ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 11: ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟ ನಂತರ ಹೋಂ ಐಸೋಲೇಷನ್ ನಲ್ಲಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಬರೆದುಕೊಂಡಿದ್ದು, ಆರೋಗ್ಯದ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಪ್ರಾಥಮಿಕ-ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರಿಗೆ ಕೊವಿಡ್-19 ಸೋಂಕುಪ್ರಾಥಮಿಕ-ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರಿಗೆ ಕೊವಿಡ್-19 ಸೋಂಕು

ಕಳೆದ ಸೋಮವಾರದಿಂದ ನಾನು ಕೋವಿಡ್-19 ಸೋಂಕು ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದು, ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

Education Minister S Suresh Kumar Admitted To Hospital In Bengaluru

ಈ ಹಿಂದೆ ಕೊವಿಡ್-19 ಸೋಂಕು ತಗುಲಿರುವ ಬಗ್ಗೆ ವರದಿ ದೃಢಪಟ್ಟಿದ್ದರೂ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಹೀಗಾಗಿ ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದರು.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವು ಸಚಿವರು, ಮುಖಂಡರು ಟ್ವೀಟ್ ಮಾಡಿದ್ದರು.

Recommended Video

ಮನೆ ಮುಂದೆ ಗಾಂಜಾ ಗಿಡ, ಖತರ್ನಾಕ್ ಕಳ್ಳರು | Oneindia Kannada

ಹೋಂ ಐಸೋಲೇಷನ್ ನಲ್ಲಿದ್ದರೂ ಸಚಿವ ಸುರೇಶ್ ಕುಮಾರ್ ಅವರು ಆನ್ ಲೈನ್ ಮೂಲಕ ಶಿಕ್ಷಣ ಇಲಾಖೆ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಫೇಸ್ ಬುಕ್ ಲೈವ್ ಮೂಲಕ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಫೇಸ್ ಬುಕ್ ಲೈವ್ ಮೂಲಕ ಸುದ್ದಿಗೋಷ್ಠಿಯಲ್ಲಿ ಸಚಿವರು ಭಾಗಿಯಾಗುತ್ತಿದ್ದಾರೆ.

English summary
S.Suresh Kumar, Minister of Primary and Secondary Education, who was in Home Isolation after being confirmed coronavirus, he was hospitalized today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X