• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 107 ಇ-ಚಾರ್ಜಿಂಗ್ ಕೇಂದ್ರ

|

ಬೆಂಗಳೂರು, ನವೆಂಬರ್ 9: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಇ-ಚಾರ್ಜಿಂಗ್ ಕೇಂದ್ರವನ್ನು ಸ್ಥಾಪಿಸಲು ಈಗಾಗಲೇ ಸಿದ್ಧತೆ ನಡೆದಿದ್ದು, ಪ್ರತಿ 25 ಕಿ.ಮೀಗೆ ಒಂದರಂತೆ ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ.

ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಭರಾಟೆ ಜೋರಾಗಿದೆ, ಬೆಂಗಳೂರಲ್ಲಿಯೂ ಎಲೆಕ್ಟ್ರಿಕ್ ವಾಹನಗಳು ತಕ್ಕ ಮಟ್ಟಿಗೆ ಖರೀದಿಯಾಗುತ್ತಿದೆ. ಕೇವಲ ಹೆದ್ದಾರಿಗಳಲ್ಲಿ ಮಾತ್ರವಲ್ಲದೆ ಮೆಟ್ರೋ ಕೇಂದ್ರ, ಬೆಸ್ಕಾಂ ಆವರಣದಲ್ಲೂ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪಿಸಲಾಗಿದೆ.

ಪ್ರಮುಖ ಹೆದ್ದಾರಿಗಳಲ್ಲಿ ಶೀಘ್ರ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಕೇಂದ್ರ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 107 ಚಾರ್ಜಿಂಗ್ ಕೇಂದ್ರಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಬೆಸ್ಕಾಂ ಮತ್ತು ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಈ ಕುರಿತು ಕೇಂದ್ರ ಇಂಧನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೆಂಗೇರಿಯಿಂದ ಆರಂಭಿಸಿ ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯವರೆಗೆ 18 ಎಲೆಕ್ಟ್ರಿಕ್ ಕಾರ್ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಮೆಟ್ರೋ ನಿಲ್ದಾಣದಲ್ಲಿ ಶೀಘ್ರ ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ ಆರಂಭ

ಜತೆಗೆ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿನ ಎಲೆಕ್ಟ್ರಾನಿಕ್ ಸಿಟಿಯಿಂದ ಅತ್ತಿಬೆಲೆಯವರೆಗೆ 6 ಚಾರ್ಜಿಂಗ್ ಸ್ಟೇಷನ್ ಸ್ಥಾಪಿಸಲು ಸಿದ್ಧತೆ ನಡೆದಿದೆ. ಬೆಂಗಳೂರು ನಗರದಲ್ಲಿ 83 ಮತ್ತು ಹೆದ್ದಾರಿಗಳಲ್ಲಿ 24 ಚಾರ್ಜಿಂಗ್ ಸ್ಟೇಷನ್ ನಿರ್ಮಿಸಲಾಗುತ್ತದೆ. ಅದಕ್ಕಾಗಿ ಸೂಕ್ತ ತಾಣದ ಹುಡುಕಾಟ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದಲ್ಲಿ ಚಾರ್ಜಿಂಗ್ ಸ್ಟೇಶನ್ ನಿರ್ಮಿಸಲಾಗುತ್ತಿದೆ, ಅದರ ಜತೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶ್ರಾಂತಿ ಕೊಠಡಿ, ಕೆಫೆಟೇರಿಯಾ ಇತ್ಯಾದಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

English summary
Electric vehicle (EV) owners can soon travel to Mysuru without the worry of running out of charge. The state energy department is likely to set up EV charging stations every 25km on the Bengaluru-Mysuru highway. A fully charged electric car can run up to 120km.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X