E Khata: ಬೆಂಗಳೂರು ಆಸ್ತಿದಾರರಿಗೆ ಖಾತಾ ವಿಚಾರದಲ್ಲಿ ಗುಡ್‌ನ್ಯೂಸ್‌: 6 ವಾರಗಳಲ್ಲಿ 6,169 ಅರ್ಜಿಗಳ ವಿಲೇವಾರಿ

E Khata: ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ನೂತನ ಸರ್ಕಾರವು ಭಾರೀ ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರಿನಲ್ಲಿ ಆಸ್ತಿದಾರರು ಹಲವು ದಿನಗಳಿಂದ ಎದುರಿಸುರತ್ತಿರುವ ಇ ಖಾತಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ - ಇ-ಖಾತಾ ಸೇವೆ ಮತ್ತಷ್ಟು ಸುಲಭ ಮಾಡುವುದಕ್ಕೆ ಮುಂದಾಗಿದೆ. ಇದರ ಭಾಗವಾಗಿ 6 ವಾರಗಳಲ್ಲಿ 6169 ಅರ್ಜಿಗಳ ವಿಲೇವಾರಿ, ಬಾಕಿ ಅರ್ಜಿಗಳ ಇತ್ಯರ್ಥಕ್ಕೆ ವೇಗ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯಡಿ ಆರಂಭಿಸಿರುವ "ನನ್ನ ಇ-ಖಾತಾ, ನನ್ನ ಹಕ್ಕು" ಅಭಿಯಾನಕ್ಕೆ ನಾಗರಿಕರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು, ಕಳೆದ 6 ವಾರಗಳಲ್ಲಿ 6169 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂದುವರಿದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 50 ಸ್ಥಳಗಳಲ್ಲಿ ನಡೆದ ವಿಶೇಷ ಅಭಿಯಾನಕ್ಕೆ ಸಾರ್ವಜನಿಕರು ಭೇಟಿ ನೀಡಿ ಇ-ಖಾತಾ ಸಂಬಂಧಿತ ಸೇವೆಗಳ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.

E Khata

ಈ ಅಭಿಯಾನದ ಮೂಲಕ ನಾಗರಿಕರಿಗೆ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳ ಮತ್ತು ಸುಲಭಗೊಳಿಸಲಾಗಿದ್ದು, ಖಾತಾ ಸಂಬಂಧಿತ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತಿದೆ. ಶಿಬಿರಗಳಲ್ಲಿ ಅರ್ಜಿಗಳ ಪರಿಶೀಲನೆ, ದಾಖಲೆಗಳ ತಪಾಸಣೆ, ತಾಂತ್ರಿಕ ದೋಷಗಳ ನಿವಾರಣೆ, ಮಾಹಿತಿ ತಿದ್ದುಪಡಿ ಹಾಗೂ ಇತರೆ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲಿಯೇ ಪರಿಹಾರ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

ಇ-ಖಾತಾ ತಿದ್ದುಪಡಿಗೆ ಹೊಸ ಫಾರ್ಮುಲಾ! ಉಪ ಆಯುಕ್ತರ ಹೆಗಲಿಗೆ ಮಹತ್ವದ ಜವಾಬ್ದಾರಿ
ಇ-ಖಾತಾ ತಿದ್ದುಪಡಿಗೆ ಹೊಸ ಫಾರ್ಮುಲಾ! ಉಪ ಆಯುಕ್ತರ ಹೆಗಲಿಗೆ ಮಹತ್ವದ ಜವಾಬ್ದಾರಿ

6 ವಾರಗಳಲ್ಲಿ 13,835 ಮಂದಿ ಅಭಿಯಾನ ಸ್ಥಳಗಳಿಗೆ ಭೇಟಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ರಾಜ್ಯ ಸರ್ಕಾರದ 6ನೇ ಗ್ಯಾರಂಟಿ *"ಭೂ ಗ್ಯಾರಂಟಿ" ಯೋಜನೆಯಡಿ ಆರಂಭಿಸಿರುವ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನದಲ್ಲಿ 6 ವಾರಗಳಲ್ಲಿ 13,835 ಮಂದಿ ಭೇಟಿ ನೀಡಿದ್ದಾರೆ. ಈ ಪೈಕಿ 6169 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಈಚೆಗೆ ನಡೆದ ನನ್ನ ಇ-ಖಾತಾ ನನ್ನ ಹಕ್ಕು ಅಭಿಯಾನಕ್ಕೆ ಇ-ಖಾತಾ, ಮ್ಯುಟೆಷನ್, ತಿದ್ದುಪಡಿ, ಹೊಸ ಇ-ಖಾತಾ, ಬಿ ಟು ಎ ಖಾತಾ ಹಾಗೂ ದೂರುಗಳ ಅರ್ಜಿಗಳು ಸೇರಿದಂತೆ ಇತರೆ ವಿಷಯಗಳಿಗಾಗಿ 1,206 ಮಂದಿ ಭೇಟಿ ನೀಡಿದ್ದು, ಈ ಪೈಕಿ ಸ್ಥಳದಲ್ಲಿಯೇ 802 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

E-Khata ಅಭಿಯಾನದಲ್ಲಿ 12,629 ಆಸ್ತಿ ಮಾಲೀಕರು ಭಾಗಿ, ಬಾಕಿ ಅರ್ಜಿಗಳ ವಿಲೇವಾರಿಗೆ ವೇಗ: ಜಿಬಿಎ
E-Khata ಅಭಿಯಾನದಲ್ಲಿ 12,629 ಆಸ್ತಿ ಮಾಲೀಕರು ಭಾಗಿ, ಬಾಕಿ ಅರ್ಜಿಗಳ ವಿಲೇವಾರಿಗೆ ವೇಗ: ಜಿಬಿಎ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+