ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ವೃದ್ಧೆ ಬಲಿ
Recommended Video

ಬೆಂಗಳೂರು, ಸೆಪ್ಟೆಂಬರ್ 02 : ಚರ್ಚ್ ನಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ಮರಳುತ್ತಿದ್ದ ವೃದ್ಧೆಯೊಬ್ಬರು ಆಲ್ಟೋ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತವಾದ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ.
ವೃದ್ಧೆಗೆ ಡಿಕ್ಕಿ ಹೊಡೆದ ಮಾರುತಿ ಆಲ್ಟೋ ಕಾರಿನ ಚಾಲಕ ಕಾರನ್ನು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಮೃತರಾದವರನ್ನು 74 ವರ್ಷದ ಅಲೆಯಮ್ಮಾ ಜೇಕೊಬ್ ಎಂದು ಗುರುತಿಸಲಾಗಿದೆ. ಅವರಿಗೆ ಅಂತಿಮ ನಮನವನ್ನು ಸೆಪ್ಟೆಂಬರ್ 3ರಂದು ಮತ್ತೀಕೆರೆ ಎಕ್ಸ್ ಟೆನ್ಶನ್ ನಲ್ಲಿರುವ ಅವರ ಸ್ವಗೃಹದಲ್ಲಿ ನೆರವೇರಿಸಲಾಗುತ್ತಿದೆ.

ಎಂಎಸ್ ರಾಮಯ್ಯ ಕಾಲೇಜು ಬಳಿಯಿರುವ ಚರ್ಚ್ ನಲ್ಲಿ ಪ್ರಾರ್ಥನೆ ಮುಗಿಸಿಕೊಂಡು ಅಲೆಯಮ್ಮಾ ಅವರು ಶುಕ್ರವಾರ ಬೆಳಗ್ಗೆ 7.30ರ ಸುಮಾರಿಗೆ ರಸ್ತೆ ದಾಟುತ್ತಿದ್ದರು. ಆಗ ಅವರಿಗೆ ವೇಗವಾಗಿ ಬರುತ್ತಿದ್ದ ಕೆಂಪು ಬಣ್ಣದ ಆಲ್ಟೋ ಕಾರು ಡಿಕ್ಕಿ ಹೊಡೆದಿದೆ.
ಅಲೆಯಮ್ಮ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾದವರು ಯಾರು ಎಂದು ಇನ್ನೂ ತಿಳಿದುಬಂದಿಲ್ಲ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಕಾರಿನ ನಂಬರ್ ಮಾತ್ರ ನಿಖರವಾಗಿ ಗುರುತಿಸಲು ಸಾಧ್ಯವಾಗಿಲ್ಲ. ಯಶವಂತ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಫುಟೇಜನ್ನು ಪರಿಶೀಲಿಸುತ್ತಿದ್ದಾರೆ.












Click it and Unblock the Notifications