Ejipura Flyover: ಈಜಿಪುರ ಫ್ಲೈ ಓವರ್, ಹೊಸ ಬೇಡಿಕೆ ಮುಂದಿಟ್ಟ ಬಿಬಿಎಂಪಿ
ಬೆಂಗಳೂರು, ಜನವರಿ 27: ಉದ್ಯಾನ ನಗರಿ ಬೆಂಗಳೂರಿನಲ್ಲಿ ಈಜಿಪುರ ಫ್ಲೈ ಓವರ್ ಕಾಮಗಾರಿ ಪೂರ್ಣಗೊಳ್ಳುವುದು ಯಾವಾಗ?. ಈ ಪ್ರಶ್ನೆಗೆ ಉತ್ತರ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂ) ಅಧಿಕಾರಿಗಳಿಗೂ ಸಾಕಾಗಿ ಹೋಗಿದೆ. 2017ರಲ್ಲಿ 30 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಗುರಿ ಹಾಕಿಕೊಂಡು ಆರಂಭಿಸಿದ ಯೋಜನೆ 2025ರಲ್ಲಿಯೂ ಪೂರ್ಣಗೊಂಡಿಲ್ಲ.
2.5 ಕಿ. ಮೀ. ಉದ್ದದ ಫ್ಲೈ ಓವರ್ ಕಾಮಗಾರಿ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರ 2025ರ ಡಿಸೆಂಬರ್ ತನಕ ಗಡುವು ನೀಡಿದೆ. ಈಗ ಯೋಜನೆ ಪೂರ್ಣಗೊಳಿಸಲು ಹೊಸ ಸವಾಲು ಎದುರಾಗಿದೆ. ಫ್ಲೈ ಓವರ್ ಪೂರ್ಣಗೊಳಿಸಲು ಮರಗಳನ್ನು ಕಡಿಯಲು ಬಿಬಿಎಂಪಿ ಅನುಮತಿ ಕೇಳಿದೆ.

157 ಮರಗಳನ್ನು ಕಡಿಯಬೇಕಿದೆ: ಈಜಿಪುರ ಫ್ಲೈ ಓವರ್ ಕಾಮಗಾರಿಯ ಬಾಕಿ ಉಳಿದಿರುವ ಕಾಮಗಾರಿಯನ್ನು ಮುಗಿಸಲು 157 ಮರಗಳನ್ನು ಕಡಿಯಲು ಅನುಮತಿ ನೀಡಬೇಕು ಎಂದು ಬಿಬಿಎಂಪಿ ಮನವಿ ಸಲ್ಲಿಕೆ ಮಾಡಿದೆ. ಅಲ್ಲದೇ ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಸಹ ಆಹ್ವಾನಿಸಿದೆ.
ಜನವರಿ ಅಂತ್ಯದ ತನಕ ಜನರು ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಬಿಬಿಎಂಪಿ ನಿರ್ಮಾಣ ವಿಭಾಗದ ಇಂಜಿನಿಯರ್‌ಗಳು ಈಜಿಪುರ ಫ್ಲೈ ಓವರ್ ಕಾಮಗಾರಿ ಪೂರ್ಣಗೊಳಿಸುವ ಒತ್ತಡವನ್ನು ಎದುರಿಸುತ್ತಿದ್ದಾರೆ. ಕಾಮಗಾರಿ ಪೂರ್ಣಗೊಳಿಸಲು 157 ಮರಗಳನ್ನು ಕಡಿಯಲೇಬೇಕಾದ ಅನಿವಾರ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈಜಿಪುರ ಫ್ಲೈ ಓವರ್ ಕೋರಮಂಗಲ ಹೊರ ವರ್ತುಲ ರಸ್ತೆ (ಈಜಿಪುರ)ದಿಂದ ಕೇಂದ್ರಿಯ ಸದನದ ತನಕ ಈ 2.5 ಕಿ. ಮೀ. ಉದ್ದವಿದೆ. ಈ ಯೋಜನೆಗೆ ಈಗಾಗಲೇ ಪಿಲ್ಲರ್‌ಗಳನ್ನು ಹಾಕಲಾಗಿದೆ. ಆದರೆ ಪ್ರೀಕಾಸ್ಟ್ ಸೆಗ್ಮೆಂಟ್‌ಗಳನ್ನು ಅಳವಡಿಕೆ ಮಾಡಿ, ಮುಂದಿನ ಕಾಮಗಾರಿ ನಡೆಸುವುದು ಬಾಕಿ ಇದೆ. ಇದಕ್ಕೂ ಮೊದಲು ಮರಗಳನ್ನು ಕಡಿಯಬೇಕಿದೆ.
ಮರಗಳನ್ನು ಕಡಿಯುವುದಕ್ಕೆ ವಿವಿಧ ಸಂಘ-ಸಂಸ್ಥೆಗಳು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದೆ. ಈ ಮರಗಳನ್ನು ಕಡಿಯಲು ಒಪ್ಪಿಗೆ ನೀಡಿದರೆ ಬೇರೆ ಎಲ್ಲಿ ಮರಗಳನ್ನು ಬೆಳೆಸಲಾಗುತ್ತದೆ? ಎಂದು ಸರಿಯಾದ ಮಾಹಿತಿ ನೀಡಬೇಕು ಎಂದು ಬಿಬಿಎಂಪಿಯನ್ನು ಒತ್ತಾಯಿಸಲಾಗಿದೆ.
ರಸ್ತೆ, ಫ್ಲೈ ಓವರ್ ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ ಅಗತ್ಯವಾಗಿದೆ. ಆದರೆ ನಾವು ಇಂದು ಹವಾಮಾನ ಬದಲಾವಣೆ ಯುಗದಲ್ಲಿದ್ದೇವೆ. ನಗರದಲ್ಲಿ ಇರುವ ಮರಗಳನ್ನು ಕಡಿದರೆ ಮರಗಳ ಸಂಖ್ಯೆ ಇನ್ನಷ್ಟು ಕಡಿಮೆಯಾಗುತ್ತದೆ ಎಂದು ಆಕ್ಷೇಪಣೆಯಲ್ಲಿ ಸಂಘ-ಸಂಸ್ಥೆಗಳು ಹೇಳಿವೆ.
ಫ್ಲೈಓವರ್ ನಿರ್ಮಾಣಕ್ಕೆ 564 ಸೆಗ್ಮೆಂಟ್‌ಗಳನ್ನು ಅಳವಡಿಕೆ ಮಾಡಬೇಕಿದೆ. 69 ಸೆಗ್ಮೆಂಟ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಕೆಲವು ಸೆಗ್ಮೆಂಟ್‌ಗಳಲ್ಲಿ ದೋಷವಿದ್ದು, ಅದನ್ನು ಬದಲಾವಣೆ ಮಾಡಿ, ಹೊಸದಾಗಿ ನಿರ್ಮಾಣ ಮಾಡಬೇಕಿದೆ. ಅದೇ ಗುತ್ತಿಗೆದಾರರು ಕಾಮಗಾರಿಯನ್ನು ಪೂರ್ಣಗೊಳಿಸಲು ಡಿಸೆಂಬರ್ 2025ರ ತನಕ ಅವಕಾಶ ನೀಡಲಾಗಿದೆ.
ಫ್ಲೈ ಓವರ್ ಬಿಟಿಎಂ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಕ್ಷೇತ್ರದ ಶಾಸಕ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಫ್ಲೈ ಓವರ್ ಕಾಮಗಾರಿಗಳ ಕುರಿತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸದ್ಯ ಗುತ್ತಿಗೆ ಪಡೆದ ಸಂಸ್ಥೆಯೇ ಕಾಮಗಾರಿ ಮುಂದುವರೆಸಲು, ಯೋಜನೆ ಪೂರ್ಣಗೊಳಿಸಲು ಒಪ್ಪಿಗೆ ಕೊಟ್ಟಿದ್ದಾರೆ.
ಅಲ್ಲದೇ ಈ ಕಾಮಗಾರಿ ಅಪ್‌ಡೇಟ್ ಕುರಿತು ಜನರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳ ಮಾಹಿತಿ ಪ್ರಕಾರ ಕಳೆದ ಮೂರು ತಿಂಗಳಿನಿಂದ ಕಾಮಗಾರಿ ನಿಗದಿತ ವೇಗದಲ್ಲಿ ಸಾಗುತ್ತಿದೆ. 2025ರ ಡಿಸೆಂಬರ್‌ನಲ್ಲಿ ಪೂರ್ಣಗೊಳಿಸಲು ಪ್ರಯತ್ನ ನಡೆಸಲಾಗುತ್ತದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications