Drought: ಕೊಳವೆಬಾವಿ ಕೊರೆಸಿ ಜನ್ಮದಿನ ಆಚರಿಸಿಕೊಂಡ ಕಾಂಗ್ರೆಸ್ ಮುಖಂಡ
ಬೆಂಗಳೂರು ಮಾರ್ಚ್ 4: ರಾಜ್ಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಸಮಸ್ಯೆ ಎದುರಾಗಿದೆ. ನೀರಿಗಾಗಿ ಜನ ಪರದಾಡುವಂತಾಗಿದೆ. ಈ ನಡುವೆ ನೀರಿನ ಮಹತ್ವ ಸಾರುವ ಹಾಗೂ ನೀರಿನ ಸಮಸ್ಯೆಗೆ ಕೊಂಚ ಪರಿಹಾರ ನೀಡುವ ದೃಷ್ಟಿಯಿಂದ ಕಾಂಗ್ರೆಸ್ ಮುಖಂಡರೊಬ್ಬರು ಕೊಳವೆಬಾವಿ ಕೊರೆಸಿ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದಾರೆ.
ಹೌದು... ವಿಜಯನಗರ ವಿಧಾನಸಭಾ ಕ್ಷೇತ್ರದ ದೀಪಾಂಜಲಿ ನಗರ ವಾರ್ಡ್ ವ್ಯಾಪ್ತಿಯ ಅವಲಹಳ್ಳಿಯಲ್ಲಿ ಬಿಬಿಎಂಪಿಯ ಮಾಜಿ ಉಪಮೇಯರ್ ಹಾಗೂ ಕಾಂಗ್ರೆಸ್ ಮುಖಂಡ ಎಂ ಲಕ್ಷ್ಮೀನಾರಾಯಣ ಹಾಗೂ ಅವರ ಪುತ್ರಿ ಎಲ್.ಪವಿತ್ರಾ ಅವರ ಜನ್ಮದಿನದ ಅಂಗವಾಗಿ ಉಚಿತ ಕೊಳವೆ ಬಾವಿ ಕೊರೆಸುವ ಮೂಲಕ ಕುಡಿಯುವ ನೀರಿನ ವ್ಯವಸ್ಥೆಗೆ ಅನುಕೂಲ ಮಾಡಿಕೊಡಲಾಯಿತು.

ದೀಪಾಂಜಲಿ ನಗರ ವಾರ್ಡ್ ವ್ಯಾಪ್ತಿಯ ಅವಲಹಳ್ಳಿಯಲ್ಲಿ ಕೊಳವೆಬಾವಿ ಕೊರೆಸುವ ಕಾರ್ಯಕ್ಕೆ ಕಾಂಗ್ರೆಸ್ ಮುಖಂಡ ಎಂ. ಲಕ್ಷ್ಮೀನಾರಾಯಣ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಲಕ್ಷ್ಮೀನಾರಾಯಣ ಅವರು, ಹಿತೈಷಿಗಳು, ಮುಖಂಡರು, ಅಭಿಮಾನಿಗಳೆಲ್ಲ ಸೇರಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ಕೊಳವೆ ಬಾವಿ ಕೊರೆಸಲಾಗಿದೆ. ಇದರಿಂದ ಅವಲಹಳ್ಳಿಯ ಸುತ್ತಮುತ್ತ ಇರುವ 500 ಮನೆಗಳಿಗೆ ಅನುಕೂಲವಾಗುಷ್ಟು ನೀರು ಲಭ್ಯವಾಗಲಿದೆ ಎಂದು ಹೇಳಿದರು.
ಬರಗಾಲದಲ್ಲಿ ಎಲ್ಲೆಡೆ ನೀರಿನ ಸಮಸ್ಯೆ ತಾಂಡವಾಡುತ್ತಿರುವುದರಿಂದ ಸಾರ್ವಜನಿಕರಿಗೆ ನೀರು ಪೂರೈಸುವುದು ಒಳ್ಳೆಯ ಕೆಲಸವಾಗಿದ್ದು ಮುಂದಿನ ದಿನಗಳಲ್ಲಿ ಭಗವಂತ ಮತ್ತಷ್ಟು ಶಕ್ತಿ ನೀಡಿದರೆ ಸಾರ್ವಜನಿಕವಾಗಿ ಇನ್ನಷ್ಟು ಸೇವೆ ಮಾಡಲು ಮುಂದಾಗುತ್ತೇವೆ ಎಂದರು. ಮುಖಂಡರಾದ ಗಿರೀಶ್, ರಮೇಶ್, ಹೇಮಂತ್, ಹನುಮಂತಪ್ಪ, ಚಂದ್ರಪ್ಪ, ಅವಲಹಳ್ಳಿ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನೂ ನೀರಿನ ಸಮಸ್ಯೆಯ ನಡುವೆ ಟ್ಯಾಂಕರ್‌ಗಳ ಹಾವಳಿ ಜೋರಾಗಿದೆ. ಟ್ಯಾಂಕರ್ ನೀರಿಗೆ ಜನ ಹೆಚ್ಚೆಚ್ಚು ಹಣ ಕೊಟ್ಟು ಖರೀದಿ ಮಾಡುವಂತಾಗಿದೆ. ಈ ನುಡವೆ ನೀರಿನ ದಂಧೆ ತಡೆಯಲು ಖಾಸಗಿ ಟ್ಯಾಂಕರ್ ವಶಕ್ಕೆ ಪಡೆಯಲು ಡಿಸಿಎಂ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕುಡಿಯುವ ನೀರಿನ ಪೂರೈಸಲು ಬೆಂಗಳೂರಿನ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ತಲಾ 10 ಕೋಟಿ ನೀಡಲಾಗಿದೆ. ನೀರಿನ ದಂಧೆ ತಡೆಯಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್‌ಗಳನ್ನು ಸರ್ಕಾರದ ಸುಪರ್ದಿಗೆ ಓಗಾಗಲೇ ತೆಗೆದೊಕೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನೀರಿನ ಟ್ಯಾಂಕರ್ ಇದೆಯಾ? ಬಾಡಿಗೆಗೆ ಕೊಡಿ: ಜಲಮಂಡಳಿ
ಸಾರ್ವಜನಿಕ ಹಿತದೃಷ್ಟಿಯಿಂದ ನಗರದ ಬರ ಪರಿಸ್ಥಿತಿಯನ್ನು ನಿಭಾಯಿಸಲು ಬೆಂಗಳೂರು ಜಲಮಂಡಳಿಯು ಮುಂದಾಗಿದ್ದು, ವಾಟರ್ ಟ್ಯಾಂಕರ್‌ಗಳನ್ನು ತಿಂಗಳ ಬಾಡಿಗೆ ಆಧಾರದಲ್ಲಿ ನಿಯೋಜಿಸಿಕೊಳ್ಳಲಿದೆ. ನಗರದಲ್ಲಿ ವಾಟರ್ ಟ್ಯಾಂಕರ್ ಹೊಂಡಿರುವ ಮಾಲೀಕರು ತಮ್ಮಲ್ಲಿ ನೀರು ಲಭ್ಯವಿಲ್ಲದೆ, ನಿರುಪಯುಕ್ತವಾಗಿ ನಿಲ್ಲಿಸಿರುವ ವಾಟರ್ ಟ್ಯಾಂಕರ್‌ಗಳನ್ನು ಜಲಮಂಡಳಿಗೆ ನೀಡಲು ಇಚ್ಚಿಸಿದ್ದಲ್ಲಿ ಮಂಡಳಿಯು ಸರ್ಕಾರ ನಿಗದಿಪಡಿಸಿರುವ ದರಗಳನ್ವರ ತಿಂಗಳ ಬಾಡಿಗೆ ಆಧಾರದಲ್ಲಿ ನಿಯೋಜಿಸಿಕೊಳ್ಳಲಿದೆ. ನೀರಿನ ಟ್ಯಾಂಕರ್‌ಗಳನ್ನು ನೀಡಬಯಸುವ ಟ್ಯಾಂಕರ್ ಮಾಲೀಕರು ಮಂಡಳಿಯ ನೋಡಲ್ ಅಧಿಕಾರಿಯನ್ನು ಸಂಪರ್ಕಿಸುವಂತೆ ಬೆಂಗಳೂರು ಜಲಮಂಡಳಿ ಪ್ರಕಟಣೆ ಕೋರಿದೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications