ಬೆಂಗಳೂರಿನಲ್ಲಿ ಆನ್ಲೈನ್ ಮೂಲಕ ಮಾದಕ ವಸ್ತು ಮಾರಾಟ
ಬೆಂಗಳೂರು, ಮಾರ್ಚ್ 9: 'ಬೆಂಗಳೂರಿನ ಶಾಲಾ ಕಾಲೇಜುಗಳ ಆವರಣದಲ್ಲಿ ಹಾಡು ಹಗಲಲ್ಲೇ ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದೆ' ಎಂದು ಸರ್ವಜ್ಞನಗರ ಶಾಸಕ ಕೆಜೆ ಜಾರ್ಜ್ ಬೇಸರ ಬೇಸರ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಈ ಬಗ್ಗೆ ಚರ್ಚಿಸಿದ ಶಾಸಕ ಕೆ.ಜೆ. ಜಾರ್ಜ ''ಸರ್ವಜ್ಞನಗರ ವಿಧಾನಸಭೆ ವ್ಯಾಪ್ತಿಯ ಶಾಲಾ ಕಾಲೇಜುಗಳ ಆವರಣದಲ್ಲಿ ಹಾಡು ಹಗಲಲ್ಲೇ ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದೆ. ಕೆಲವು ಪೊಲೀಸರು ಈ ದಂಧೆಯೊಂದಿಗೆ ಕೈ ಜೋಡಿಸಿದ್ದಾರೆ. ಇಂಟರ್ನೆಟ್ ಮೂಲಕವೂ ಮಾದಕ ವಸ್ತುಗಳ ಆನ್ ಲೈನ್ ಮಾರಾಟ ನಡೆಯುತ್ತಿದೆ. ಕೆಲವು ವ್ಯಕ್ತಿಗಳು ಮಾದಕ ವಸ್ತುಗಳ ಮಾರಾಟವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾರೆ'' ಎಂದು ಅಳಲು ತೋಡಿಕೊಂಡಿದ್ದಾರೆ.
ಇದಕ್ಕೂ ಮುಂಚೆ ಮಾತನಾಡಿದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಪ್ರಿಯಾಂಕ ಖರ್ಗೆ ಅವರು ''ಜನವಸತಿ ಪ್ರದೇಶಗಳು, ಶಾಲಾಕಾಲೇಜು ಆವರಣ, ಮಂದಿರದ ಸಮೀಪದಲ್ಲೂ ಬಾರ್ ಅಂಡ್ ರೆಸ್ಟೋರೆಂಟ್ ಗಳಿಗೆ ಲೈಸೆನ್ಸ್ ನೀಡಲಾಗಿದೆ'' ಎಂದು ಅಬಕಾರಿ ಇಲಾಖೆಯ ವಿರುದ್ಧ ಆರೋಪಿಸಿದರು.

'ಕಲಬುರಗಿ ನಗರಕ್ಕೆ 111 ಬಾರ್ ಲೈಸೆನ್ಸ್ ನೀಡಲಾಗಿದೆ ಕಲ್ಬುರ್ಗಿ ನಗರದಲ್ಲಿ ಕಿರಾಣಿ ಅಂಗಡಿಗಳಲ್ಲೂ ಮದ್ಯಮಾರಾಟವಾಗುತ್ತಿದೆ' ಎಂದು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಉತ್ತರಿಸಿದ ಅಬಕಾರಿ ಸಚಿವ ನಾಗೇಶ್ 'ನಿಯಮ ಉಲ್ಲಂಘಿಸಿ ಮದ್ಯಮಾರಾಟದ ಬಗ್ಗೆ ಮಾಹಿತಿ ಇಲ್ಲ' ಎಂದರು.
ಮಧ್ಯಪ್ರವೇಶಿಸಿದ ಸ್ಪೀಕರ್ ಕಾಗೇರಿ, 'ಇಡೀ ರಾಜ್ಯಾದ್ಯಂತ ಈ ಸಮಸ್ಯೆ ಇದೆ, ನೀವು ಅಧಿಕಾರಿಗಳಿಗೆ ಟಾರ್ಗೆಟ್ ನೀಡುತ್ತಿರುವುದೇ ಇದಕ್ಕೆಲ್ಲ ಕಾರಣ. ಇದನ್ನು ನಿಯಂತ್ರಿಸದೇ ಹೋದರೆ ತೊಂದರೆಯಾಗುತ್ತದೆ' ಎಂದು ಸೂಚಿಸಿದರು.
ಅಬಕಾರಿ ಸಚಿವರ ಸಹಾಯಕ್ಕೆ ಧಾವಿಸಿದ ಗೃಹ ಸಚಿವ ಬೊಮ್ಮಾಯಿ ಅನಧೀಕೃತವಾಗಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications