ಕೆಂಗೇರಿ ಬಳಿ ಒಂದು ಅಕ್ರಮ ಆಶ್ರಮ: ಅಪ್ರಾಪ್ತ ಹೆಣ್ಣುಮಕ್ಕಳ ರಕ್ಷಣೆ

ಬೆಂಗಳೂರು, ಏ.4: ಎಂಜಿನಿಯರಿಂಗ್ ಪದವೀಧರರು ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ ಅಪ್ರಾಪ್ತ ಹೆಣ್ಣುಮಕ್ಕಳನ್ನು ರಕ್ಷಿಸಲಾಗಿದೆ.

ಕೆಂಗೇರಿಯಲ್ಲಿ ಎಂಜಿನಿಯರಿಂಗ್ ಪದವೀಧರರು ಅಕ್ರಮವಾಗಿ ನಡೆಸುತ್ತಿದ್ದ ಆಶ್ರಮದಿಂದ 8 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.

ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣವರ್, ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ನಾವು ಕೇಸು ದಾಖಲಿಸಿದ್ದೇವೆ. ತನಿಖೆ ಮುಂದುವರಿಸಿದ್ದೇವೆ. ಕೆಂಗೇರಿ ಗೇಟ್ ಉಪ ವಿಭಾಗದ ಎಸಿಪಿಯವರಿಗೆ ಕೇಸಿನ ತನಿಖೆ ವಹಿಸಿದ್ದೇವೆ ಎಂದರು.

Eight kids rescued from illegal ashram in Bengaluru

ಆಶ್ರಮದ ಮಾಲೀಕ 40 ವರ್ಷದ ಜಾದೂಗಾರ ಆಗಿದ್ದು ಆತ ಆಶ್ರಮದಲ್ಲಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನಡೆಸಿದ್ದಾನೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪೊಕ್ಸೊ ಕಾಯ್ದೆಯಡಿ ಕೇಸು ದಾಖಲಿಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಈ ಬಾಲಕಿ ಮಾತ್ರ ದೂರು ಸಲ್ಲಿಸಿದ್ದು ಬೇರೆ ಬಾಲಕಿಯವರು ಯಾವುದೇ ದೂರು ನೀಡಿಲ್ಲ, ಹೀಗಾಗಿ ತನಿಖೆ ನಡೆಸಿಯೇ ನಾವು ತೀರ್ಮಾನಕ್ಕೆ ಬರುತ್ತೇವೆ ಎನ್ನುತ್ತಾರೆ ಹಿರಿಯ ಪೊಲೀಸ್ ಅಧಿಕಾರಿ.

ಆಶ್ರಮದಿಂದ ತಪ್ಪಿಸಿಕೊಂಡು ಬಂದು ಚಾಮರಾಜನಗರ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿದ ಬಾಲಕಿಯೊಬ್ಬಳು ನೀಡಿದ ಮಾಹಿತಿ ಪಡೆದ ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯರು ನೀಡಿದ್ದ ದೂರಿನ ಮೇರೆಗೆ ನಗರ ಪೊಲೀಸರು ಆಶ್ರಮಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+