ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ 51 ಅನಧಿಕೃತ ಶಾಲೆಗಳ ಪತ್ತೆ ಹಚ್ಚಿದ ಶಿಕ್ಷಣ ಇಲಾಖೆ!

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್‌ 08: ಸಾರ್ವಜನಿಕ ಶಿಕ್ಷಣ ಇಲಾಖೆಯು ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಶಿಕ್ಷಣ ಜಿಲ್ಲೆಗಳಲ್ಲಿ 51 ಅನಧಿಕೃತ ಖಾಸಗಿ ಅನುದಾನ ರಹಿತ ಶಾಲೆಗಳನ್ನು ಗುರುತಿಸಿದೆ.

ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳನ್ನು ಗುರುತಿಸುವ ನಿರಂತರ ಪ್ರಯತ್ನದ ಭಾಗವಾಗಿ ಈ ಶಾಲೆಗಳನ್ನು ಗುರುತಿಸಲಾಗಿದೆ. ಎರಡು ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಅನಧಿಕೃತ ಶಾಲೆಗಳ ಪಟ್ಟಿಯನ್ನು ಇಲಾಖೆಗೆ ಸಲ್ಲಿಸಿದರು.

ಶಿಕ್ಷಣ ಇಲಾಖೆ ವಿರುದ್ಧದ ಆರೋಪಕ್ಕೆ ದಾಖಲೆ ಇದ್ದರೆ ಕೊಡಿ:ನಾಗೇಶ್ಶಿಕ್ಷಣ ಇಲಾಖೆ ವಿರುದ್ಧದ ಆರೋಪಕ್ಕೆ ದಾಖಲೆ ಇದ್ದರೆ ಕೊಡಿ:ನಾಗೇಶ್

ಪಟ್ಟಿಯ ಪ್ರಕಾರ, ಬೆಂಗಳೂರು ದಕ್ಷಿಣದಲ್ಲಿ ಅತಿ ಹೆಚ್ಚು ಅನಧಿಕೃತ ಶಾಲೆಗಳು ಇದ್ದು ಅವುಗಳು ಒಟ್ಟು 38 ಆಗಿವೆ. ಬೆಂಗಳೂರು ಉತ್ತರದಲ್ಲಿ 11 ಶಾಲೆಗಳಿವೆ. ಆನೇಕಲ್ ತಾಲೂಕಿನಲ್ಲಿ ಎರಡು ಶಾಲೆಗಳನ್ನು ಮುಚ್ಚಲಾಗಿದೆ ಎಂದು ತಿಳಿದುಬಂದಿದೆ. ಈ ಶಾಲೆಗಳಿಗೆ ವಿವರಣೆ ಕೋರಿ ಇಲಾಖೆ ನೋಟಿಸ್ ಕೂಡ ಜಾರಿ ಮಾಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ಬಂದ ನಂತರ ಶಾಲೆಗಳನ್ನು ಮುಚ್ಚುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Education Department Finds 51 Unauthorized Schools in Bangalore

ನೋಟಿಸ್‌ಗೆ ಅವರ ಉತ್ತರ ತೃಪ್ತಿಕರವಾಗಿಲ್ಲದಿದ್ದರೆ ಅಥವಾ ಸೂಕ್ತ ದಾಖಲೆಗಳನ್ನು ನೀಡಲು ವಿಫಲವಾದರೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವ್ಯವಹಾರದಿಂದ ಮುಚ್ಚಿರುವ ಶಾಲೆಗಳ ವಿದ್ಯಾರ್ಥಿಗಳನ್ನು ಸಮೀಪದ ಶಾಲೆಗಳಿಗೆ ಸ್ಥಳಾಂತರಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಇವುಗಳಲ್ಲಿ ಹೆಚ್ಚಿನ ಶಾಲೆಗಳು ತಮ್ಮ ಪರವಾನಗಿಯನ್ನು ನವೀಕರಿಸದೆ ಮತ್ತು ಕರ್ನಾಟಕ ಶಿಕ್ಷಣ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿವೆ ಎನ್ನಲಾಗಿದೆ.

Education Department Finds 51 Unauthorized Schools in Bangalore

ನಮಗೆ ಆಶ್ಚರ್ಯಕರವೆಂಬಂತೆ ಕೆಲವು ಶಾಲೆಗಳು ಇಲಾಖೆಯ ಗಮನಕ್ಕೆ ತರದೆ ಸ್ಥಳವನ್ನು ಬದಲಾಯಿಸಿವೆ. ನಿರಪೇಕ್ಷಣಾ ಪ್ರಮಾಣಪತ್ರ ಪಡೆಯದೇ ಇತರೆ ಮಂಡಳಿಗಳು ನಿಗದಿಪಡಿಸಿದ ಪಠ್ಯಕ್ರಮವನ್ನು ಬೋಧಿಸುವ ವೇಳೆ ಕೆಲವರು ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

English summary
The Department of Public Education has identified 51 unauthorized private unaided schools in Bengaluru South and Bengaluru North education districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X