ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking News: ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ

|
Google Oneindia Kannada News

ಬೆಂಗಳೂರು, ಆಗಸ್ಟ್ 5: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೋಷನ್ ಬೇಗ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಐಎಂಎ ಸಕ್ಷಮ ಪ್ರಾಧಿಕಾರ ಮುಖ್ಯಸ್ಥ ಈ ಹಿಂದೆ ಸರ್ಕಾರಕ್ಕೆ ಅನುಮತಿ ಕೋರಿದ್ದರು. ಇದೀಗ ಇಡಿ ಅಧಿಕಾರಿಗಳು ದಾಳಿ ಮಾಡಿ ಆಘಾತ ನೀಡಿದ್ದಾರೆ.

2018ರಲ್ಲಿ ನಡೆದ ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಅವರನ್ನು ಸಿಬಿಐ ನವೆಂಬರ್ 22ರಂದು ಬಂಧಿಸಿತ್ತು. ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ನಿಂದ ಸುಮಾರು ನಾನೂರು ಕೋಟಿ ರೂಪಾಯಿ ಪಡೆದ ಆರೋಪ ರೋಷನ್ ಬೇಗ್ ಮೇಲಿದೆ.

ED raids former Karnataka minister R Roshan Baig’s house

ತಮ್ಮೊಂದಿಗೆ ವ್ಯವಹಾರ ನಡೆಸಿದ ರೋಷನ್ ಬೇಗ್ ಅವರ ಮಾತುಕತೆಯ ಆಡಿಯೋವನ್ನು ಖುದ್ದು ಮನ್ಸೂರ್ ಖಾನ್‌ ನಗರ ಪೊಲೀಸ್ ಆಯುಕ್ತರಿಗೆ ರವಾನೆ ಮಾಡಿದ್ದರು. ಐಎಂಎ ವಂಚನೆ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆಗೆ ಕೈಗೆತ್ತಿಕೊಂಡಿತ್ತು. ಈ ವೇಳೆಯೇ ರೋಷನ್ ಬೇಗ್ ವಿಚಾರಣೆಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮುಂದಾಗಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ED raids former Karnataka minister R Roshan Baig’s house

ಐಎಂಎ ಪ್ರಕರಣದಲ್ಲಿ ಬೇಗ್ ಹೆಸರು ಕೇಳಿ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರ್ಪಡೆಗೆ ಯತ್ನಿಸಿದ್ದರು. ಬಹುಕೋಟಿ ಐಎಂಎ ಹಗರಣದಲ್ಲಿ ಬೇಗ್ ಹೆಸರು ಕೇಳಿ ಬಂದಿದ್ದರಿಂದ ಜೊತೆಗೆ ಆರೆಸ್ಸೆಸ್ ವಿರೋಧ ವ್ಯಕ್ತಪಡಿಸಿದ್ದರಿಂದ ಬೇಗ್ ಅಮಾನತುಗೊಂಡ ಶಾಸಕರೇ ಉಳಿದುಕೊಂಡರು. ಕಳೆದ ಉಪ ಚುನಾವಣೆ ವೇಳೆ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿದ್ದರು. ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಉತ್ಸುಕತೆ ತೋರಿ, ಕೊನೆಗೆ ಚುನಾವಣಾ ಕಣದಿಂದ ದೂರ ಸರಿದಿದ್ದರು.


''ರೋಷನ್ ಬೇಗ್ ಅವರು ಈ ಐಎಂಎ ಸಂಸ್ಥೆಯಿಂದ 400 ಕೋಟಿ ರೂ. ಪಡೆದುಕೊಂಡಿದ್ದಾರೆ'' ಎಂದು ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಬಂಧನಕ್ಕೂ ಮುನ್ನ ಹೊರ ಹಾಕಿದ್ದ ಸರಣಿ ವಿಡಿಯೋದಲ್ಲಿ ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ED raids former Karnataka minister R Roshan Baig’s house

ಆಡಿಯೋದಲ್ಲಿ ಶಿವಾಜಿನಗರದ ಎಂಎಲ್‍ಎ ರೋಷನ್ ಬೇಗ್ ಅವರಿಗೆ 400 ಕೋಟಿ ರೂಪಾಯಿಗಳಷ್ಟು ಹಣ ನೀಡಿದ್ದು ಹಣ ವಾಪಾಸ್ ನೀಡಲು ಕೇಳಿದಾಗ ಲೋಕಲ್ ರೌಡಿಗಳನ್ನು ಬಿಟ್ಟು ಮನ್ಸೂರ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದರು. ನನಗೆ ರಕ್ಷಣೆ ಸಿಗದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ನಂತರ 22/06/2019 ರಂದು ದುಬೈನಲ್ಲಿದ್ದೇನೆ ಎಂದು ವಿಡಿಯೋ ರೆಕಾರ್ಡ್ ಮಾಡಿದ್ದ. ಆ ವಿಡಿಯೋದಲ್ಲಿ ಆಡಿಯೋದಲ್ಲಿ ನೀಡಿದ್ದ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡು, ಮತ್ತೊಮ್ಮೆ ರೋಷನ್ ಬೇಗ್ ಅವರಿಗೆ 400 ಕೋಟಿ ರೂಪಾಯಿ ನೀಡಿದ್ದೇನೆ ಎಂದಿದ್ದ.

'ನಾನು ಶಾಸಕನಲ್ಲದಿದ್ದರೂ ನಾನು ಹಜ್ ಸಮಿತಿ ಅಧ್ಯಕ್ಷನಾಗಿದ್ದೇನೆ. ನಾನು ಪ್ರತಿದಿನ ಯಾತ್ರಾರ್ಥಿಗಳ ಜವಾಬ್ದಾರಿಯನ್ನು ನೋಡಿಕೊಳ್ಳಬೇಕಿದೆ' ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ, ಸರಿಯಾದ ಮಾಹಿತಿಯಿಲ್ಲದ ಕಾರಣ ನಾನು ಪುಣೆಗೆ ತೆರಳುವಾಗ ನನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು ಎಂದು ರೋಷನ್ ಬೇಗ್ ಈ ಹಿಂದೆ ವಿಚಾರಣೆ ಎದುರಿಸಿದ್ದಾಗ ಪ್ರತಿಕ್ರಿಯಿಸಿದ್ದರು.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಐಎಂಎ ಹಗರಣ ಬೆಳಕಿಗೆ ಬಂದಿತ್ತು. ಆಗ ಸರ್ಕಾರ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.ಮೊದಲಿಗೆ ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ನಂತರ ಬಿಟಿಎಂ ಲೇ ಔಟ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ವಂಚನೆ ಪ್ರಕರಣದ ದೂರು ದಾಖಲಾಯಿತು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲಾಯಿತು.

ಈ ಹಿಂದೆ ಕೂಡಾ ದಾಳಿ: ಐಎಂಎ ಬಹುಕೋಟಿ ವಂಚನೆ ಕಂಪನಿಯಿಂದ ಅಕ್ರಮ ಹಣ ಪಡೆದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಸಂದರ್ಭದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರ ಕಚೇರಿ ಹಾಗೂ ಪುತ್ರ ರುಮಾನ್ ಅವರ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

ಜಮೀರ್‌ಗೆ ಐಟಿ ಆಘಾತ

ಶಾಸಕ ಜಮೀರ್ ಅಹಮದ್‌ಗೆ ಸೇರಿದ ನ್ಯಾಷನಲ್ ಟ್ರಾವೆಲ್ ಹಾಗೂ ಕಂಟೋನ್ಮೆಂಟ್ ಬಳಿ ಇರುವ ಐಷಾರಾಮಿ ಬಂಗಲೆ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಶಾಸಕ ಜಮೀರ್ ಸಂಜಯನಗರದಲ್ಲಿ ಐಷಾರಾಮಿ ಬಂಗಲೆ ಕಟ್ಟಿ ಅದರಲ್ಲಿಯೇ ಪುತ್ರಿಯ ಮದುವೆ ಕಾರ್ಯಕ್ರಮ‌ ನಡೆಸಿದ್ದರು.

Recommended Video

ಪ್ರಧಾನಿ ನಿವಾಸವನ್ನೇ ಬಾಡಿಗೆಗಿಟ್ಟ ಪಾಕಿಸ್ತಾನ ಸರ್ಕಾರ! | Oneindia Kannada

ಇದಲ್ಲದೆ, ಕಂಟೊನ್ಮೆಂಟ್ ರೈಲ್ವೇ ಸ್ಟೇಷನ್ ಬಳಿ ಇರುವ ಜಮೀರ್ ಅಹ್ಮದ್ ಮನೆ, ದೆಹಲಿ, ಮುಂಬೈ ಸೇರಿದಂತೆ ವಿವಿಧೆಡೆ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದೆ.

English summary
IMA Scam: ED raids former Karnataka minister R Roshan Baig’s house
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X