ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇ.ಡಿಯಿಂದ ಮತ್ತೊಂದು ಬಾಂಬ್: ಡಿಕೆ ಶಿವಕುಮಾರ್ ಮಾವನಿಗೆ ಸಮನ್ಸ್‌

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 18: ಜಾರಿ ನಿರ್ದೇಶನಾಲಯವು ಮತ್ತೊಂದು ಬಾಂಬ್ ಸಿಡಿಸಿದ್ದು ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಮಾವನಿಗೆ ಇ.ಡಿ. ಸಮನ್ಸ್ ನೀಡಿದೆ.

ಮಂಗಳವಾರವಷ್ಟೇ ಡಿಕೆ ಶಿವಕುಮಾರ್ ಆಪ್ತರಾದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಇ.ಡಿ, ಸಮನ್ಸ್ ಜಾರಿ ಮಾಡಿತ್ತು, ಅದಕ್ಕೂ ಮೊದಲು ಪುತ್ರಿ ಐಶ್ವರ್ಯಗೂ ನೋಟಿಸ್ ಹೋಗಿದ್ದು, ಅವರು ಇಡಿ ಮುಂದೆ ವಿಚಾರಣೆಯನ್ನೂ ಎದುರಿಸಿದ್ದರು.

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಲು ಮಗಳು ಐಶ್ವರ್ಯಳೇ ಕಾರಣ?ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಲು ಮಗಳು ಐಶ್ವರ್ಯಳೇ ಕಾರಣ?

ಮೈಸೂರಿನಲ್ಲಿರುವ ಡಿಕೆಶಿ ಮಾವ ತಿಮ್ಮಯ್ಯಗೆ ಮಾತ್ರವಲ್ಲದೇ ಸ್ನೇಹಿತ ಶಶಿಕುಮಾರ್, ಆಡಿಟರ್ ಚಂದ್ರಶೇಖರ್ ತಿಮ್ಮಯ್ಯ, ಸಿಂಗಾಪುರದ ಗೆಳೆಯ ರಜನೀಶ್ ಗೋಪಿನಾಥ್ ಹಾಗೂ ವ್ಯವಹಾರಿಕ ಸಂಬಂಧಿ ಅನಿಲ್ ಜೈನ್ ಗೂ ಇಡಿ ಸಮನ್ಸ್ ಜಾರಿ ಮಾಡಿದೆ. ಮತ್ತೊಂದೆಡೆ ಪುತ್ರಿ ಐಶ್ವರ್ಯಾ ಹೆಸರಿನಲ್ಲಿದ್ದ ಆಸ್ತಿಯನ್ನೂ ಜಪ್ತಿ ಮಾಡಲಾಗಿದೆ.

ಐಟಿ ದಾಳಿ ಬಳಿಕ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇನ್ನು ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಇಡಿ ಹೇಳಿತ್ತು.

ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಶತಕೋಟಿಗಳ ಒಡತಿ ಆಗಿದ್ದೇಗೆ?ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಶತಕೋಟಿಗಳ ಒಡತಿ ಆಗಿದ್ದೇಗೆ?

184 ಜನರ ಲಿಸ್ಟ್ ನಲ್ಲಿ ಇವರುಗಳ ಹೆಸರೂ ಇದೆ. ಐಟಿ ದಾಳಿ ನಡೆದ ಸಂದರ್ಭದಲ್ಲಿ ಸರಿಸುಮಾರು 64 ಕಡೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದರು.

ಇತ್ತ ಮಾವ ತಿಮ್ಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಿದರೆ ಹಣ ವರ್ಗಾವಣೆಯ ಬಗ್ಗೆ ಮಾಹಿತಿ ಸಿಗಬಹುದು ಅಥವಾ ವ್ಯವಹಾರಿಕ ಸಂಬಂಧಗಳ ಮಾಹಿತಿ ಕಲೆ ಹಾಕಬಹುದು ಎಂಬ ನಿಟ್ಟಿನಲ್ಲಿ ಇಡಿ ಸಮನ್ಸ್ ನೀಡಿದೆ ಎಂದು ಹೇಳಲಾಗುತ್ತಿದೆ.

 ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಇ.ಡಿ. ಸಮನ್ಸ್‌

ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಇ.ಡಿ. ಸಮನ್ಸ್‌

ಡಿಕೆ ಶಿವಕುಮಾರ್ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಈ ಹಿಂದೆ ಕೂಡಾ ಇಡಿ ನೋಟಿಸ್‌ ಜಾರಿಗೊಳಿಸಿತ್ತು. ಸೆಪ್ಟೆಂಬರ್ 14 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಆದರೆ ಇದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಂದಿಸಿರ ಹೀಗಾಗಿ ಸೆಪ್ಟಂಬರ್ 19 ರಂದು ವಿಚಾರಣೆಗೆ ಬರಲು ಸೂಚಿಸಿದ್ದು ನೋಟಿಸ್‌ ಜಾರಿಯಾಗಿರುವುದನ್ನು ಲಕ್ಷ್ಮೀ ಹೆಬ್ಬಾಳ್ಕರ್ ಕೂಡಾ ಖಚಿತಪಡಿದ್ದು, . ಇಡಿ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

 ಡಿಕೆಶಿ ಪುತ್ರಿ ಐಶ್ವರ್ಯಗೆ ಸಮನ್ಸ್‌

ಡಿಕೆಶಿ ಪುತ್ರಿ ಐಶ್ವರ್ಯಗೆ ಸಮನ್ಸ್‌

ಮಾಜಿ ಇಂಧನ ಸಚಿವ‌ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಹೆಸರಿನಲ್ಲಿ ಡಿಕೆಶಿ ಬಹುಪಾಲು ಆಸ್ತಿಯನ್ನ ಮಾಡಿದ್ದಾರೆ ಎನ್ನಲಾಗಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಕೂಡ‌ ಮಗಳ ಆಸ್ತಿಯನ್ನು ಉಲ್ಲೇಖ ಮಾಡಿದ್ದಾರೆ. ಐಶ್ವರ್ಯ ಹೆಸರಿನಲ್ಲಿ 102.88 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು 5.17 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ ಘೋಷಿಸಿಕೊಂಡಿದ್ದಾರೆ.

ಅಷ್ಟು ಮಾತ್ರವಲ್ಲದೇ ಐಶ್ವರ್ಯ ಹೆಸರಿನಲ್ಲಿ ಕಾಲೇಜು, ವಿದೇಶದಲ್ಲಿ ಪ್ರಾಪರ್ಟಿ ಕೂಡ ಇದೆ. ಹೀಗಾಗಿ ಡಿಕೆಶಿ ಮನೆ ಮೇಲೆ ಐಟಿ ದಾಳಿ ನಡೆಸಿ ಹಲವಾರು ಮಾಹಿತಿ ಕಲೆಹಾಕಲಾಗಿದೆ. ಹಾಗೆ ಐಟಿ, ಐಶ್ವರ್ಯಳನ್ನ ವಿಚಾರಣೆಗೆ ಒಳಪಡಿಸಿ ಇಡಿ ಗೆ ಮಾಹಿತಿಯನ್ನ ರವಾನೆ ಮಾಡಿತ್ತು. ಸದ್ಯ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಗೆ ಸಮನ್ಸ್ ಜಾರಿ ಮಾಡಲಾಗಿದೆ.

ಡಿಕೆಶಿಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲು ಬದಲಿಗೆ ಆಸ್ಪತ್ರೆ ವಾಸಡಿಕೆಶಿಗೆ ನ್ಯಾಯಾಂಗ ಬಂಧನ, ತಿಹಾರ್ ಜೈಲು ಬದಲಿಗೆ ಆಸ್ಪತ್ರೆ ವಾಸ

 ಡಿಕೆಶಿ ಮಾವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

ಡಿಕೆಶಿ ಮಾವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

ಡಿಕೆ ಶಿವಕುಮಾರ್ ಮಾವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಮೈಸೂರಿನಲ್ಲಿರುವ ಡಿಕೆಶಿ ಮಾವ ತಿಮ್ಮಯ್ಯಗೆ ಮಾತ್ರವಲ್ಲದೇ ಸ್ನೇಹಿತ ಶಶಿಕುಮಾರ್, ಆಡಿಟರ್ ಚಂದ್ರಶೇಖರ್ ತಿಮ್ಮಯ್ಯ, ಸಿಂಗಾಪುರದ ಗೆಳೆಯ ರಜನೀಶ್ ಗೋಪಿನಾಥ್ ಹಾಗೂ ವ್ಯವಹಾರಿಕ ಸಂಬಂಧಿ ಅನಿಲ್ ಜೈನ್ ಗೂ ಇಡಿ ಸಮನ್ಸ್ ಜಾರಿ ಮಾಡಿದೆ. ಮತ್ತೊಂದೆಡೆ ಪುತ್ರಿ ಐಶ್ವರ್ಯಾ ಹೆಸರಿನಲ್ಲಿದ್ದ ಆಸ್ತಿಯನ್ನೂ ಜಪ್ತಿ ಮಾಡಲಾಗಿದೆ.

 ಡಿಕೆ ಶಿವಕುಮಾರ್‌ಗೆ ಜಾಮೀನೋ, ಜೈಲೋ?

ಡಿಕೆ ಶಿವಕುಮಾರ್‌ಗೆ ಜಾಮೀನೋ, ಜೈಲೋ?

ದೆಹಲಿಯ ನಿವಾಸದಲ್ಲಿ ಪತ್ತೆಯಾದ 8.6 ಕೋಟಿ ಪ್ರಕರಣದ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಒಳಪಟ್ಟಿರುವ ಮಾಜಿ ಸಚಿವ, ಕಾಂಗ್ರೆಸ್​ ಪ್ರಬಲ ನಾಯಕ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಇಡಿ ವಿಶೇಷ ನ್ಯಾಯಾಲಯ ನಡೆಸಲಿದೆ. ಹೀಗಾಗಿ ಡಿಕೆಶಿ ಪಾಲಿಗೆ ಇಂದು ಮಹತ್ವದ ದಿನವಾಗಿದೆ.

English summary
ED Summons DK Shivakumars Father-In-Law Timmaiah Auditor Chandrashekar And Others.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X