ಮತದಾನದ ದಿನ ಬೆಳಗ್ಗೆ ಸಿಗಲ್ಲ ಬಾಡಿಗೆ ವಾಹನಗಳು!
ಬೆಂಗಳೂರು, ಏಪ್ರಿಲ್. 24: ಲೋಕಸಭಾ ಚುನಾವಣೆ ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ. ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯ ಮೊದಲ ಮತದಾನ ನಡೆಸಲಿದೆ. ಅದು ಶುಕ್ರವಾರ (ಏಪ್ರಿಲ್ 26). ಮತದಾನ ಹೆಚ್ಚಾಗಲಿ, ಜನರು ತಮ್ಮ ಮತ ಚಲಾಯಿಸಲಿ ಎಂದು ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ.
ಆದರೆ, ಶುಕ್ರವಾರದ ಬಳಿಕ ಇರುವ ಎರಡು ದಿನಗಳು ವಾರಾಂತ್ಯವಾಗಿರುವ ಕಾರಣ ಜನ ಮತದಾನ ಮಾಡುವ ಬದಲು ಪ್ರವಾಸಕ್ಕೆ ತೆರಳುವುದೇ ಹೆಚ್ಚಾಗಿದೆ. ಪ್ರತಿ ಬಾರಿಯು ಇದು ವರದಿಯಾಗುತ್ತಿದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಜೊತೆಗೆ ಸೇರಿ ಹೊಸ ಕ್ರಮ ತೆಗೆದುಕೊಂಡಿದೆ.

ಲೋಕಸಭಾ ಚುನಾವಣೆ 2024ರ ಸಂಬಂಧ ಮತದಾನ ಪ್ರಮಾಣ ಹೆಚ್ಚಿಸಲು ಸಹಕಾರ ಕೋರಿ ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯು ಸಾರ್ವಜನಿಕರು, ವಾಹನ ಮಾಲೀಕರು ಹಾಗೂ ಚಾಲಕರುಗಳು ಸಹಕರಿಸುವಂತೆ ಕೇಳಿದೆ. ಮತದಾನದ ಬಳಿಕವೇ ಬೆಂಗಳೂರಿನಿಂದ ಪ್ರವಾಸಿ ತಾಣಗಳಿಗೆ ಹಾಗೂ ಇನ್ನಿತರ ಕಾರ್ಯಗಳಿಗೆ ಹೋಗುವವರನ್ನು ಕರೆದುಕೊಂಡು ಹೋಗಬೇಕು ಎಂದು ಸೂಚಿಸಿದೆ.
ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರು ಅಧ್ಯಕ್ಷತೆಯಲ್ಲಿ ಲೋಕಸಭಾ ಚುನಾವಣೆ 2024ರ ಸಂಬಂಧ ಮ್ಯಾಕ್ಸಿ ಕ್ಯಾಬ್, ಸ್ಟೇಜ್ ಕ್ಯಾರೇಜ್, ಕಾಂಟ್ರಾಕ್ಟ್ ಕ್ಯಾರೇಜ್ ಹಾಗೂ ಇತರೆ ಸಾರಿಗೆ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಬೆಂಗಳೂರಿನಿಂದ ಪ್ರವಾಸಿ ತಾಣಗಳಿಗೆ ಹಾಗೂ ಇನ್ನಿತರ ಕಾರ್ಯಗಳಿಗೆ ತೆರಳುವರಿದ್ದಲ್ಲಿ ಮತದಾನ ಮಾಡಿದ ನಂತರದಲ್ಲಿ ಮಧ್ಯಾಹ್ನದ ನಂತರ ಕರೆದೊಯ್ಯಲು ವಿನಂತಿಸಿಲಾಗಿದೆ. ಇದಕ್ಕೆ ಎಲ್ಲಾ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಒಮ್ಮತದಿಂದ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಲು ಜಿಲ್ಲಾ ಚುನಾವಣಾಧಿಕಾರಿಗಳು ಸಾರಿಗೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಸಾರ್ವಜನಿಕ ಪ್ರಕಟಣೆ.#rto #transportdepartment pic.twitter.com/eOdMdLspJU
— ಸಾರಿಗೆ ಇಲಾಖೆ ,Transport Department Karnataka (@tdkarnataka) April 23, 2024
ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಸಂಬಂಧ ದಿನಾಂಕ: 26-4-2024ರಂದು ಮತದಾನ ನಡೆಯುವ ದಿನ ಹಾಗೂ ವಾರದ ಕೊನೆಯ ರಜಾದಿನಗಳನ್ನು ಸೇರಿಸಿಕೊಂಡು ಧಾರ್ಮಿಕ ಕ್ಷೇತ್ರಗಳಿಗೆ, ಪ್ರವಾಸಿ ತಾಣಗಳಿಗೆ, ಸ್ವಗ್ರಾಮಗಳಿಗೆ ತೆರಳುವ ಸಾಧ್ಯತೆಗಳು ಹೆಚ್ಚಾಗಿವೆ.
ಹೀಗಾಗಿ ಮತದಾನದ ಪ್ರಮಾಣ ಹೆಚ್ಚಿಸಲು ಹಾಗೂ ಸಾರ್ವಜನಿಕರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಸಾರಿಗೆ ಸಂಘ-ಸಂಸ್ಥೆಗಳು ತಮ್ಮ ವಾಹನಗಳ ಪ್ರವಾಸ ಕಾರ್ಯಕ್ರಮಗಳನ್ನು ದಿನಾಂಕ: 26-4-20240 ಮಧ್ಯಾಹ್ನದ ನಂತರ ಪ್ರಾರಂಭಿಸಲು ಬಾಡಿಗೆ ಪಡೆದ ಪ್ರಯಾಣಿಕರು/ಸಾರ್ವಜನಿಕರಿಗೆ ಮುಂಚಿತವಾಗಿ ತಿಳಿಸಬೇಕು. ಈ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಲು ಸಹಕರಿಸುವಂತೆ ಸಾರಿಗೆ ಇಲಾಖೆ ಕೋರಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications