• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡ್ರಗ್ಸ್ ಮಾಫಿಯಾ ಕುರಿತು ಮಾಜಿ ಸಿಎಂ ಎಚ್‌ಡಿಕೆ ಗಂಭೀರ ಆರೋಪ

|

ಬೆಂಗಳೂರು, ಆ. 31: ಸ್ಯಾಂಡಲ್​​ವುಡ್‌ನಲ್ಲಿ ಡ್ರಗ್ಸ್​​ ರೇವ್​​ ಪಾರ್ಟಿ ನಡೆಯುತ್ತದೆ. ಅನೇಕ ಸಿನಿ ತಾರೆಯರು. ರಾಜಕೀಯ ವ್ಯಕ್ತಿಗಳು. ದೊಡ್ಡ ದೊಡ್ಡ ನಿರ್ದೇಶಕರ ಮಕ್ಕಳು. ಹಿರಿಯ ನಟರ ಮಕ್ಕಳು ಈ ದಂಧೆಯಲ್ಲಿದ್ದಾರೆ ಎಂಬ ಹೇಳಿಕೆ ಚಂದನವನದಲ್ಲಿ ಮಹಾ ಸ್ಫೋಟವನ್ನೇ ಎಬ್ಬಿಸಿದೆ. ಇದರ ಬೆನ್ನಲ್ಲೇ ಡ್ರಗ್ ಸ್ಕ್ಯಾಂಡಲ್ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನನ್ನ ಸರ್ಕಾರ ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂದು ಹೊಸ ಬಾಂಬ್​​​ ಸಿಡಿಸಿದ್ದಾರೆ.

ಮಾದಕವಸ್ತು ಮಾಫಿಯಾ ಬಗ್ಗೆ ತುರುವೇಕೆರೆಯಲ್ಲಿ ಮಾತನಾಡಿರುವ ಮಾಜಿ ಸಿಎಂ ಅವರು, ನಾನು ಸಿಎಂ ಆಗಿದ್ದಾಗ ಡ್ರಗ್ಸ್​ ದಂಧೆಗೆ ಬ್ರೇಕ್​​​​​​ ಹಾಕಲು ಯತ್ನಿಸಿದ್ದೆ. ಈ ವೇಳೆ ಕೆಲವರು ಶ್ರೀಲಂಕಾಗೆ ಓಡಿ ಹೋದರು. ನನ್ನ ಸರ್ಕಾರ ಬೀಳಿಸೋಕೆ ಡ್ರಗ್ಸ್​, ಬೆಟ್ಟಿಂಗ್​ ಹಣ ಬಳಕೆ ಆಯ್ತು ಎಂದು ಮೈತ್ರಿ ಸರ್ಕಾರ ಪತನಕ್ಕೆ ಡ್ರಗ್ ಮಾಫಿಯಾ ಕಾರಣ ಎಂಬ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ.

ವಿಡಿಯೋ: ಡ್ರಗ್ಸ್ ವಿಚಾರದಲ್ಲಿ ಚಿರಂಜೀವಿ ಹೆಸರು ಕೇಳಿ ಬಂದಿದ್ದು ಬೇಸರ ತಂದಿದೆ: ನಟ ದರ್ಶನ್

ನನ್ನ ಸರ್ಕಾರ ಬೀಳಿಸೋಕೆ ಡ್ಯಾನ್ಸ್ ಬಾರ್​ಗಳ ಹಣವನ್ನ ಬಳಕೆ ಮಾಡಿಕೊಂಡಿದ್ದಾರೆ. ಕ್ರಿಕೆಟ್​ ಬೆಟ್ಟಿಂಗ್​​, ಪಬ್​​​ ಹಣ ಬಳಸಿ ಮೈತ್ರಿ ಸರ್ಕಾರ ಕೆಡವಿದ್ರು ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಇಂತಹ ಕೆಟ್ಟ ಮಾಫಿಯಾಗಳಿಗೆ ಚಿಕ್ಕ, ಚಿಕ್ಕ ಮಕ್ಕಳು ಬಲಿಯಾಗಬಾರದು. ಆದ್ದರಿಂದ ಇದರಲ್ಲಿ ಯಾವುದೇ ಮುಲಾಜಿಗೆ ಒಳಗಾಗದೆ, ಈ ಹಗರಣದ ಹಿಂದೆ ಯಾರೇ ಪ್ರಭಾವಿ ವ್ಯಕ್ತಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ಜರುಗಬೇಕು ಎಂದು ಎಚ್‌ಡಿಕೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

English summary
Former CM HD Kumaraswamy makes serious allegations of drug mafia in Karnataka. Drugs Mafia money use to dismantle alliance government said Former CM HD Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X