NIA raids PFI offices : ಪಿಎಫ್‌ಐ ರಾಷ್ಟ್ರೀಯ ಕಾರ್ಯದರ್ಶಿ ಬೆಂಗಳೂರು ಮನೆ ಮೇಲೆ ಇಡಿ, ಎನ್‌ಐಎ ದಾಳಿ
ಬೆಂಗಳೂರು, ಸೆ.22: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯಗಳು ಜಂಟಿಯಾಗಿ ಗುರುವಾರ ಬೆಳಗ್ಗೆ ಕರ್ನಾಟಕ ಸೇರಿ ಹಲವಾರು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ.
ಈ ವೇಳೆ ಬೆಂಗಳೂರಿನಲ್ಲಿ ಪಿಎಫ್‌ಐ ರಾಷ್ಟ್ರೀಯ ಕಾರ್ಯದರ್ಶಿ ಮನೆ ಮೇಲೆ ದಾಳಿ ನಡೆಸಿವೆ. ಪಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿ ಮಹಮದ್ ಸಾಕಿಬ್ ಅವರ ರಿಚಮಂಡ್ ಟೌನ್‌ನಲ್ಲಿರುವ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಲಾಗಿದೆ. ದಾಳಿ ಹಿನ್ನೆಲೆ ಅಪಾರ್ಟ್‌ಮೆಂಟ್ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇತ್ತ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಇರುವ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಚೇರಿಗಳಿಗೆ ಮುಂಜಾನೆ 3.30ರ ಸುಮಾರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ. ಪಿಎಫ್ಐ, ಎಸ್ ಡಿಪಿಐ ಮುಖಂಡರ ಮನೆ ಮೇಲೆ ದಾಳಿ ಮಾಡಲಾಗಿದೆ. ಒಟ್ಟಾರೆ ಎಂಟು ಕಡೆಗಳಲ್ಲಿ ಎನ್‌ಐಎ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಕೇರಳದ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್‌ಐ ಅಧ್ಯಕ್ಷ ಒಎಂಎ ಸಲಾಂ ಅವರ ಮನೆ ಮೇಲೆ ಎನ್‌ಐಎ ಮತ್ತು ಇಡಿ ದಾಳಿ ನಡೆಸುತ್ತಿದೆ. ಮನೆ ಮುಂದೆ ಪಿಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications