ಆಗಸ್ಟ್ 1ಕ್ಕೆ ಶಾಲೆಗಳು ಆರಂಭ?: ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ
ಬೆಂಗಳೂರು, ಏಪ್ರಿಲ್ 15: ಕೊರೊನಾ ವೈರಸ್ ಭೀತಿ ಇರುವ ಕಾರಣ ಈ ವರ್ಷ ರಾಜ್ಯದಲ್ಲಿ ಶಾಲೆಗಳು ಆಗಸ್ಟ್ 1ಕ್ಕೆ ಪ್ರಾರಂಭ ಆಗುತ್ತವೆ ಎಂದು ನಿನ್ನೆ ಕೆಲವು ಮಾಧ್ಯಮಗಳು ಸುದ್ದಿ ಮಾಡಿದ್ದವು. ಈ ಬಗ್ಗೆ ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಶಾಲೆಗಳು ಆಗಸ್ಟ್‌ಗೆ ಪ್ರಾರಂಭ ಆಗುತ್ತವೆ ಎನ್ನುವ ಸುದ್ದಿ ನಿಜ ಅಲ್ಲ. ಶಿಕ್ಷಣ ಇಲಾಖೆ ಆ ರೀತಿಯ ಯಾವುದೇ ನಿರ್ಧಾರಗಳನ್ನು ಇನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲ. ವಿದ್ಯಾರ್ಥಿಗಳು ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ತೇರ್ಗಡೆ ಮಾಡಲಾಗುತ್ತದೆ ಎನ್ನುವ ಸುದ್ದಿ ಕೂಡ ಮಾಧ್ಯಮಗಳನ್ನು ಬಂದಿದ್ದು, ಈ ಬಗ್ಗೆಯೂ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

''ಕೆಲವು ಮಾಧ್ಯಮಗಳು ಇಂದೇ ಜಗತ್ತಿನ ಕಥೆ ಮುಗೀತು ಎಂಬ ಭಾವನೆ ತಂದರೆ, ಇನ್ನು ಕೆಲವು ಮಾಧ್ಯಮಗಳು ನಾಳೆಯೂ ಜಗತ್ತು ಮತ್ತು ನಾವು ಇರುತ್ತದೆ/ತ್ತೇವೆ ಎಂಬ ವಿಶ್ವಾಸ ತರುತ್ತವೆ'' ಎಂದು ಟ್ವಿಟ್ಟರ್ ನಲ್ಲಿ ಖಾರವಾಗಿ ಉತ್ತರ ನೀಡಿದ್ದಾರೆ.
ಕೆಲವು ಮಾಧ್ಯಮಗಳು ಇಂದೇ ಜಗತ್ತಿನ ಕಥೆ ಮುಗೀತು ಎಂಬ ಭಾವನೆ ತಂದರೆ,
— S.Suresh Kumar, Minister - Govt of Karnataka (@nimmasuresh) April 14, 2020
ಇನ್ನು ಕೆಲವು ಮಾಧ್ಯಮಗಳು ನಾಳೆಯೂ ಜಗತ್ತು ಮತ್ತು ನಾವು ಇರುತ್ತದೆ/ತ್ತೇವೆ ಎಂಬ ವಿಶ್ವಾಸ ತರುತ್ತವೆ.
ಮೇ ತಿಂಗಳಿಗೆ ಲಾಕ್ ಡೌನ್ ಮುಂದುವರೆದಿದ್ದು, ಮೇ ನಂತರವೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಬರುವುದು ಅನುಮಾನ ಹೀಗಾಗಿ ಆಗಸ್ಟ್‌ನಲ್ಲಿ ಶಾಲೆಗಳು ಶುರು ಆಗುತ್ತದೆ ಎಂದು ಕೆಲ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಮಾಡಲಾಗಿತ್ತು.












Click it and Unblock the Notifications