• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ದುನಿಯಾ ವಿಜಯ್

|

ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ಬಂಧನವಾಗಿರುವ ನಟ ದುನಿಯಾ ವಿಜಯ್ ಅವರು ಮತ್ತಷ್ಟು ದಿನ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.

ಇಂದು ಸಂಜೆ ಕೋರಮಂಗಲದ ನ್ಯಾಯಾಧೀಶರ ಮುಂದೆ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರನ್ನ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಪರಪ್ಪನ ಅಗ್ರಹಾರದತ್ತ ದುನಿಯಾ ವಿಜಯ್ ಮತ್ತು ಗ್ಯಾಂಗ್ ನ ಪೊಲೀಸರು ಕರೆದೊಯ್ದಿದ್ದಾರೆ.

ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣದಲ್ಲಿ ದುನಿಯಾ ವಿಜಯ್ ಬಂಧನ

ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅವರ ಅಣ್ಣನ ಮಗ ಮಾರುತಿ ಗೌಡ ಅವರ ಮೇಲೆ ಕಳೆದ ರಾತ್ರಿ ಅಂಬೇಡ್ಕರ್ ಭವನದಲ್ಲಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ನಟ ದುನಿಯಾ ವಿಜಿ, ಟ್ರೈನರ್ ಪ್ರಸಾದ್, ಡ್ರೈವರ್ ಪ್ರಸಾದ್ ಮತ್ತು ಮಣಿ ಎಂಬುವವರನ್ನ ಹೈಗ್ರೌಂಡ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

'ತನ್ನ ಶ್ರಮವನ್ನ ಗಾಳಿಗೆ ತೂರಿಬಿಟ್ಟ ದುನಿಯಾ ವಿಜಿ' - ಜಗ್ಗೇಶ್ ಬೇಸರ

ಮಾರುತಿ ಚಿಕ್ಕಪ್ಪ ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್​ 365 ,342, 325 ಹಾಗೂ 506 ಅಡಿ ವಿಜಿ ಮತ್ತು ಸ್ನೇಹಿತರ ಮೇಲೆ ಕೇಸ್ ದಾಖಲಿಸಲಾಗಿತ್ತು.

English summary
Duniya vijay, famous kannada actor, who was arrested on sunday morning in connection with an assault case has been sent to Judicial custody for 14 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X