ಇ-ಸಿಟಿ ಹಬ್ಬಕ್ಕಾಗಿ ಲೋಗೋ ವಿನ್ಯಾಸ ಮಾಡಿ, ಬಹುಮಾನ ಗೆಲ್ಲಿ!
ಬೆಂಗಳೂರು, ಜುಲೈ 12: ಲೋಗೋ ಡಿಸೈನ್ ಮಾಡುವಲ್ಲಿ ಆಸಕ್ತಿ ಇರುವಂತಹವರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯ ಎಲ್ಸಿಟಾ ಸಂಸ್ಥೆ 24 ಆಗಸ್ಟ್ ರಂದು ಆಯೋಜಿಸಲಿರುವ ಇ-ಸಿಟಿ ಹಬ್ಬ ಕಾರ್ಯಕ್ರಮಕ್ಕೆ ಉತ್ತಮ ಲೋಗೋ ತಯಾರಿಸಿದವರಿಗೆ ರೂ. 10000 ಬಹುಮಾನ ನೀಡುವುದಾಗಿ ಘೋಷಿಸಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೆಲೆಸಿರುವ ಮತ್ತು ಕಾರ್ಯ ನಿರ್ವಹಿಸುವ ನಾಗರಿಕರಿಗಾಗಿ ಆಯೋಜಿಸಲಾಗಿರುವ ಇ-ಸಿಟಿ ಹಬ್ಬದ ಸ್ಪರ್ಧೆಯಲ್ಲಿ ಭಾರತೀಯ ಪೌರತ್ವ ಹೊಂದಿರುವ ಯಾರು ಬೇಕಾದರೂ ಭಾಗವಹಿಸಬಹುದು.

ಜುಲೈ 11ರಂದು ಈ ಸ್ಪರ್ಧೆ ಆರಂಭವಾಗಿದ್ದು, ಜುಲೈ 15 ಸಂಜೆ 6ರವರೆಗೂ 18ವರ್ಷ ತುಂಬಿದ ಮತ್ತು ಮೇಲ್ಪಟ್ಟ ಆಸಕ್ತರಿಗೆ ನೋದಾಯಿಸಿಕೊಳ್ಳಲು ಅವಕಾಶವಿದೆ.
ಏನಿದು ಇ-ಸಿಟಿ ಹಬ್ಬ?: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವಂತಹ ಇ-ನಾಗರಿಕರಿಗಾಗಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮವಿದು. ಇಲ್ಲಿ ಸ್ಥಳೀಯ ಪ್ರತಿಭೆಗಳಿಗೆ ತಮ್ಮ ಪ್ರತಿಭೆಯನ್ನು ಸಮಾಜದೊಂದಿಗೆ ಹಂಚಿಕೊಳ್ಳಲು ಉತ್ತಮ ವೇದಿಕೆ ಸಿಗುತ್ತದೆ.
ಭಾರತದ ಶ್ರೀಮಂತ ಸಂಸ್ಕೃತಿಯನ್ನು ಇ-ನಾಗರಿಕರೊಂದಿಗೆ ಹಂಚಿಕೊಳ್ಳುವುದು ಈ ಕಾರ್ಯಕ್ರಮದ ಉದ್ದೇಶ. ಇದರೊಂದಿಗೆ ಸದಾ ಕೆಲಸದ ಒತ್ತಡದಲ್ಲಿ ಮುಳುಗಿರುವ ಇಲ್ಲಿನ ಉದ್ಯೋಗಿಗಳಿಗೆ ಮನೋರಂಜನೆಯನ್ನು ಕೂಡ ಇ-ಸಿಟಿ ಹಬ್ಬ ನೀಡಲಿದೆ.
ಭಾಗವಹಿಸಲು ಇಚ್ಛಿಸುವ ಆಸಕ್ತರು ಎಲ್ಸಿಟಾ ಸಂಸ್ಥೆಯ ಫೇಸ್ಬುಕ್, ಟ್ವಿಟರ್ ಮತ್ತು ಇನ್ಸ್ಟಾಗ್ರಾಮ್ ಖಾತೆಗಳನ್ನು ಫಾಲೋ ಮಾಡಬೇಕು. ಆ ಖಾತೆಗಳಲ್ಲಿ ತಾವು ರಚಿಸಿದಂಥ ಲೋಗೋವನ್ನು ತಮ್ಮ ಹೆಸರಿನೊಂದಿಗೆ (ವಾಟರ್ ಮಾರ್ಕ್) ಅಪ್ಲೋಡ್ ಮಾಡಬೇಕು. ನಂತರ #DesignYourHabba ಮತ್ತು #ELCITA ಹ್ಯಾಶ್ ಟ್ಯಾಗ್‍ನೊಂದಿಗೆ ನಿಮ್ಮ ಲೋಗೋವನ್ನು ಟ್ಯಾಗ್ ಮಾಡಬೇಕು.
ಕೊನೆ ಹಂತದಲ್ಲಿ ನಿಮ್ಮ ಮೂರು ಸ್ನೇಹಿತರಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಹ್ವಾನಿಸಿದ್ದಲ್ಲಿ ನೀವು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಗಳಿಸುವಿರಿ. ಮೇಲಿನ ನಿಯಗಳನ್ನು ಪಾಲಿಸಿ ಸ್ಪರ್ಧೆಯಲ್ಲಿ ಗೆದ್ದಂತಹ ಡಿಸೈನರ್ ಗಳಿಗೆ ರೂ 10000 ನಗದು ಬಹುಮಾನವಿರುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications