ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಸಭೆ ಬಳಿಕ ಸುರೇಶ್ ಕುಮಾರ್ ಮಾಹಿತಿ

|
Google Oneindia Kannada News

ಬೆಂಗಳೂರು, ಮೇ 16: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಕ್ಷಣ ಸಚಿವರ ಜೊತೆ ಇಂದು ಶನಿವಾರ ಸಭೆ ನಡೆಸಿದರು. ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು ಅಂತಿಮ ಸಭೆಯನ್ನು ಮೇ 18 ರಂದು ಕರೆಯಲಾಗಿದೆ ಎಂದು ಹೇಳಿದ್ದಾರೆ.

ಪರೀಕ್ಷೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ವಿದ್ಯಾರ್ಥಿಗಳನ್ನು ಕೂರಿಸುವುದು ಹೇಗೆ ಎನ್ನುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಜೊತೆಗೆ ಪರೀಕ್ಷಾ ದಿನಾಂಕ, ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ಸೋಮವಾರ ಸಭೆ ಸೇರುತ್ತೇವೆ ಎಂದಿದ್ದಾರೆ.

ಎಸ್ಎಸ್ಎಲ್‌ಸಿ ಪರೀಕ್ಷೆ ಸಂಬಂಧ ಸಿಎಂ ಮಹತ್ವದ ಸಭೆ ಎಸ್ಎಸ್ಎಲ್‌ಸಿ ಪರೀಕ್ಷೆ ಸಂಬಂಧ ಸಿಎಂ ಮಹತ್ವದ ಸಭೆ

''ಒಂದು ಡೆಸ್ಕ್‌ನಲ್ಲಿ, ಒಂದು ಕೊಠಡಿಯಲ್ಲಿ ಎಷ್ಟು ಮಕ್ಕಳನ್ನು ಕೂರಿಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸ್ತೇವೆ. ಅವರ ತಪಾಸಣೆ, ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲಾ ವಿಚಾರ ಚರ್ಚೆ ಮಾಡಿ ತೀರ್ಮಾನ ಮಾಡ್ತೇವೆ.'' ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

Education Minister Suresh Kumar Holds Final Meeting Regarding SSLC Exams on Monday

ಇನ್ನು ಖಾಸಗಿ ಶಾಲೆಗಳು ಶುಲ್ಕ ಸಂಗ್ರಹಿಸುವವರು ಸರ್ಕಾರದ ಸುತ್ತೋಲೆ ಹೊರಡಿಸುವವರೆಗೂ ಶಾಲಾ ಶುಲ್ಕ ಸಂಗ್ರಹಿಸುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಆದರೆ, ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಗಳವರು ಬಂದು ಸಂಬಳ ಪಾವತಿಸಲು ತೊಂದರೆ ಆಗುತ್ತಿದೆ ಎಂದು ಮನವಿ ಮಾಡಿದ್ದರು. ಹೀಗಾಗಿ, ಪೋಷಕರಿಗೆ ಒತ್ತಾಯ ಮಾಡದೆ ಶುಲ್ಕ ಸಂಗ್ರಹಿಸುವಂತಿಲ್ಲ, ಅವರು ಒಪ್ಪಿದ್ರೆ ಸಂಗ್ರಹಿಸಬಹುದೆಂದು ಸೂಚಿಸಿದ್ದೆ. ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

English summary
Education minister Suresh Kumar holds a final meeting regarding SSLC exam on May 18th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X