನ 50 ಟ್ರಾಫಿಕ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. 19,296 ವಾಹನಗಳನ್ನು ಪರಿಶೀಲನೆ ಮಾಡಲಾಗಿದೆ. ಇದರಲ್ಲಿ 236 ಜನ ಕುಡಿದು ವಾಹನ ಚಾಲನೆ ಮಾಡಿರುವುದು ಪತ್ತೆಯಾಗಿದೆ. ಈ ರೀತಿ ಕುಡಿದು ವಾಹನ ಚಾಲನೆ ಮಾಡುತ್ತಿದ್ದವರಿಂದ ದಂಡ ವಸೂಲಿ ಮಾಡಲಾಗಿದೆ. ಇನ್ನು ಇದೇ ರೀತಿ ಸೆಪ್ಟೆಂಬರ್ 19ರಂದು ಸಹ ಬೆಂಗಳೂರು ಪೊಲೀಸರು ಫೀಲ್ಡ್‌ಗೆ ಇಳಿದ್ದಿದ್ದರು. ಆಗ 13,437 ವಾಹನಗಳನ್ನು ಪರಿಶೀಲನೆ ನಡೆಸಲಾಗಿತ್ತು. ಅಲ್ಲದೇ ಡ್ರಿಂಕ್ ಅಂಡ್ ಡ್ರೈವ್ ಮಾಡುತ್ತಿದ್ದ 200 ಜನರಿಗೆ ದಂಡ ವಿಧಿಸಲಾಗಿತ್ತು.
ಡ್ರಿಂಕ್ ಅಂಡ್ ಡ್ರೈವರ್ಸ್ ಹೆಚ್ಚಳ ?
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಿಂಕ್ ಅಂಡ್ ಡ್ರೈವ್ ಮಾಡುವವರ ಸಂಖ್ಯೆ ಹೆಚ್ಚಾಗಿದಿಯೇ ಅನುಮಾನ ಎದುರಾಗಿದೆ. ಇದಕ್ಕೆ ಮುಖ್ಯ ಕಾರಣ ಬೆಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ನಡೆದ ದಿಢೀರ್ ಕಾರ್ಯಾಚರಣೆಯಲ್ಲಿ 400ಕ್ಕೂ ಹೆಚ್ಚು ಜನ ಡ್ರಿಂಕ್ ಅಂಡ್ ಡ್ರೈವ್ (ಕುಡಿದು ವಾಹನ ಚಾಲನೆ) ಮಾಡಿರುವುದು ಬೆಳಕಿಗೆ ಬಂದಿದೆ. ಇನ್ನು ಈ ರೀತಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದ್ದಾರೆ. ಇದರಿಂದ ಇನ್ನಷ್ಟು ಜನ ಕುಡಿದು ವಾಹನ ಚಲಾಯಿಸುವವರು ಪೊಲೀಸರ ಬಲೆಗೆ ಬೀಳುವ ಸಾಧ್ಯತೆ ಇದೆ.












Click it and Unblock the Notifications