ಯಡಿಯೂರಪ್ಪಗೆ ಧನ್ಯವಾದ ತಿಳಿಸಿದ ದುನಿಯಾ ವಿಜಯ್
ಬೆಂಗಳೂರು, ಮೇ 14: ನಟ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಧನ್ಯವಾದ ತಿಳಿಸಿದ್ದಾರೆ. ಜಿಮ್ ತೆರೆಯಲು ಸರ್ಕಾರ ಮನಸ್ಸು ಮಾಡಿದ್ದು, ದುನಿಯಾ ವಿಜಯ್ ವಂದನೆ ಹೇಳಿದ್ದಾರೆ.
Recommended Video
''ಜಿಮ್ ಟ್ರೈನರುಗಳ ಕಷ್ಟ ಯಾವ ಮಟ್ಟದಲ್ಲಿದೆ ಎನ್ನುವುದರ ಬಗ್ಗೆ ನಾನು ಇತ್ತೀಚೆಗಷ್ಟೇ ಎರಡೆರಡು ಬಾರಿ ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದೇನೆ. ನಾನು ಒಬ್ಬ ಮಾಜಿ ಜಿಮ್ ಟ್ರೈನರ್ ಆಗಿ ಅವರು ಪ್ರಸ್ತುತ ಎದುರಿಸುವ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ವಿವರವಾಗಿ ಬರೆದಿದ್ದೆ. ಅದು ಮಾನ್ಯ ಮುಖ್ಯಮಂತ್ರಿಯವರಿಗೆ ನೀಡಿದ ಮನವಿಯೂ ಆಗಿತ್ತು.'' ಎಂದಿರುವ ದುನಿಯಾ ವಿಜಯ್ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
''ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರು ಇದೇ ತಿಂಗಳ 18ರಿಂದ ಹೋಟೆಲ್ ಜತೆಗೆ ಜಿಮ್ ಟ್ರೈನಿಂಗ್ ಸೆಂಟರ್ ಗಳನ್ನು ಕೂಡ ತೆರೆಯಲು ಸಮ್ಮತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ಈ ಸಕಾರಾತ್ಮಕ ಸ್ಪಂದನೆಗೆ ನಾಡಿನ ಎಲ್ಲ ಜಿಮ್ ಟ್ರೈನರುಗಳ ಪರವಾಗಿ ಕೋಟಿ ವಂದನೆಗಳು. ಅದೇ ಸಂದರ್ಭದಲ್ಲಿ ಜಿಮ್ ಟ್ರೈನರುಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಕಳಕಳಿಯ ಅಪೇಕ್ಷೆ. ವಂದನೆಗಳು.'' ಎಂದು ದುನಿಯಾ ವಿಜಯ್ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ದುನಿಯಾ ವಿಜಯ್ ಸೋಷಿಯಲ್ ಮೀಡಿಯಾದಲ್ಲಿ ಜಿಮ್ ಟ್ರೈನರ್‌ಗಳ ಕಷ್ಟದ ಬಗ್ಗೆ ತಿಳಿಸಿದ್ದರು. ಜಿಮ್ ತೆರೆಯಲು ಅವಕಾಶ ನೀಡಬೇಕು ಎಂದಿದ್ದರು. ಈಗ ಸರ್ಕಾರ ಜಿಮ್ ತೆರೆಯಲು ಸಮ್ಮತಿ ನೀಡಲು ನಿರ್ಧಾರ ಮಾಡಿದೆ.
ಮೇ 17ರಂದು ಮೂರನೇ ಹಂತದ ಲಾಕ್ಡೌನ್ ಮುಕ್ತಾಯವಾಗಲಿದ್ದು, ಜಿಮ್, ಫಿಟ್ನೆಸ್ ಕೇಂದ್ರ, ಗಾಲ್ಫ್ ಕೋರ್ಸ್ ತೆರೆಯಲು ಸರ್ಕಾರ ಅನುಮತಿ ನೀಡುವ ಸಾಧ್ಯತೆ ಹೆಚ್ಚಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications