ಡ್ರಗ್ ಡೀಲ್ : ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ದಾಳಿ !
ಬೆಂಗಳೂರು, ಮಾರ್ಚ್ 05: ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಬೆಂಗಳೂರು ಪೊಲೀಸರು ದಾಳಿ ನಡೆಸಿದ್ದಾರೆ. ಅಂದಹಾಗೆ ಡ್ರಗ್ ಜಾಲದಲ್ಲಿ ಮಸ್ತಾಲ್ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಗೋವಿಂದಪುರ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಬಾಣಸವಾಡಿ ಎಸಿಪಿ ನೇತೃತ್ವದಲ್ಲಿ ಪೊಲೀಸರು ಮನೆ ಮೇಲೆ ದಾಳಿ ನಡಿಸಿ ಶೋಧ ನಡೆಸಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಪೊಲೀಸರ ವಶಕ್ಕೆ
— oneindiakannada (@OneindiaKannada) March 5, 2021
ಡ್ರಗ್ ಪೆಡ್ಲರ್ ಬಂಧನ ವೇಳೆ ನೀಡಿದ ಮಾಹಿತಿ ಮೇರೆಗೆ ಬಿಗ್ ಬಾಸ್ ಸೀಸನ್ 4ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದ ಮಸ್ತಾನ್ ಚಂದ್ರ ಮನೆ ಮೇಲೆ ಗೋವಿಂದಪುರ ಪೊಲೀಸರು ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ಬಳಿಕ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.#MastanChandra pic.twitter.com/67wXIA2zyq
ನಿರ್ದೇಶಕ, ನಟ ಎಂದು ಗುರುತಿಸಿಕೊಂಡಿರುವ ಮಸ್ತಾನ್ ಚಂದ್ರ, ಸಿತಾರ ಸೇರಿದಂತೆ ಹಲವು ಸಿನಿಮಾ ನಿರ್ದೇಶಿಸಿದ್ದರು. ಬಿಗ್ ಬಾಸ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದರು. ಈ ಮೂಲಕ ರಾಜ್ಯಕ್ಕೆ ಪರಿಚಿತರಾಗಿದ್ದ ಮಸ್ತಾನ್ ಚಂದ್ರ ಡ್ರಗ್ ಜಾಲದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ಬಂಧನಕ್ಕೆ ಒಳಗಾಗಿರುವ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನ ಜತೆ ಮಸ್ತಾನ್ ಸಂಪರ್ಕದಲ್ಲಿದ್ದ. ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್, ಮಸ್ತಾನ್ ಚಂದ್ರ ಹಾಗೂ ಕೇಶವ್ ಎಂಬುವರು ಸಂಪರ್ಕದಲ್ಲಿದ್ದು, ಡ್ರಗ್ ಪೂರೈಕೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ. ಈ ಕುರಿತ ತಾಂತ್ರಿಕ ಸಾಕ್ಷಾಧಾರಗಳನ್ನು ಸಂಗ್ರಹಿಸಿದ್ದ ಗೋವಿಂದಪುರ ಪೊಲೀಸರು, ಮಸ್ತಾನ್ ಮತ್ತು ಕೇಶವ್ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

Recommended Video
ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಬಂಧನ ವೇಳೆ ದೊರೆತೆ ತಾಂತ್ರಿಕ ಸಾಕ್ಷಾಧಾರಗಳ ಹಿನ್ನೆಲೆಯಲ್ಲಿ ಮಸ್ತಾನ್ ಚಂದ್ರ ಮತ್ತು ಕೇಶವ್ ಎಂಬುವರ ಮನೆ ಮೇಲೆ ದಾಳಿ ನಡೆದಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ. ಈಗ ಲಭ್ಯವಿರುವ ಸಾಕ್ಷಾಧಾರಗಳ ಮೇಲೆ ಮಸ್ತಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರಿನ ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣ ಬೆಳಕಿಗೆ ಬರಲು ಮೂಲ ಕಾರಣ ಬಾಣಸವಾಡಿ ಪೊಲೀಸರು. ಈ ಹಿಂದೆ ದಾಖಲಿಸಿದ್ದ ಡ್ರಗ್ ಜಾಲ ಪ್ರಕರಣ. ಹಳೇ ಎಫ್‌ಐಆರ್ ಜಾಡು ಹಿಡಿದೇ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣ ಬಯಲಿಗೆ ಎಳೆದಿದ್ದರು. ಇನ್ನು ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೆಲ ದಿನಗಳ ಹಿಂದೆಯಷ್ಟೇ 25 ಆರೋಪಿಗಳ ವಿರುದ್ಧ ದೋಷಾರೋಪನ ಪಟ್ಟಿ ಸಲ್ಲಿಸಿದ್ದರು. ಇದೀಗ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಗೋವಿಂದಪುರ ಪೊಲೀಸರು ದಾಳಿ ನಡೆಸಿದ್ದು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications