ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಇನ್ನೆರಡು ದಿನಗಳು ಬಾಕಿ ಇರುವಾಗ, ಕರ್ನಾಟಕ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ದ್ವೇಷವನ್ನು ಉತ್ತೇಜಿಸುವ ಪೋಸ್ಟ್ ಹಂಚಿಕೊಂಡ ಕರ್ನಾಟಕ ಬಿಜೆಪಿ ವಿರುದ್ಧ ಚುನಾವಣಾ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ನಡುವೆ ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸಯವ ಬಿಜೆಪಿಯ ಅಧಿಕೃತ ಹ್ಯಾಂಡಲ್‌ನ ಸಾಮಾಜಿಕ ಮಾಧ್ಯಮ ಪೋಸ್ಟ್ ಕುರಿತಂತೆ ಬುಧವಾರ ಎಫ್‌ಐಆರ್ ದಾಖಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 23 ರಂದು "ಕಾಂಗ್ರೆಸ್ ಪ್ರಣಾಳಿಕೆ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆ" ಶೀರ್ಷಿಕೆಯ 'ಎಕ್ಸ್' ಪೋಸ್ಟ್ ವಿರುದ್ಧ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ಸ್ ತಂಡವು ಎಫ್‌ಐಆರ್ ದಾಖಲಿಸಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದರು.
ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 125 ಮತ್ತು ಭಾರತೀಯ ದಂಡ ಸಂಹಿತೆಯ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವ ಉದ್ದೇಶದಿಂದ) ಎಫ್‌ಐಆರ್ ಅನ್ನು ಏಪ್ರಿಲ್ 24 ರಂದು ವಿವಿಧ ಗುಂಪುಗಳು ಮತ್ತು ನಾಗರಿಕರ ವರ್ಗಗಳ ನಡುವೆ ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸಲು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ವ್ಯಾಪಕ ಆಕ್ರೋಶ
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಾಹೀರಾತು ಸಮರ ನಡೆಯುತ್ತಿದೆ. ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಕಾಂಗ್ರೆಸ್ ಚೊಂಬು ಜಾಹೀರಾತು ನೀಡಿದ ಬಳಿಕ ಸಿಟ್ಟಾದ ಬಿಜೆಪಿ ಪ್ರತಿಕ್ರಿಯೆ ನೀಡುವಂತೆ ಜಾಹೀರಾತು ನೀಡುತ್ತಿದೆ.
ಕಾಂಗ್ರೆಸ್ ರಾಜ್ಯಕ್ಕೆ ಕೇಂದ್ರ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡಿದ್ದರೆ. ಕಾಂಗ್ರೆಸ್ ಪ್ರಣಾಳಿಕೆಯನ್ನು ಮುಸ್ಲಿಮರ ಪ್ರಣಾಳಿಕೆ ಎಂದು ಬಿಜೆಪಿ ಜಾಹೀರಾತು ನೀಡಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಏಪ್ರಿಲ್ 26 ಮತ್ತು ಮೇ 7 ರಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮತದಾನ ಎರಡು ಹಂತಗಳಲ್ಲಿ ನಡೆಯಲಿದೆ.












Click it and Unblock the Notifications