ಡ್ರಗ್ಸ್‌ ಪ್ರಕರಣ; ಆರೋಪಿಗಳಿಗೆ ರಕ್ತ ಪರೀಕ್ಷೆಗೆ ಒಪ್ಪಿಗೆ

ಬೆಂಗಳೂರು, ಸೆಪ್ಟೆಂಬರ್ 10: ಬೆಂಗಳೂರು ನಗರದಲ್ಲಿನ ಡ್ರಗ್ಸ್ ಪೂರೈಕೆ ಜಾಲದ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದುವರೆಗೂ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ರಕ್ತದ ಮಾದರಿ ಪರೀಕ್ಷೆಗೆ ಅನುಮತಿ ಪಡೆದಿದ್ದಾರೆ.

ಸಿಸಿಬಿ ವಶದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಅವರ ರಕ್ತದ ಮಾದರಿಗಳ ಪರೀಕ್ಷೆಯನ್ನು ಗುರುವಾರ ನಡೆಸುವ ಸಾಧ್ಯತೆ ಇದೆ. ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಅವರ ವಿಚಾರಣೆ ನಡೆಸಲಾಗುತ್ತಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನ್ಯಾಯಾಲಯದಿಂದ ರಕ್ತ ಪರೀಕ್ಷೆಗೆ ಅನುಮತಿಯನ್ನು ಪಡೆದಿದ್ದಾರೆ. ಮತ್ತೊಂದು ಕಡೆ ದೆಹಲಿಯಲ್ಲಿ ಬಂಧಿತನಾದ ವೀರೇನ್ ಖನ್ನಾ ಮನೆಯಲ್ಲಿ ಪೊಲೀಸ್ ಸಮವಸ್ತ್ರ ಪತ್ತೆಯಾಗಿತ್ತು. ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Drug Case Court Allowed For Blood Test Of Accused

"ವೀರೇನ್ ಖನ್ನಾ ಪೊಲೀಸ್ ಸಮವಸ್ತ್ರ ಧರಿಸಿ ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದ. ಇದು ಅಪರಾಧವಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಸಿಬಿ ಅಧಿಕಾರಿಗಳು ದೂರು ನೀಡಿದ್ದಾರೆ" ಎಂದು ಪೊಲೀಸರು ಹೇಳಿದ್ದಾರೆ.

ನಟಿ ಸಂಜನಾ ಗಲ್ರಾನಿ ಆಪ್ತ ಎಂದು ಹೇಳಲಾದ ಶೇಖ್ ಫೈಜಲ್ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಜಯನಗರದಲ್ಲಿರುವ ಮನೆಯಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಫೈಸಲ್ ಸಹೋದರನನ್ನು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಿ, ಕಳುಹಿಸಿದ್ದಾರೆ.

ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇದುವರೆಗೂ 12 ಆರೋಪಿಗಳನ್ನು ಬಂಧಿಸಿದ್ದಾರೆ. ಎಫ್‌ಐಆರ್‌ನಲ್ಲಿ ಪೊಲೀಸರು ದಾಖಲಿಸಿರುವ ಎ1 ಆರೋಪಿ ಶಿವಕುಮಾರ್ ನಿರೀಕ್ಷಣಾ ಜಾಮೀನಿಗಾಗಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+