E-Khata: ಪ್ರಾಪರ್ಟಿ ಟ್ಯಾಕ್ಸ್ ಐಡಿಯ ಮೂಲಕವೂ ಇನ್ಮುಂದೆ ಸಿಗಲಿದೆ ಇ - ಖಾತಾ, ಪಡೆದುಕೊಳ್ಳುವುದು ಹೇಗೆ
E Khata: ಬೆಂಗಳೂರಿನ ಆಸ್ತಿದಾರರು ಬಹುದಿನಗಳಿಂದ ಎದುರಿಸುತ್ತಿದ್ದ ಸಮಸ್ಯೆಗೆ ಕೊನೆಗೂ ಪರಿಹಾರ ಸಿಕ್ಕಂತಾಗಿದೆ. ಬೆಂಗಳೂರಿನಲ್ಲಿ ಆಸ್ತಿದಾರರು ಇ ಖಾತಾ ಪಡೆದುಕೊಳ್ಳುವುದಕ್ಕೆ ಹಲವು ದಿನಗಳಿಂದ ಸರ್ಕಸ್ ನಡೆಸುತ್ತಿದ್ದಾರೆ. ಇದೀಗ ಬೆಂಗಳೂರಿನ ಆಸ್ತಿದಾರರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಗುಡ್‌ನ್ಯೂಸ್ ಕೊಟ್ಟಿದೆ. ಇನ್ಮುಂದೆ ಆಸ್ತಿದಾರರು ಇ ಖಾತಾ ಪಡೆದುಕೊಳ್ಳುವುದು ಅತ್ಯಂತ ಸುಲಭವಾಗಲಿದೆ. ಇ ಖಾತಾಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ನೀಡಿರುವ ಹೊಸ ಅಪ್ಡೇಟ್ಸ್ ಏನು ಎನ್ನುವ ವಿವರ ಇಲ್ಲಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬೆಂಗಳೂರಿನ ಆಸ್ತಿದಾರರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಆಸ್ತಿ ಮಾಲೀಕರು ತಮ್ಮ SAS ಆಸ್ತಿ ತೆರಿಗೆ ಐಡಿ ಬಳಸಿಕೊಂಡು ತಮ್ಮ ಇ-ಖಾತಾ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಕ್ರಮವು ಆಸ್ತಿ ದಾಖಲೆ ಪತ್ರಗಳನ್ನು ಪಡೆಯುವುದಕ್ಕೆ ಹಾಗೂ ಆಸ್ತಿ ದಾಖಲೆ ಪತ್ರಗಳನ್ನು ಪಡೆದುಕೊಳ್ಳುವುದರಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ತಪ್ಪಿಸುವುದಕ್ಕೆ ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ - ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ಈ ಹೊಸ ಯೋಜನೆಯು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನಗಳ ಆಧಾರದ ಮೇಲೆ ಜಾರಿಗೆ ತರಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಸುಮಾರು 13 ಲಕ್ಷ ಇ-ಖಾತಾಗಳನ್ನು ಆನ್‌ಲೈನ್‌ನಲ್ಲಿ ಆಸ್ತಿದಾರರಿಗೆ ಕೂಡಲೇ ಲಭ್ಯವಾಗುವಂತೆ ಮಾಡಲು ಮತ್ತು ದಾಖಲೆಗಳನ್ನು ಪಡೆಯುವಲ್ಲಿ ಇರುವ ವಿಳಂಬವನ್ನು ತಪ್ಪಿಸುವ ವ್ಯವಸ್ಥೆಯನ್ನು ಒಳಗೊಂಡಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಸ್ತಿದಾರರು ಸುಲಭವಾಗಿ ಇ ಖಾತಾ ಪಡೆಯುವುದು ಹೇಗೆ
ಸಾರ್ವಜನಿಕರು - ಆಸ್ತಿದಾರರು ಅಧಿಕೃತ ಪೋರ್ಟಲ್ ಮೂಲಕ ಇ ಖಾತಾ ಪಡೆಯಬಹುದಾಗಿದೆ. ಇನ್ನು ಬೆಂಗಳೂರಿನ ಆಸ್ತಿದಾರರು ತಮ್ಮ ಮೊಬೈಲ್ ಸಂಖ್ಯೆ ಮತ್ತು OTP ಬಳಸಿ ಲಾಗಿನ್ ಮಾಡಬಹುದು. ಮುಂದುವರಿದು SAS ಅರ್ಜಿ ಆಸ್ತಿ ತೆರಿಗೆ ಐಡಿಯನ್ನು ನಮೂದಿಸಬೇಕು. ಈ ಪ್ರಕ್ರಿಯೆಗಳನ್ನು ಮುಗಿಸಿದ ನಂತರ ಇ-ಖಾತಾವನ್ನು ತಕ್ಷಣವೇ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಇ ಖಾತಾದಲ್ಲಿನ ಹೊಸ ಅಪ್ಡೇಟ್ಸ್‌ನಿಂದಾಗಿ ಮಾಲೀಕರ ಹೆಸರುಗಳನ್ನು ಬಳಸಿಕೊಂಡು ದಾಖಲೆಗಳನ್ನು ಹುಡುಕುವ ಇರುವುದಿಲ್ಲ. ಮುಂದುವರಿದು ಆಸ್ತಿದಾರರು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಯ ಕಚೇರಿಗಳಿಗೆ ಅಲೆದಾಡದೆ ಇ ಖಾತಾ ಪಡೆದುಕೊಳ್ಳಬಹುದಾಗಿದೆ.
ಆಸ್ತಿ ಮಾಲೀಕರು ಆಸ್ತಿ ತೆರಿಗೆ ಡೇಟಾಬೇಸ್‌ನಲ್ಲಿ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗಳಲ್ಲಿ SMS ಅಥವಾ WhatsApp ಮೂಲಕ ಇ ಖಾತಾ ಅರ್ಜಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
E-Khata: ಬೆಂಗಳೂರಿನ ಆಸ್ತಿದಾರರಿಗೆ ಗುಡ್‌ನ್ಯೂಸ್
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಆಸ್ತಿ ಸಂಖ್ಯೆಯ ಮೂಲಕ ಇ ಖಾತಾ ಪಡೆದುಕೊಳ್ಳುವುದಕ್ಕೆ ಅವಕಾಶ ಕೊಟ್ಟಿದ್ದು, ಬೆಂಗಳೂರಿನ ಆಸ್ತಿದಾರರಿಗೆ ಗುಡ್‌ನ್ಯೂಸ್ ಕೊಟ್ಟಂತೆ ಆಗಿದೆ. ಇಷ್ಟು ದಿನ ಇ ಖಾತಾ ಪಡೆದುಕೊಳ್ಳುವುದಕ್ಕೆ ಆಸ್ತಿದಾರರು ಪರದಾಡುವ ಪರಿಸ್ಥಿತಿ ಇತ್ತು. ಇದೀಗ ಈ ಪ್ರಕ್ರಿಯನ್ನು ಸರಳೀಕರಣಗೊಳಿಸಲಾಗಿದೆ.













Click it and Unblock the Notifications