ಲತಾ & ಆಶಾ ಗೌರವಾರ್ಪಣೆಯಲ್ಲಿ ಸಂಗೀತ ರಸಸಂಜೆ
ಬೆಂಗಳೂರು ಮೇ 29: ದೇಶ ಕಂಡ ಅತ್ಯುತ್ಕೃಷ್ಠ ಗಾನ ಕೋಗಿಲೆಗಳಾದ ಲತಾ ಮಂಗೇಶ್ಕರ್ ಮತ್ತು ಆಶಾ ಭೋಸ್ಲೆ ಅವರಿಗೆ ಗೌರವಾರ್ಪಣೆ ಮಾಡುವ ಮತ್ತೊಂದು ಸುಂದರ ಸಂಜೆ ಬೆಂಗಳೂರಿಗೆ ಬರುತ್ತಿದೆ.
2018 ರ ಜೂನ್ನಲ್ಲಿ ಆಯೋಜಿಸಿದ್ದ ಏಕ್ ರಾಧಾ ಏಕ್ ಮೀರಾ-1 ಸಂಗೀತ ಸಂಜೆಯು ಅತ್ಯಂತ ಯಶಸ್ವಿಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಲತಾ-ಆಶಾ ಅವರ ಅಭಿಮಾನಿಗಳ ಒತ್ತಾಯದ ಮೇರೆಗೆ ಇದೀಗ 2019 ರ ಜೂನ್ 1 ರಂದು ಬೆಂಗಳೂರಿನಲ್ಲಿ ಸಂಗೀತ ಸಂಜೆಯನ್ನು ಆಯೋಜಿಸಲಾಗುತ್ತಿದೆ.
ಏಕ್ ರಾಧಾ ಏಕ್ ಮೀರಾ-2 ಎಂಬ ಈ ರಸಸಂಜೆಯಲ್ಲಿ ಲತಾ ಮಂಗೇಶ್ಕರ್ ಮತ್ತು ಆಶಾ ಭೋಸ್ಲೆ ಅವರು ಹಾಡಿರುವ ಅನೇಕ ಸೂಪರ್ಹಿಟ್ ಹಾಡುಗಳನ್ನು ಖ್ಯಾತ ಗಾಯಕಿಯರು ಹಾಡಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

ಲತಾ ಮತ್ತು ಆಶಾ ಅವರು ತಮ್ಮ ಇಡೀ ಜೀವನವನ್ನು ಸಂಗೀತಕ್ಕೆ ಮುಡಿಪಾಗಿಟ್ಟಿದ್ದು, ಇವರಿಬ್ಬರೂ ದೇಶದ ಹೆಮ್ಮೆ ಎನಿಸಿದ್ದಾರೆ. ಈ ಇಬ್ಬರು ಸಹೋದರಿಯರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಈ ಸಂಗೀತ ರಸಸಂಜೆಯನ್ನು ಏರ್ಪಡಿಸಲಾಗಿದೆ.
ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಜೂನ್ 1 ರ ಸಂಜೆ 6 ಗಂಟೆಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಗಾಯಕರಾದ ಏಕ್ತಾ ಶಾಹ್, ಅನಿಕೇತ್ ಪ್ರಭು, ಶೃತಿ ಭಿಂಡೆ, ರಘುಪತಿ ಝಾ ಅವರು ಹಾಡಿ ರಂಜಿಸಲಿದ್ದಾರೆ.
ಸ್ಥಳ: ಚೌಡಯ್ಯ ಮೆಮೋರಿಯಲ್ ಹಾಲ್
2019 ರ ಜೂನ್ 1 ರಂದು ಸಂಜೆ 6 ಗಂಟೆಯಿಂದ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications