ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್. ಆರ್. ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಚಾರ ಆರಂಭ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾರು?. ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದೆ.

ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ. ಆದರೆ, ಇಲ್ಲಿಯ ತನಕ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಘೋಷಣೆಯಾಗಿಲ್ಲ. ಮತ್ತೊಂದು ಕಡೆ ಜೆಡಿಎಸ್ ಸಹ ಅಭ್ಯರ್ಥಿ ಘೋಷಿಸಬೇಕಿದೆ.

ಆರ್. ಆರ್. ನಗರ ಟಿಕೆಟ್ ಘೋಷಣೆ; ಕುಸುಮಾ ಫೇಸ್‌ ಬುಕ್ ಪೋಸ್ಟ್ ಆರ್. ಆರ್. ನಗರ ಟಿಕೆಟ್ ಘೋಷಣೆ; ಕುಸುಮಾ ಫೇಸ್‌ ಬುಕ್ ಪೋಸ್ಟ್

ಆರ್. ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕುಸುಮಾ ಹನುಮಂತರಾಯಪ್ಪ ಅಭ್ಯರ್ಥಿ. ಅವರು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರಿಂದ ಬಿಫಾರಂ ಪಡೆದಿದ್ದು. ಅಕ್ಟೋಬರ್ 14ರಂದು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಆರ್. ಆರ್. ನಗರ ಉಪ ಚುನಾವಣೆ; ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್ಆರ್. ಆರ್. ನಗರ ಉಪ ಚುನಾವಣೆ; ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್

Election Campaign Of BJP Candidate Began In Rajarajeshwari Nagar For By Election

ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ನಡುವೆ ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಆದರೆ, ಇಬ್ಬರೂ ನಾಯಕರ ಬೆಂಬಲಿಗರು ಕ್ಷೇತ್ರದಲ್ಲಿ ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ.

ಶಿರಾ ಉಪ ಚುನಾವಣೆ; ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ! ಶಿರಾ ಉಪ ಚುನಾವಣೆ; ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ!

ಅಚ್ಚರಿಯಾದರೂ ಇದು ಸತ್ಯ. ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ಬೆಂಬಲಿಗರು ತಮ್ಮ ನಾಯಕರಿಗೆ ಟಿಕೆಟ್ ಸಿಗುವ ವಿಶ್ವಾಸ ಹೊಂದಿದ್ದು, ಮನೆ ಮನೆ ಪ್ರಚಾರವನ್ನು ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮನಿರತ್ನ ಪರ, ರಾಷ್ಟ್ರೀಯ ನಾಯಕರು ಮುನಿರಾಜು ಗೌಡ ಪರ ಇರುವ ಕಾರಣಕ್ಕೆ ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ. ಮುನಿರತ್ನ ಅವರನ್ನು ಪದೇ ಪದೇ ಭೇಟಿ ಮಾಡಿ ಟಿಕೆಟ್ ಖಚಿತ ಮಾಡಿಕೊಳ್ಳುತ್ತಿದ್ದಾರೆ.

ಸೋಮವಾರ ರಾತ್ರಿ ಅಥವ ಮಂಗಳವಾರ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಅಧಿಕೃತವಾಗಿ ಘೋಷಣೆ ಯಾಗುವ ನಿರೀಕ್ಷೆ ಇದೆ. ಆದರೆ, ಇಬ್ಬರೂ ನಾಯಕರ ಬೆಂಬಲಿಗರು ಮಾತ್ರ ತಮ್ಮ ನಾಯಕನಿಗೆ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.

English summary
Muniraju Gowda, Muniratna who will get BJP ticket for Rajarajeshwari Nagar by election. Party yet to announce candidate. But election campaign began in the assembly seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X