E-khata: ಇ - ಖಾತಾ: ನಾಳೆಯಿಂದ ಒಂದು ತಿಂಗಳು ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್: ಹೊಸ ಅಪ್ಡೇಟ್ಸ್!
E-khata: ಬೆಂಗಳೂರಿನ ಆಸ್ತಿದಾರರಿಗೆ ಹಾಗೂ ಇ ಖಾತಾ ಮಾಡಿಸಿಕೊಳ್ಳಲು ಕಾಯುತ್ತಿರುವ ಆಸ್ತಿದಾರರಿಗೆ ರಾಜ್ಯ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಭಾನುವಾರ ವಲಯವಾರು ಬೃಹತ್ ಇ ಖಾತಾ ಮೇಳಕ್ಕೆ ರಾಜ್ಯ ಸರ್ಕಾರವು ಚಾಲನೆ ನೀಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇ ಖಾತಾ ಮೇಳಕ್ಕೆ ಚಾಲನೆ ನೀಡಿದ್ದಾರೆ. ಭಾನುವಾರದಂದು ಇ ಖಾತಾ ಮೇಳಕ್ಕೆ ಚಾಲನೆ ನೀಡಿರುವ ಅವರು ಇದೇ ಸಂದರ್ಭದಲ್ಲಿ ಆಸ್ತಿದಾರರಿಗೆ ಮಹತ್ವದ ಅಪ್ಡೇಟ್ಸ್ ಹಾಗೂ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಈ ಮೂಲಕ ಜುಲೈ 1ರಿಂದ ಇ - ಖಾತಾ ವಿಚಾರದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಅದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಇ - ಖಾತಾ ವಿಚಾರದಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮವೊಂದನ್ನು ತೆಗೆದುಕೊಂಡಿದೆ. ಇದರ ಭಾಗವಾಗಿ ಆಸ್ತಿದಾರರಿಗೆ ಸುಲಭವಾಗಿ ಇ ಖಾತಾ ಸಿಗುವಂತೆ ಮಾಡುವುದಕ್ಕೂ ಕೆಲವೊಂದು ಕ್ರಮಗಳನ್ನು ಅನುಸರಿಸಲಾಗಿದೆ. ಜುಲೈ 1, 2025 ರಿಂದ ಒಂದು ತಿಂಗಳ ಕಾಲ ಇ-ಖಾತಾ ಅಭಿಯಾನ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಒಂದು ತಿಂಗಳು ಇ ಖಾತಾ ಅಭಿಯಾನ: ಇನ್ನು ನಾಳೆಯಿಂದ (ಜುಲೈ 1) ಬೆಂಗಳೂರಿನಾದ್ಯಂತ ಇ ಖಾತಾ ಅಭಿಯಾನ ನಡೆಯಲಿದೆ ಎಂದು ಡಿ.ಕೆ ಶಿವಕುಮಾರ್ ಅವರೇ ಅಪ್ಡೇಟ್ಸ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಬರೋಬ್ಬರಿ 25 ಲಕ್ಷಕ್ಕೂ ಹೆಚ್ಚು ಆಸ್ತಿದಾರರು ಇದ್ದಾರೆ. ಆದರೆ, ಇಲ್ಲಿಯ ವರೆಗೆ ಕೇವಲ 5 ಲಕ್ಷಕ್ಕೂ ಹೆಚ್ಚು ಆಸ್ತಿದಾರರಿಗೆ ಮಾತ್ರ ಇ ಖಾತಾ ನೀಡಲಾಗಿದೆ. ಹೀಗಾಗಿ ಎಲ್ಲಾ ಆಸ್ತಿದಾರರಿಗೂ ಇ ಖಾತಾ ನೀಡುವುದಕ್ಕೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರಿಂದ ಎಲ್ಲಾ ಆಸ್ತಿದಾರರಿಗೂ ಇ ಖಾತಾ ಸಿಗಲಿದೆ ಎಂದು ಹೇಳಲಾಗಿದೆ.
ಮುಂದುವರಿದು ಡಿ.ಕೆ ಶಿವಕುಮಾರ್ ಅವರು, ಈ ಅಭಿಯಾನದಲ್ಲಿ ನೀವುಗಳು ಭಾಗವಹಿಸಿ ನಿಮ್ಮ ಆಸ್ತಿ ಇ ಖಾತೆ ಮಾಡಿಸಿಕೊಳ್ಳಿ ವಂಚನೆಯಿಂದ ತಪ್ಪಿಸಿಕೊಳ್ಳಿ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ಇಂತಹ ಕಾರ್ಯಕ್ರಮ ಮಾಡುತ್ತೇವೆ. ನಿಮಗೆ ನಮ್ಮ ಅಧಿಕಾರಿಗಳು, ಕಾರ್ಯಕರ್ತರು ಸಹಕಾರ ನೀಡಲಿದ್ದಾರೆ ಎಂದಿದ್ದಾರೆ.
ಇನ್ನು ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಸರ್ಕಾರದಿಂದ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಇ-ಖಾತಾ ಮೇಳಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ.
ಬ್ಯಾಟರಾಯಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 7 ವಾರ್ಡ್ ಗಳು ಬರಲಿದ್ದು, 3 ಉಪ ವಿಭಾಗಗಳಿಗೆ ಪ್ರತ್ಯೇಕವಾಗಿ ಬಣ್ಣ ಆಧಾರಿತ ಕೌಂಟರ್ ಗಳನ್ನು ಸ್ಥಾಪಿಸಲಾಗಿತ್ತು. ಅದರ ಜೊತೆಗೆ ಬೇರೆ ವಲಯಗಳಿಂದ ಬರುವವರಿಗೂ ಕೂಡಾ ಪ್ರತ್ಯೇಕ ಕೌಂಟರ್ ಅನ್ನು ಸ್ಥಾಪಿಸಲಾಗಿತ್ತು. 100 ಕ್ಕೂ ಹೆಚ್ಚು ಲ್ಯಾಪ್ ಟಾಪ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಈ ಮೂಲಕ ಇ -ಖಾತೆ ಮಾಡಿಸಿಕೊಳ್ಳಬೇಕು ಎಂದು ಬರುವ ಆಸ್ತಿದಾರರಿಗೆ ಯಾವುದೇ ರೀತಿಯ ಸಮಸ್ಯೆಯಾಗದ ರೀತಿ ಇ-ಖಾತಾ ಮಾಡಿಕೊಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಇ-ಖಾತಾ ಮೇಳಕ್ಕೆ ಹೆಚ್ಚಿನ ನಿರೀಕ್ಷೆಗೂ ಮೀರಿ ಬಂದ ಪರಿಣಾಮ ನಾಳೆಯೂ ಖಾತಾ ಮೇಳವನ್ನು ಮುಂದುವರಿಸಲಾಗುವುದು ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಬೃಹತ್ ಇ-ಖಾತಾ ಮೇಳದಲ್ಲಿ 4,000 ಜನರಿಗೆ ಟೋಕನ್ ನೀಡಲಾಗಿತ್ತು. ಅದರಲ್ಲಿ 1,679 ಅರ್ಜಿಗಳನ್ನು ಇ ಖಾತಾ ನೀಡುವುದಕ್ಕೆ ಪರಿಗಣಿಸಲಾಗಿದೆ. ಅದರಂತೆ 677 ಅರ್ಜಿಗಳನ್ನು ಅನುಮೋದಿಸಿ ಸ್ಥಳದಲ್ಲಿಯೇ ಅಂತಿಮ ಇ-ಖಾತಾ ನೀಡಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ಅವರು ತಿಳಿಸಿದ್ದಾರೆ.












Click it and Unblock the Notifications