ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ: ಸಿಐಡಿಗೆ ಪತ್ರ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 18: ಶಾಲಾ-ಕಾಲೇಜುಗಳಲ್ಲಿ ವಯಸ್ಸಿಗೂ ಮೀರಿದ ಚಟುವಟಿಕೆಗಳು ನಡೆಯುತ್ತಿದ್ದು, ಇದು ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.

ಹೀಗಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸೋಶಿಯಲ್ ಮೀಡಿಯಾಗಳಿಂದ ದೂರವಿರುವಂತೆ ಕ್ರಮ ಕೈಗೊಳ್ಳುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಸಿಐಡಿ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದಾರೆ.

ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ, ವಿಡಿಯೋ ರವಾನೆ ಹೆಚ್ಚಳ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ, ವಿಡಿಯೋ ರವಾನೆ ಹೆಚ್ಚಳ

ಪೋಷಕರೇ ನಿಮ್ಮ ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಎಚ್ಚರ!, ವಿದ್ಯಾರ್ಥಿಗಳ ಬಳಿ ಇರುವ ಮೊಬೈಲ್ ಅವರ ಶೈಕ್ಷಣಿಕ ಜೀವನವನ್ನೇ ಬಲಿ ತೆಗೆದುಕೊಳ್ಳುತ್ತಿದೆ. ನಿಮ್ಮ ಮಕ್ಕಳು ಮೊಬೈಲ್ ನಲ್ಲಿ ಏನೆಲ್ಲಾ ನೋಡ್ತಾರೆ ಗೊತ್ತಾ.

Education department writes to CID to curb obscene videos in school premises

ಮೊಬೈಲ್ ಬಳಕೆ ಶೈಕ್ಷಣಿಕವಾಗಿ ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಸಿಐಡಿ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದಾರೆ.

ಯುವತಿಗೆ ಅಶ್ಲೀಲ ವಿಡಿಯೋ ತೋರಿಸಿದ ಓಲಾ ಚಾಲಕ ಮಿಸ್ಸಿಂಗ್: ಪೊಲೀಸರ ತಲಾಶ್ ಯುವತಿಗೆ ಅಶ್ಲೀಲ ವಿಡಿಯೋ ತೋರಿಸಿದ ಓಲಾ ಚಾಲಕ ಮಿಸ್ಸಿಂಗ್: ಪೊಲೀಸರ ತಲಾಶ್

ಮೊಬೈಲ್ ನಿಂದ ಮಕ್ಕಳ ಮನಸ್ಥಿತಿಯ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ, ಶಾಲಾ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಮೊಬೈಲ್ ಬಳಕೆಯಿಂದ ಅವರು ಶೈಕ್ಷಣಿಕವಾಗಿ ಹಿಂದುಳಿಯುವುದಲ್ಲದೇ ದಾರಿತಪ್ಪುತ್ತಾರೆ, ಪೋಷಕರಿಂದ ದೂರವಾಗುತ್ತಾರೆ.

Education department writes to CID to curb obscene videos in school premises

ಶಾಲಾ ಆವರಣದಲ್ಲಿ ಮಕ್ಕಳು ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುತ್ತಾರೆ, ವಾಶ್ ರೂಂಗಳಲ್ಲೂ ವಯಸ್ಸಿಗೆ ಮೀರಿದ ಚಟುವಟಿಕೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಸೋಶಿಯಲ್ ಮೀಡಿಯಾಗಳಿಂದ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗುತ್ತಿದ್ದಾರೆ.

ಹೆಂಡತಿ ಮೊಬೈಲ್ ಎಂದು ಮಾವನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಅಳಿಯ! ಹೆಂಡತಿ ಮೊಬೈಲ್ ಎಂದು ಮಾವನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಅಳಿಯ!

ಇದು ಶಿಕ್ಷಣದ ಗುಣಮಟ್ಟದ ದೃಷ್ಟಿಯಿಂದಲೂ ಕೆಟ್ಟ ಪರಿಣಾಮ ಬೀರುತ್ತಿದೆ, ಈ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸೋಶಿಯಲ್ ಮೀಡಿಯಾಗಳಿಂದ ದೂರ ಉಳಿಯುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಶಾಲಿನಿ ರಜನೀಶ್ ಮನವಿ ಮಾಡಿದ್ದಾರೆ.

English summary
Principal Secretary of education department, Shalini Rajneesh has written a letter to Crime Investigation Department (CID) to take action against mobile obscene video in school premises.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X