ಡ್ರಗ್ಸ್ ಜಾಲದ ತನಿಖೆ; ಉದ್ಯಮಿ ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು, ಸೆಪ್ಟೆಂಬರ್ 07: ಬೆಂಗಳೂರು ನಗರದಲ್ಲಿನ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಉದ್ಯಮಿಯನ್ನು ವಶಕ್ಕೆ ಪಡೆದಿದ್ದಾರೆ. ನಟಿ ರಾಗಿಣಿ ದ್ವಿವೇದಿ ಸೇರಿದಂತೆ ಇದುವರೆಗೂ 12 ಜನರನ್ನು ಬಂಧಿಸಲಾಗಿದೆ.

Recommended Video

      Raginiನಾ ಬಿಟ್ಟು ಬಿಡಿ ಅಂತಿದ್ದಾರಂತೆ ಈ ದೊಡ್ಡ ಮನುಷ್ಯ | Oneindia Kannada

      ಭಾನುವಾರ ರಾತ್ರಿ ಬೆಂಗಳೂರು ನಗರದ ಉದ್ಯಮಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಸೆಲೆಬ್ರಿಟಿಗಳಿಗೆ, ಹೈ ಪ್ರೊಫೈಲ್ ಪಾರ್ಟಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಎಂಬ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ.

      ನಗರದಲ್ಲಿ ನಡೆಯುತ್ತಿದ್ದ ಹಲವು ಹೈ ಪ್ರೊಫೈಲ್ ಪಾರ್ಟಿಗಳಿಗೆ ಉದ್ಯಮಿ ಮಾದಕ ವಸ್ತು ಪೂರೈಕೆ ಮಾಡಿದ ಬಗ್ಗೆ ಬಂಧಿತರಾಗಿರುವ ಇತರ ಆರೋಪಿಗಳು ಮಾಹಿತಿ ನೀಡಿದ್ದರು. ಆದ್ದರಿಂದ, ಅವರನ್ನು ವಶಕ್ಕೆ ಪಡೆಯಲಾಗಿದೆ.

      Drug Case CCB Detained Bengaluru Businessman

      ಉದ್ಯಮಿ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಸೋಮವಾರ ಅವರನ್ನು ಬಂಧಿಸುವ ಸಾಧ್ಯತೆಯೂ ಇದೆ. ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇದುವರೆಗೂ 12 ಜನರನ್ನು ಬಂಧಿಸಿದ್ದಾರೆ.

      ಸಿಸಿಬಿ ಪೊಲೀಸರ ವಶದಲ್ಲಿರುವ ನಟಿ ರಾಗಿಣಿ ಭಾನುವಾರ ತನಿಖೆಗೆ ಸಹಕಾರ ನೀಡಿಲ್ಲ. ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ 2ನೇ ದಿನದ ವಿಚಾರಣೆಯನ್ನು ತನಿಖಾಧಿಕಾರಿ ಅಂಜುಮಾಲ ನೇತೃತ್ವದ ತಂಡ ನಡೆಸಿದೆ.

      ಸತತ ಮೂರು ಗಂಟೆಗಳ ಕಾಲ ವಿಚಾರಣೆ ಮಾಡಿದರೂ ಸಹಕಾರ ನೀಡದಿರುವ ಹಿನ್ನಲೆಯಲ್ಲಿ ತಂಡ ವಾಪಸ್ ಆಗಿದೆ. ಸೋಮವಾರ ರಾಗಿಣಿಯನ್ನು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ಮಾಡುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+