ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಡ್ತಿ ಮೀಸಲಾತಿ ವಿಳಂಬಕ್ಕೆ ಸಮ್ಮಿಶ್ರ ಸರ್ಕಾರ ಹೊಣೆ: ವೀರಯ್ಯ ಆರೋಪ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 14: ಬಡ್ತಿ ಮೀಸಲಾತಿ ಕಾಯ್ದೆ ವಿಳಂಬಕ್ಕೆ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವೇ ನೇರ ಕಾರಣ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್.ವೀರಯ್ಯ ಆರೋಪಿಸಿದರು.

ಮಂಗಳವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ್ತಿ ಮೀಸಲಾತಿ ಕಾಯ್ದೆ ಅಂಗೀಕಾರಗೊಂಡು ತಿಂಗಳು ಕಳೆದರೂ ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಜಾರಿ ಮಾಡದೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದು ಈ ವಿಷಯವನ್ನೇ ಮುಂದಿಟ್ಟುಕೊಂಡು ಬಿಜೆಪಿ ಎಸ್ಸಿ ಮೋರ್ಚಾ ಲೋಕಸಭಾ ಚುನಾವಣಾ ಪ್ರಚಾರ ನಡೆಸಲಿದೆ ಎಂದರು.

ಬಡ್ತಿ ಮೀಸಲಾತಿ: ಮತ್ತೆ 3 ತಿಂಗಳ ಸಮಯ ಕೇಳಿದ ಸರ್ಕಾರ ಬಡ್ತಿ ಮೀಸಲಾತಿ: ಮತ್ತೆ 3 ತಿಂಗಳ ಸಮಯ ಕೇಳಿದ ಸರ್ಕಾರ

ಇತ್ತೀಚೆಗೆ ರಾಜ್ಯ ಸರ್ಕಾರ ಬಡ್ತಿ ಮೀಸಲಾತಿಯ ಜ್ಯೇಷ್ಠತೆಗೆ ತಂದ ಸುಗ್ರೀವಾಜ್ಞೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದ್ದಕ್ಕೆ ಕಾಯ್ದೆ ಅಂಗೀಕಾರವಾಯಿತು. ಜೊತೆ ರಾಷ್ಟ್ರಪತಿ ಕೂಡ ಸುಗ್ರೀವಾಜ್ಞೆಯನ್ನು ಅಂಗೀಕರಿಸಿದ್ದಾರೆ.

D.S.Veerayya accuses state govt is anti Dalit

ಆದರೆ ಬಡ್ತಿ ಮೀಸಲಾತಿ ಕಾಯ್ದೆ ಅಂಗೀಕಾರಗೊಂಡು ತಿಂಗಳು ಕಳೆದರೂ ಸಮ್ಮಿಶ್ರ ಸರ್ಕಾರ ಕಾಯ್ದೆಯನ್ನು ಜಾರಿ ಮಾಡುತ್ತಿಲ್ಲ.ಇದು ಕಾಂಗ್ರೆಸ್ ಹಾಗು ಜೆಡಿಎಸ್ ಪಕ್ಷಗಳ ದಲಿತ ವಿರೋಧಿ ನೀತಿಗೆ ನಿದರ್ಶನವಾಗಿ. ಕೂಡಲೇ ಹಿಂಬಡ್ತಿ ಹೊಂದಿದ ನೌಕರರಿಗೆ ಮುಂಬಡ್ತಿ ನೀಡುವ ಆದೇಶವನ್ನು ಹೊರಡಿಸಬೇಕು ಎಂದು ಆಗ್ರಹಿಸಿದರು.

ರಾಷ್ಟ್ರಪತಿ ಅಂಕಿತ ಹಾಕಿದ ಕಾಯ್ದೆ ಜಾರಿಗೊಳಿಸಲು ಹಿಂದೇಟು ಹಾಕುತ್ತಿರುವ ಮೈತ್ರಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಪ್ರವಾಸ ಮಾಡಿ ಜಿಲ್ಲೆಗಳಲ್ಲಿ ಈ ಕುರಿತು ಜಾಗೃತಿ ಮೂಡಿಸುತ್ತೇವೆ, ಸಮ್ಮಿಶ್ರ ಸರ್ಕಾರದ ವಿರುದ್ಧ ಜಿಲ್ಲೆಗಳಲ್ಲಿ ಪ್ರತಿಭಟನೆಯನ್ನೂ ಮಾಡುತ್ತೇವೆ ಎಂದರು.

ಎಸ್‌ಸಿ, ಎಸ್‌ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿ: ಸುಪ್ರೀಂಕೋರ್ಟ್ ಅನುಮತಿ ಎಸ್‌ಸಿ, ಎಸ್‌ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿ: ಸುಪ್ರೀಂಕೋರ್ಟ್ ಅನುಮತಿ

ದಲಿತ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಿರುವ ತೀರ್ಪನ್ನು ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ನೀಡಿತ್ತು.ಆದರೆ ಮೋದಿ ಸರ್ಕಾರ ಎಚ್ಚೆತ್ತುಕೊಂಡು ಪ್ರಕರಣದ ಗಂಭೀರತೆಯನ್ನು ಅರ್ಥ ಮಾಡಿಕೊಂಡು ಕೇಂದ್ರದಿಂದ ಕಾಯ್ದೆಯನ್ನೇ ರಚಿಸಿ ಯಥಾಸ್ಥಿತಿ ಕಾಯ್ದುಕೊಳ್ಳುವ ಕೆಲಸ ಮಾಡಿತು.

ಮೋದಿ‌ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಪರ ಇದೆ ಎನ್ನಯವುದಕ್ಕೆ ಇದು ನಿದರ್ಶನ. ದಲಿತರ ಹಿತ ಕಾಯದ ಜೆಡಿಎಸ್ ಕಾಂಗ್ರೆಸ್ ಕೇವಲ ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ. ದಲಿತರು ಇನ್ನೂ ಸೂರಿಲ್ಲದೇ ಜೀವನ ನಡೆಸಲು ಕಾಂಗ್ರೆಸ್ ಆಡಳಿಯ ಕಾರಣ, ಅವರಿಂದ ದಲಿತರಿಗೆ ರಕ್ಷಣೆ, ಭದ್ರತೆ ಸಿಗುವುದಿಲ್ಲ ಎಂದರು.

English summary
State BJP SC morcha president D.S. Veerayya has accused the state collation government is anti Dalit as reservation in promotion act was not been implemented since the act was signed by the president of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X