ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಮಾಜಿ ಮಹಿಳಾ ಕಾರ್ಪೋರೇಟರ್‌ಗೆ ಸೇರಿದ 3.35 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

|
Google Oneindia Kannada News

ಬೆಂಗಳೂರು, ಆಗಸ್ಟ್ 02: ಬೆಂಗಳೂರಿನಲ್ಲಿ ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಪ್ರಕರಣ ಸಂಬಂಧ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ (ಬಿಬಿಎಂಪಿ) ಮಾಜಿ ಸದಸ್ಯೆ ಸಿ.ಜಿ.ಗೌರಮ್ಮ ದಂಪತಿಗೆ ಸೇರಿದ 3.35 ಕೋಟಿ ರೂ. ಮೌಲ್ಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಟ್ಟುಗೋಲು ಹಾಕಿಗೊಂಡಿದೆ.

ಬಿಬಿಎಂಪಿ ಆಜಾದ್‌ನಗರ ವಾರ್ಡ್ ಮಾಜಿ ಸದಸ್ಯೆ ಸಿ.ಜಿ. ಗೌರಮ್ಮ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕಾರ್ಪೋರೇಟರ್ ಆಗಿದ್ದಾಗ ಗೌರಮ್ಮ, ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದರು. ತನ್ನ ಪತಿ ಗೋವಿಂದರಾಜು ಜೊತೆ ಸೇರಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದರು. ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮತ್ತು ಸ್ಥಿರಾಸ್ತಿಗಳನ್ನು ಸಂಪಾದನೆ ಮಾಡಿದ್ದರು.

ED has attached immoveble assetes to the tune of Rs.3.35crore in the case of BBMP Ex-Corporator C.G Gowramma

ಗೌರಮ್ಮ ಬಿಬಿಎಂಪಿಯ ಸದಸ್ಯೆಯಾಗಿದ್ದ ವೇಳೆಯಲ್ಲಿ ಅಕ್ರಮವಾಗಿ ಸಂಪಾದನೆಯ ಆರೋಪದ ಕೇಳಿಬಂದಿತ್ತು. ಈ ಪ್ರಕರಣ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಸದಸ್ಯೆ ಸಿ.ಜಿ.ಗೌರಮ್ಮ ದಂಪತಿಗೆ ಸೇರಿದ 3.35 ಕೋಟಿ ರೂ. ಮೌಲ್ಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಟ್ಟುಗೋಲು ಹಾಕಿಗೊಂಡಿದೆ. 2010ರಿಂದ 13ರ ವರೆಗೆ 3.46 ಕೋಟಿ ರೂ. ಮೌಲ್ಯದ ಕೃಷಿ ಭೂಮಿ, ಮನೆ, ಪ್ಲ್ಯಾಟ್ ಮತ್ತು ವಾಣಿಜ್ಯ ಮಳಿಗೆಗಳನ್ನು ಸಂಪಾದನೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಪೊಲೀಸರು, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಅಕ್ರಮ ಹಣಕಾಸು ಸಂಪಾದನೆ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು 3.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಮಾಡಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ED has attached immoveble assetes to the tune of Rs.3.35crore in the case of BBMP Ex-Corporator C.G Gowramma

ಗೌರಮ್ಮ ಬಿಬಿಎಂಪಿಯ ಸದಸ್ಯೆಯಾಗಿದ್ದ ವೇಳೆಯಲ್ಲಿಯೇ 2012ರಲ್ಲಿ ಆರ್‌ಟಿಐ ಕಾರ್ಯಕರ್ತ ಲಿಂಗರಾಜು ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಗೌರಮ್ಮ, ಗೋವಿಂದರಾಜು ಸೇರಿ 12 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ 2020ರಲ್ಲಿ ತೀರ್ಪು ನೀಡಿತ್ತು. ಈ ಸಂಬಂಧ ಸಿ ಗೋವಿಂದರಾಜು ಈಗಲೂ ಜೈಲುಹಕ್ಕಿಯಾಗಿದ್ದಾರೆ.

English summary
Directote of Enforcement(ED) has provisionally attached immoveble assetes to the tune of Rs.3.35crore in the case of C.G Gowramma, Ex-Corporator(Azad nagar)Bengaluru Disproportionate Assets case. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X