• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ಸಂಸ್ಥೆಗೆ ಬೆಂಗಳೂರು ಮತದಾರರು ಮಾಹಿತಿ ಹಂಚಿಕೊಳ್ಳಬಾರದು ಎಂದ ಬಿಬಿಎಂಪಿ, ಏಕೆ?

|
Google Oneindia Kannada News

ಬೆಂಗಳೂರು, ನವೆಂಬರ್ 17: ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಬೆಂಗಳೂರು ವ್ಯಾಪ್ತಿಯಲ್ಲಿನ ಮತದಾರರ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬಾರದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮನವಿ ಮಾಡಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿಯು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಮತದಾರರ ಮಾಹಿತಿ ಸಂಗ್ರಹಿಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ.

 ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿಎಲ್ಓ, ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಸಹಯೋಗದೊಂದಿಗೆ ಸಮನ್ವಯ ಸಾಧಿಸಲಾಗಿತ್ತು.

ಅದರಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಅನ್‌ಲೈನ್‌ ಮೂಲಕ ಇಲ್ಲವೇ ವಿಎಚ್ಎ (Voter Helpline App) ಮುಖೇನ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಚಿಂತಿಸಲಾಗಿತ್ತು. ಈ ಜಾಗೃತಿ ಮೂಡಿಸುವ ನಿರ್ವಹಣೆಯನ್ನು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ವಹಿಸಿ ಅನುಮತಿ ನೀಡಲಾಗಿತ್ತು.

ಷರತ್ತು ಉಲ್ಲಂಘಿಸಿದ ಸಂಸ್ಥೆ

ಆದರೆ ಸದರಿ ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಪತ್ರದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಂಸ್ಥೆಗಳು ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿದೆ. ಹೀಗಾಗಿ ಆ ಸಂಸ್ಥೆಗೆ ನೀಡಲಾಗಿದ್ದ ಅನುಮತಿಯನ್ನು ರದ್ದು ಮಾಡಲಾಗಿದೆ.

ಹೀಗಾಗಿ ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಪ್ರತಿನಿಧಿಗಳು ನಿಮ್ಮ ಮನೆ ಬಳಿ ಬಂದು ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಕೇಳಿದರೆ ನಿರಾಕರಿಸಿ. ಯಾವುದೇ ಮಾಹಿತಿನ್ನು ಹಂಚಿಕೊಳ್ಳಬೇಡಿ ಎಂದು ಬಿಬಿಎಂಪಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

English summary
Karnataka Assembly Election 2023: BBMP request Bengaluru voters not to share your any information to company named Chilume Educational Cultural and Rural Development Institute.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X