E-Khata Good News: ಇ-ಖಾತಾ ವಿತರಣೆಗೆ ಸೇವಾ ಕೇಂದ್ರ ಆರಂಭ: ಜಿಬಿಎ
Bengaluru E-Khata: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಇ-ಖಾತಾ ತ್ವರಿತ ವಿಲೇವಾರಿಗಾಗಿ ಪಾಸ್ ಪೋರ್ಟ್ ಮಾದರಿಯಲ್ಲಿ 'ಸೇವಾ ಕೇಂದ್ರಗಳ" ಪ್ರಾರಂಭಿಸಲಾಗುವುದೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿನಾಥ್ ರವರು ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿರುವ ಕುರಿತು ಜಿಬಿಎ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಇ-ಖಾತಾ ಪಡೆಯುವಲ್ಲಿ ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಜಿಬಿಎ ಹೊಸದಾಗಿ ಪಾಸ್ ಪೋರ್ಟ್ ಮಾದರಿಯಲ್ಲಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದೆಂದು ಹೇಳಿದರು.

ಕಣ್ಗಾವಲು ತಂಡ ನಿಯೋಜನೆ
ಇ-ಖಾತಾ ವಿಚಾರದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ನಿಗಾವಗಿಸಲು 25 ಜನ ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡ ತಂಡಗಳನ್ನು ಒಳಗೊಂಡ ಕಣ್ಗಾವಲು ತಂಡವನ್ನು ನಿಯೋಜನೆ ಮಾಡಲಾಗಿದೆ. ಅದರ ಮೂಲಕ ಕಾರಣಗಳಿಲ್ಲದೆ ತಿರಸ್ಕರಿಸಿದವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಾಗುವುದೆಂದು ತಿಳಿಸಿದರು.
8 ಲಕ್ಷ ಇ-ಖಾತಾ ವಿತರಣೆ
ಜಿಬಿಎ ವ್ಯಾಪ್ತಿಯಲ್ಲಿ ಈಗಾಗಲೇ 8 ಲಕ್ಷ ಇ-ಖಾತಾ ಪಡೆದಿದ್ದಾರೆ. ಬೆಂಗಳೂರು ಒನ್ ಹಾಗೂ ಸುಮಾರು 1,000 ಸ್ವಯಂ ಸೇವಕರ ಮೂಲಕವೂ ಇ-ಖಾತಾ ಪಡೆಯಬಹುದಾಗಿದೆ. ನಾಗರಿಕರಿಗೆ ಪಾರದರ್ಶಕತೆ ಹಾಗೂ ಸುಗಮವಾಗಿ ಇ-ಖಾತಾ ನೀಡುವ ಸಲುವಾಗಿ ರೌಂಡ್ ರಾಬಿನ್ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಅದರಿಂದ ಕೆಲ ಸಮಸ್ಯೆಗಳಾಗಿತ್ತು. ಇದೀಗ ಆ ವ್ಯವಸ್ಥೆಯನ್ನು ತೆಗೆದುಹಾಗಿ ಬೇರೆ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
22,539 ಗುಂಡಿಗಳ ದುರಸ್ತಿ
ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ನಗರದಾದ್ಯಂತ ರಸ್ತೆ ಗುಂಡಿಗಳನ್ನು ಯುದ್ಧೋಪಾದಿಯಲ್ಲಿ ಮುಚ್ಚಲಾಗುತ್ತಿದ್ದು, ಈವರೆಗೆ 22,539 ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ನಿರಂತರವಾಗಿ ಬಂದ ಪರಿಣಾಮ ತಡವಾಗಿದ್ದು, ಮುಂದಿನ ವರ್ಷ ರಸ್ತೆಗುಂಡಿಗಳನ್ನು ನಿಯಂತ್ರಿಸುವ ಸಲುವಾಗಿ ಧೀರ್ಘಕಾಲಿಕ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ನಗರದಲ್ಲಿ 1,682 ಕಿ.ಮೀ ಆರ್ಟಿರಿಯಲ್ ಸಬ್ ಆರ್ಟಿಯಲ್ ರಸ್ತೆಗಳಿದ್ದು, ಸುಮಾರು 8 ವರ್ಷಗಳಿಂದ ಯಾವುದೇ ಅನುದಾನ ವ್ಯಯಿಸಿಲ್ಲ. ಈ ರಸ್ತೆಗಳನ್ನು ಅಭವೃದ್ಧಿಪಡಿಸಿದರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳು ಕಡಿಮೆಯಾಗಿ ಸಂಚಾರ ದಟ್ಟಣೆ ಕ್ರಮೇಣ ನಿಯಂತ್ರಣವಾಗಲಿದೆ ಎಂದು ಹೇಳಿದರು.












Click it and Unblock the Notifications