ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಲ್ಕು ಮೆಟ್ರೋ ನಿಲ್ದಾಣಗಳಲ್ಲಿ ಇ-ಚಾರ್ಜಿಂಗ್ ಘಟಕ ವಾರದಲ್ಲಿ ಶುರು

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 27: ಬೆಂಗಳೂರಲ್ಲಿ ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಉತ್ತೇಜನ ನೀಡಲಾಗುತ್ತಿದೆ. ಇನ್ನು ಒಂದು ವಾರದ ಒಳಗೆ ನಾಲ್ಕು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇ-ಚಾರ್ಜಿಂಗ್ ಸ್ಟೇಷನ್ ಗಳನ್ನು ಆರಂಭಿಸಲಾಗುತ್ತಿದೆ.

 ಮೆಟ್ರೋ ನಿಲ್ದಾಣದಲ್ಲಿ ಶೀಘ್ರ ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ ಆರಂಭ ಮೆಟ್ರೋ ನಿಲ್ದಾಣದಲ್ಲಿ ಶೀಘ್ರ ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ ಆರಂಭ

ಬೈಯಪ್ಪನಹಳ್ಳಿ, ಎಂಜಿ ರಸ್ತೆ, ನಾಯಂಡಹಳ್ಳಿ , ಜಯನಗರ ಮೆಟ್ರೋ ನಿಲ್ದಾಣಗಳಲ್ಲಿ ಇ-ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲಾಗುತ್ತಿದೆ. ಇನ್ನು ಒಂದೇ ವಾರದಲ್ಲಿ ಚಾರ್ಜಿಂಗ್ ಯಂತ್ರಗಳನ್ನು ಅಳವಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

 ಪ್ರಮುಖ ಹೆದ್ದಾರಿಗಳಲ್ಲಿ ಶೀಘ್ರ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಕೇಂದ್ರ ಪ್ರಮುಖ ಹೆದ್ದಾರಿಗಳಲ್ಲಿ ಶೀಘ್ರ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಕೇಂದ್ರ

ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಚಾರ್ಜಿಂಗ್ ಯಂತ್ರವನ್ನು ಅಳವಡಿಸಲಾಗುತ್ತಿದೆ. ಚಾರ್ಜ್ ಮಾಡಿಕೊಳ್ಳುವ ವಿದ್ಯುತ್ ಯುನಿಟ್‌ಗೆ 4.85 ರೂ. ದರ ನಿಗದಿಪಡಿಸಲಾಗಿದೆ. ಇತ್ತೀಚೆಗೆ ಬೆಸ್ಕಾಂ ತನ್ನ ಕೆ.ಆರ್. ಸರ್ಕಲ್ ನ ಕಚೇರಿಯಲ್ಲಿ ಆರಂಭಿಸಿತ್ತು. ನಗರದಲಲ್ಇ ಒಟ್ಟು 100 ಕಡೆಗಳಲ್ಲಿ ಚಾರ್ಜಿಂಗ್ ಆರಂಭಿಸಲು ಬೆಸ್ಕಾಂ ಆಲೋಚಿಸಿದೆ.

e-charging centers in four metro stations within a week

ಇದಕ್ಕಾಗಿ ಸ್ಥಳಗಳನ್ನು ಹುಡುಕಲಾಗುತ್ತಿದೆ. ಮೆಟ್ರೋ ನಿಲ್ದಾಣ ಸೇರಿದಂತೆ ಬಿಎಂಆರ್ ಸಿಲ್ ಹಾಗೂ ಬಿಬಿಎಂಪಿ ಆಸ್ತಿಗಳಲ್ಲಿ 300 ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ತಕ್ಕಂತೆ ಮೆಟ್ರೋದ ಎಲ್ಲಾ ನಿಲ್ದಾಣಗಳಲ್ಲಿ ಚಾರ್ಜಿಂಗ್ ಘಟಕ ಆರಂಭಿಸಲು ನಿರ್ಧರಿಸಲಾಗಿದೆ.

 ಮೆಟ್ರೋ ನಿಲ್ದಾಣದಲ್ಲಿ ಶೀಘ್ರ ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ ಆರಂಭ ಮೆಟ್ರೋ ನಿಲ್ದಾಣದಲ್ಲಿ ಶೀಘ್ರ ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ ಆರಂಭ

ನಗರದಲ್ಲಿ ಸುಮಾರು ಹತ್ತು ಸಾವಿರ ಎಲೆಕ್ಟ್ರಿಕ್ ವಾಹನಗಳಿರಬಹುದು ಎಂದು ಅಂದಾಜಿಸಲಾಗಿದೆ. ಈ ಎಲ್ಲಾ ವಾಹನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಚಾರ್ಜಿಂಗ್ ಮಾಡುವಂತಹ ವ್ಯವಸ್ಥೆ ಇಲ್ಲಿಯವರೆಗೆ ಇರಲಿಲ್ಲ. ಮೆಟ್ರೋ 39 ನಿಲ್ದಾಣಗಳಲ್ಲಿ ಬಾಡಿಗೆ ಬೈಕ್ ಸೇವೆ ಪರಿಚಯಿಸಲಾಗಿದೆ. ಒಟ್ಟು ಬೈಕ್ ಗಳಲ್ಲಿ ಶೇ.10 ಎಲೆಕ್ಟ್ರಿಕ್ ಬೈಕ್ ಗಳಿವೆ.

English summary
BMRCL is installing e-charging centers at MG road, Jayanagar, Mysuru road and Baiyappanahalli metro stations. It was said that there are 10,000 electric vehicles in the city at present.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X