ಬ್ರೇಕಿಂಗ್ : ಬಿಬಿಎಂಪಿ ಚುನಾವಣೆಗೆ ದಿನಾಂಕ ಪ್ರಕಟ
ಬೆಂಗಳೂರು, ಜೂ.25 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣಾ ದಿನಾಂಕ ಘೋಷಣೆಯಾಗಿದೆ. ನಗರದ 198 ವಾರ್ಡ್ಗಳಲ್ಲಿ ಒಂದೇ ಹಂತದಲ್ಲಿ ಜುಲೈ 28ರಂದು ಮತದಾನ ನಡೆಯಲಿದೆ.
ಗುರುವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ಅವರು ಬಿಬಿಎಂಪಿ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದರು. ಅವಿಭಜಿತ ಬಿಬಿಎಂಪಿಯ 198 ವಾರ್ಡ್ಗಳಿಗೆ ಒಂದೇ ಹಂತದಲ್ಲಿ ಜುಲೈ 28ರ ಮಂಗಳವಾರ ಮತದಾನ ನಡೆಯಲಿದ್ದು, ಜು.31ರ ಶುಕ್ರವಾರ ಫಲಿತಾಂಶ ಪ್ರಕಟಗೊಳ್ಳಲಿದೆ. [ಬಿಬಿಎಂಪಿಗೆ ಚುನಾವಣೆ ನಡೆಸುವುದು ಅನಿವಾರ್ಯ]

ಜೂನ್ 25ರ ಗುರುವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಜುಲೈ 8ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ಜುಲೈ 15ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಜುಲೈ 20ರಂದು ನಾಮಮತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. [ಬಿಬಿಎಂಪಿ ವಿಭಜನೆ ಹೇಗೆ, ಇಲ್ಲಿದೆ ಮಾಹಿತಿ]
ಚುನಾವಣೆಗೆ 11,635 ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆ ಮಾಡಲಾಗುತ್ತದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯು ಗರಿಷ್ಠ 5 ಲಕ್ಷ ರೂ.ಗಳನ್ನು ವೆಚ್ಚ ಮಾಡಬಹುದಾಗಿದೆ. ಚುನಾವಣಾ ವೆಚ್ಚ ಪರಿಶೀಲನೆಗೆ 88 ನೋಡೆಲ್ ಅಧಿಕಾರಿಗಳು, ಐವರು ವಿಶೇಷ ಚುನಾವಣಾ ವೀಕ್ಷಕರು, ಐವರು ವಿಶೇಷ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಾಗಿದೆ.
ಮತದಾನಕ್ಕಾಗಿ 6,730 ಮತಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. 71,22,165 ಜನರು ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಬಹುದಾಗಿದೆ. ಇವರಲ್ಲಿ ಪುರುಷ ಮತದಾರರು 37,38,808, ಮಹಿಳಾ ಮತದಾರರು 33,82,231, ಇತರೆ ಮತದಾರರು 1,126. ಜುಲೈ 15ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. [ಹೆಸರು ಸೇರಿಸುವುದು ಹೇಗೆ?]
ಬಿಬಿಎಂಪಿಯನ್ನು ವಿಭಜನೆ ಮಾಡಿ ಚುನಾವಣೆ ನಡೆಸಲು ಪ್ರಯತ್ನ ನಡೆಸಿದ ಕಾಂಗ್ರೆಸ್ ಸರ್ಕಾರ ಈ ಕುರಿತು ಸುಪ್ರೀಂಕೋರ್ಟ್ನಲ್ಲಿ ನಡೆಸಿದ ಕಾನೂನು ಹೋರಾಟವೂ ಫಲ ನೀಡಿರಲಿಲ್ಲ. ಆಗಸ್ಟ್ 5ರೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಿ ಎಂದು ಸುಪ್ರೀಂಕೋರ್ಟ್ ಸರ್ಕಾರದಕ್ಕೆ ಆದೇಶ ನೀಡಿತ್ತು.
ಕರ್ನಾಟಕದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಕಳೆದ ಬಾರಿ ಪಾಲಿಕೆಯಲ್ಲಿ ಅಧಿಕಾರ ಪಡೆದಿದ್ದ ಬಿಜೆಪಿ ಈ ಬಾರಿಯೂ ಮೇಯರ್ ಪಟ್ಟಕ್ಕೇರುವ ನಿರೀಕ್ಷೆ ಹೊಂದಿದೆ. ಬಿಬಿಎಂಪಿ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಯಾವ ಚುನಾವಣೆಗಳಲ್ಲಿಯೂ ಪಕ್ಷೇತರರನ್ನು ಕಡೆಗಣಿಸುವಂತಿಲ್ಲ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿ ಅಧಿಕಾರ ಪಡೆದಿರುವ ಆಮ್ ಆದ್ಮಿ ಪಕ್ಷ ಬಿಬಿಎಂಪಿ ಚುನಾವಣಾ ತಯಾರಿ ಆರಂಭಿಸಿದ್ದು, ಈ ಬಾರಿಯ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. [ಬಿಬಿಎಂಪಿ ಚುನಾವಣೆಗೆ ತಯಾರಿ ಆರಂಭಿಸಿದ ಎಎಪಿ]
ಚುನಾವಣಾ ವೇಳಾಪಟ್ಟಿ
* 198 ವಾರ್ಡ್
* ಜುಲೈ 8 - ಅಧಿಸೂಚನೆ ಪ್ರಕಟ
* ಜುಲೈ 15 - ನಾಮಪತ್ರ ಸಲ್ಲಿಸಲು ಕೊನೆಯ ದಿನ
* ಜುಲೈ 20 - ನಾಮಪತ್ರ ಹಿಂಪಡೆಯಲು ಕೊನೆಯ ದಿನ
* ಜುಲೈ 28, ಮಂಗಳವಾರ - ಮತದಾನ
* ಜುಲೈ 30 - ಮರುಮತದಾನ (ಅಗತ್ಯವಿದ್ದರೆ)
* ಜುಲೈ 31, ಶುಕ್ರವಾರ - ಮತ ಎಣಿಕೆ
* ಒಟ್ಟು ಮತದಾರರು - 71,22,165
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications