DySP Kanakalakshmi: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ; ಡಿವೈಎಸ್‌ಪಿ ಕನಕಲಕ್ಷ್ಮಿ ಬಂಧನ
ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಡಿವೈಎಸ್‌ಪಿ ಕನಕಲಕ್ಷ್ಮಿ ಅವರನ್ನು ಮಂಗಳವಾರ ಬಂಧಿಸಿದೆ. ಆತ್ಮಹತ್ಯೆ ಮಾಡಿಕೊಂಡಿದ್ದ ವಕೀಲೆ ಜೀವಾ ಡೆತ್‌ನೋಟ್‌ನಲ್ಲಿ ಡಿವೈಎಸ್‌ಪಿ ಕನಕಲಕ್ಷ್ಮಿ ವಿರುದ್ಧ ಕಿರುಕುಳ ಮತ್ತು ಲಂಚದ ಆರೋಪ ಮಾಡಿದ್ದರು. ಘಟನೆ ಬಗ್ಗೆ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದ್ದು ಇದೀಗ ಪೊಲೀಸ್ ಅಧಿಕಾರಿಯನ್ನು ಬಂಧಿಸಿದೆ.
ಬೆಂಗಳೂರಿನ ಬನಶಂಕರಿ ನಗರದ ರಾಘವೇಂದ್ರ ಲೇಔಟ್‌ನ ಮನೆಯೊಂದರಲ್ಲಿ ವಾಸವಿದ್ದ ವಕೀಲೆ ಜೀವಾ, ನವೆಂಬರ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಜೀವಾ ಬರೆದಿದ್ದ ಡೆತ್ ನೋಟ್ ಆಧರಿಸಿ ಅವರ ಸಹೋದರಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸುತ್ತಿದ್ದರು, ಆದರೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು, ಬಳಿಕ ಹೈಕೋರ್ಟ್ ಪ್ರಕರಣದ ತನಿಖೆ ನಡೆಸಲು ಸಿಬಿಐ ಅಧಿಕಾರಿಯನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿತ್ತು.

ಪ್ರಕರಣದ ವಿಚಾರಣೆಗೆ ಹಾಜರಾಗಬೇಕು ಎಂದು ಎಸ್‌ಐಟಿ ಡಿವೈಎಸ್‌ಪಿ ಕನಕಲಕ್ಷ್ಮಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು, ಮಂಗಳವಾರ ಕನಕಲಕ್ಷ್ಮಿ ವಿಚಾರಣೆಗೆ ಹಾಜರಾಗಿದ್ದು ಈ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿದೆ.
ಜೀವಾ ಡೆತ್‌ನೋಟ್‌ನಲ್ಲಿ ಏನಿದೆ?
ಕರ್ನಾಟಕ ಭೋವಿ ಕಾರ್ಪೊರೇಷನ್ ಹಗರಣದಲ್ಲಿ ತನಿಖೆ ಸಂದರ್ಭದಲ್ಲಿ ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ ಕನಕಲಕ್ಷ್ಮಿ ಅವರು ತನ್ನನ್ನು ವಿವಸ್ತ್ರಗೊಳಿಸಿದ್ದಲ್ಲದೆ 25 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ಇದರಿಂದಾಗಿ ಮಾನಸಿಕವಾಗಿ ನೊಂದಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಪತ್ರದಲ್ಲಿ ಆರೋಪಿಸಲಾಗಿದೆ.
ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಭೋವಿ ಕಾರ್ಪೊರೇಷನ್ ಅಕ್ರಮಗಳ ತನಿಖೆಯನ್ನು ಸಿಐಡಿಗೆ ವಹಿಸಿತ್ತಿ. ಡಿವೈಎಸ್‌ಪಿ ಕನಕಲಕ್ಷ್ಮಿ ವಿಚಾರಣೆಯ ನೇತೃತ್ವ ವಹಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ 34 ವರ್ಷದ ವಕೀಲೆ ಜೀವಾ ಅವರನ್ನು ವಶಕ್ಕೆ ಪಡೆಯಲಾಗಿತ್ತು, ವಿಚಾರಣೆಯ ಕೆಲ ದಿನದ ಬಳಿಕ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು.
ಏನಿದು ಭೋವಿ ಕಾರ್ಪೊರೇಷನ್ ಹಗರಣ?
ಕೆ.ಎನ್. ಸೂರ್ಯ ಕಲಾವತಿ ಮಾರ್ಚ್ 18, 2023 ರಂದು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಹಣಕಾಸು ವಂಚನೆ ಆರೋಪದ ಮೇಲೆ ದೂರು ನೀಡಿದ್ದರು. ಭೋವಿ ಅಭಿವೃದ್ಧಿ ನಿಗಮದಿಂದ ಸಾಲ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ ವಂಚಕರು ಮಹಿಳೆಯರು ಸೇರಿದಂತೆ ಅನೇಕ ವ್ಯಕ್ತಿಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದರು.
ಸರಸ್ವತಿ ಮತ್ತು ಲಕ್ಷ್ಮಿ ಎನ್ನುವವರು ಅಕ್ಟೋಬರ್ 2021 ರಲ್ಲಿ ಕಲಾವತಿಯನ್ನು ಸಂಪರ್ಕಿಸಿ, ಮರುಪಾವತಿಯ ನಂತರ ₹25,000 ಲಂಚಕ್ಕೆ ಪ್ರತಿಯಾಗಿ ಸಾಲದ ಭರವಸೆ ನೀಡಿದರು. ಅವರು ಅಗತ್ಯ ದಾಖಲೆಗಳು, ಎರಡು ಖಾಲಿ ಚೆಕ್‌ಗಳನ್ನು ನೀಡಿದ್ದರು ಮತ್ತು ಖಾಲಿ ಕಾಗದಗಳಿಗೆ ಸಹಿ ಹಾಕಿದರು. ನಂತರ ತನಗೆ ತಿಳಿಯದಂತೆ ತನ್ನ ದಾಖಲೆಗಳನ್ನು ಬಳಸಿಕೊಂಡು 5 ಲಕ್ಷ ರೂಪಾಯಿ ಸಾಲ ಪಡೆಯಲಾಗಿದೆ ಎಂದು ತಿಳಿದುಕೊಂಡಿದ್ದಾರೆ. ಇದರಲ್ಲಿ 4.75 ಲಕ್ಷ ರೂಪಾಯಿ ಹಣವನ್ನು ನ್ಯೂ ಡ್ರೀಮ್ಸ್ ಎಂಟರ್‌ಪ್ರೈಸಸ್ ಎಂಬ ಕಂಪನಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದ್ದರು.
ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ. ನಾಗರಾಜಪ್ಪ ಅವರ ಮನೆಯಲ್ಲೇ ವಕೀಲೆ ಜೀವಾ ಸಹೋದರಿ ಜೊತೆ ಬಾಡಿಗೆಗೆ ವಾಸವಿದ್ದರು. ತಮ್ಮ ಸಹೋದರಿ ಸಂಗೀತಾ ಒಡೆತನದ ಕಂಪನಿಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದರು ಎಂದು ಸಿಐಡಿ ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಪ್ರಕರಣದ ತನಿಖೆ ಮಾಡುವ ಸಂದರ್ಭದಲ್ಲಿ ವಕೀಲೆ ಜೀವಾ ಸೇರಿದಂತೆ ಹಲವು ವ್ಯಕ್ತಿಗಳ ವಿಚಾರಣೆ ನಡೆಸಲಾಯಿತು. ಈ ವಿಚಾರಣೆ ಬಳಿಕವೇ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸಿದ ಸಿಐಡಿ 2018 ರಿಂದ 2024ರವರೆಗೆ 5 ವರ್ಷಗಳಲ್ಲಿ 90 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ತಿಳಿಸಿತ್ತು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications