ಶವವನ್ನು 70 ಕಿ.ಮೀ ಎಳೆದುಕೊಂಡು ಹೋದ ಬಸ್ ಚಾಲಕ
Recommended Video

ಬೆಂಗಳೂರು, ಫೆಬ್ರವರಿ 05 : ಶಾಂತಿನಗರ ಒಂದನೇ ಡಿಪೋದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ ಶವ ಪ್ರಕರಣ, ತಾನೇ ಅಪಘಾತ ಮಾಡಿರುವುದಾಗಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಮೊಯಿನುದ್ದೀನ್ ತಪ್ಪೊಪ್ಪಿಕೊಂಡಿದ್ದಾರೆ.
ಶಾಂತಿನಗರ ಒಂದನೇ ಡಿಪೋದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ ಶವ, ಅಪಘಾತದಿಂದ ಮೃತಪಟ್ಟಿರುವುದಾಗಿ ತನಿಖೆ ವೇಳೆ ತಿಳಿದುಬಂದಿತ್ತು.
ಅಪಘಾತ ನಡೆದ ಸ್ಥಳದಲ್ಲಿ ಬಸ್ ನಿಲ್ಲಿಸದೆ ಬಸ್ ಚಾಲಕ ಬಸ್ ಚಲಾಯಿಸಿಕೊಂಡು ಬಂದು, ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ, ಚಾಲಕ ಮೊಯಿನುದ್ದೀನ್ ವಿರುದ್ಧ ಸಾಕ್ಷ್ಯ ನಾಶಕ್ಕೆ ಯತ್ನ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮೂರು ದಿನ ವಶಕ್ಕೆ ಪಡೆಯಲಾಗಿದೆ.

ವಿಚಾರಣೆ ವೇಳೆ ತಾನು ಅಪಘಾತ ಮಾಡಿರುವುದು ಹೌದು, ಅಪಘಾತವಾದ ತಕ್ಷಣ ಬಸ್ ನಿಲ್ಲಿಸದೆ ಚಲಾಯಿಸಿಕೊಂಡು ಹೋದೆ, ಪೊಲೀಸರಿಗೆ ಭಯ ಪಟ್ಟು ತಿಳಿಸದೆ ಮನೆಗೆ ಹೋಗಿದ್ದೆ ಎಂದು ಹೇಳಿಕೆ ನೀಡಿದ್ದಾರೆ.
ಮೃತ ವ್ಯಕ್ತಿ ಗುರುತು ಪತ್ತೆಯಾಗಿಲ್ಲ, ರಾತ್ರಿ ವೇಳೆಯಾಗಿದ್ದರಿಂದ ಆತನಿಗೂ ಅಪಘಾತ ನಡೆದ ಸ್ಥಳ ಯಾವುದು ಎಂದು ತಿಳಿದಿಲ್ಲ, ಘಟನೆ ನಡೆದ ಸ್ಥಳವನ್ನು ಪತ್ತೆ ಹಚ್ಚಿ ಪ್ರಕರಣವನ್ನು ಅಲ್ಲಿನ ಠಾಣೆಗೆ ವರ್ಗಾಯಿಸುವುದುಆಗಿ ವಿಲ್ಸನ್ ಗಾರ್ಡ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೊಯಿನುದ್ದೀನ್ ರಾತ್ರಿ 12.30 ರ ಸುಮಾರಿಗೆ ರಾಮನಗರ ಮತ್ತು ಚನ್ನಪಟ್ಟಣ ಮಧ್ಯೆ ಅಪಘಾತ ನಡೆದಿದ್ದು, ಚಾಲಕ ಬಸ್ ನಿಲ್ಲಿಸದೆ ಬೆಂಗಳೂರಿಗೆ ಬಂದಿದ್ದಾನೆ. ಕೊನೆಯ ನಿಲ್ದಾಣವಾದ ಶಾಂತಿನಗರದಲ್ಲಿ ಪ್ರಯಾಣಿಕರೆಲ್ಲಾ ಇಳಿದ ಬಳಿಕ ಚಾಲಕ ಬಸ್ ಡಿಪೋದ ಬಳಿ ಬಸ್ ನ ಕೆಳಗೆ ನೋಡಿದಾಗ ವ್ಯಕ್ತಿಯ ಶವ ಇರುವುದನ್ನು ಕಂಡಿದ್ದಾನೆ, ವ್ಯಕ್ತತಿಯ ದೇಹದಲ್ಲಿ ಸಂಪೂರ್ಣ ತರಚಿದ ಗಾಯಗಳಾಗಿತ್ತು. ಬಳಿಕ ಸಿಕ್ಕಿ ಬೀಳುತ್ತೇನೆ ಎಂದು ಆತಂಕದಲ್ಲಿ ಬಸ್ ಅನ್ನು ಡಿಪೋದ ಒಳಗೆ ತೆಗೆದುಕೊಂಡು ಹೋಗಿದ್ದು, ಬಸ್ ಕೆಳಗೆ ಸಿಲುಕಿದ್ದ ಶವ ಕೆಳಗೆ ಬಿದ್ದಿದೆ. ಬಳಿಕ ಶವವನ್ನು ಇತರ ಎರಡು ಬಸ್ ಗಳ ನಡುವೆ ಹಾಕಿ ಹೋಗಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.











Click it and Unblock the Notifications