ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತದಾನದ ಜಾಗೃತಿಗಾಗಿ ಕ್ಯಾಂಡಲ್‌ ಲೈಟ್‌ ಅಭಿಯಾನ

By Nayana
|
Google Oneindia Kannada News

ಬೆಂಗಳೂರು, ಮೇ 09: ನಗರದಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮೇ 9(ಬುಧವಾರ) ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮೊಂಬತ್ತಿ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎಂ.ಮಹೇಶ್ವರ ರಾವ್ ತಿಳಿಸಿದ್ದಾರೆ.

ನಗರದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಪ್ರಚಾರಾಂದೋಲನವನ್ನು ಕೈಗೊಳ್ಳಲಾಗಿದೆ. ಅದೇ ರೀತಿ ಮೇ 9 ರಂದು ಆಯಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಕ್ಯಾಂಡಲ್‌ ಲೈಟ್‌ ಅಭಿಯಾನ ನಡೆಯಲಿದೆ. ಒಂದು ಸಾವಿರ ಜನರು ಭಾಗವಹಿಸಲಿದ್ದಾರೆ ಎಂದರು.

ಬೆಂಗಳೂರು: ಮತದಾನದ ಕುರಿತು ಜಾಗೃತಿ ಮೂಡಿಸಲು ವಾಕಥಾನ್ಬೆಂಗಳೂರು: ಮತದಾನದ ಕುರಿತು ಜಾಗೃತಿ ಮೂಡಿಸಲು ವಾಕಥಾನ್

ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 91 ಲಕ್ಷ ಮತದಾರರಿದ್ದು, ಈ ಪೈಕಿ ಶೇ74ರಷ್ಟು ಮತದಾರರಿಗೆ ವೋಟರ್ ಸ್ಲಿಪ್, ಮತದಾನದ ಕೈಪಿಡಿಯನ್ನು ತಲುಪಿಸಲಾಗಿದೆ. ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸಿದ 46,415 ಮಂದಿಗೆ ಚುನಾವಣಾ ಗುರುತಿನ ಚೀಟಿ ವಿತರಿಸಲಾಗಿದೆ, ಗುರುತಿನ ಚೀಟಿ ಲಭ್ಯವಿಲ್ಲದಿದ್ದರೆ, ಆಯೋಗ ಸೂಚಿಸಿರುವ 12 ಸಾಖಲೆಗಳ ಪೈಕಿ ಯಾವುದಾದರೂ ಒಂದನ್ನು ತೋರಿಸಿ, ಮತದಾನ ಮಾಡಬಹುದು ಎಂದರು.

EC holds candle light campaign for poll awareness

ನಗರದ 27 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಕಾರ್ಯಕ್ಕೆ 10,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜತೆಗೆ ಕೇಂದ್ರದಿಂದ 44 ಸಶಸ್ತ್ರ ಪಡೆಗಳು ಆಗಮಿಸಿವೆ. ಪ್ರತಿ 10-15 ಮತಗಟ್ಟೆಗಳಿಗೆ ಒಂದರಂತೆ ಒಟ್ಟು 400 ಸೆಕ್ಟರ್ ಮೊಬೈಲ್ ತಂಡಗಳನ್ನು ಮೇಮಿಸಲಾಗಿದೆ. ಇದರಲ್ಲಿ 14 ಡಿಸಿಪಿಗಳು, 6 ಎಸಿಪಿಗಳು ಕಾರ್ಯ ನಿರ್ವಹಿಸಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್‌ಕುಮಾರ್ ತಿಳಿಸಿದ್ದಾರೆ.

English summary
As part of awareness among voters to cost their vote, election commission is holding candle light campaign on May 9, at 6.30 in 27 constituencies of Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X