ಚುನಾವಣಾ ಕಾರ್ಯಕ್ಕೆ ಗೈರಾದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು, ಮೇ 02; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮೇ 10ರಂದು ನಡೆಯಲಿದೆ. 12ಡಿ ಅರ್ಜಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಮತದಾನ ಮಾಡಿದ್ದಾರೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡವರು, ಸೇವಾ ಮತದಾರರು ಮೇ 2ರಿಂದ 4ರ ತನಕ ಮತದಾನ ಮಾಡಲಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಚುನಾವಣಾ ಕೆಲಸ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿ/ ಸಿಬ್ಬಂದಿ (PRO, APRO & PO)ಯು ಗೈರು ಹಾಜರಾದಲ್ಲಿ ಅವರ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಮೇ 10ರ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

Election Duty Training Warning For Officials

ಚುನಾವಣೆಗಾಗಿ ಮತಗಟ್ಟೆ ಅಧಿಕಾರಿಗಳ ನಿಯೋಜನೆ ಈಗಾಗಲೇ ಪೂರ್ಣಗೊಂಡಿದೆ. ಎರಡನೇ ಹಂತದ ಚುನಾವಣೆ ತರಬೇತಿ 4/5/2023ರ ಬೆಳಗ್ಗೆ 9.30ಕ್ಕೆ ಆರಂಭವಾಗಲಿದೆ. ಮಸ್ಟರಿಂಗ್‌ ದಿನಾಂಕ 9/5/2023ರ ಬೆಳಗ್ಗೆ 9 ಗಂಟೆಗೆ. ಮತದಾನ 10/5/2023 ಬೆಳಗ್ಗೆ 7 ರಿಂದ ಸಂಜೆ 6ರ ತನಕ ನಡೆಯಲಿದೆ. ಆದ್ದರಿಂದ ಅಧಿಕಾರಿ/ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.

ಕಡ್ಡಾಯವಾಗಿ ಹಾಜರಾಗಬೇಕು; ಚುನಾವಣಾ ಕೆಲಸಕ್ಕೆ ನಿಯೋಜಿಸಲಾದ ಸಿಬ್ಬಂದಿಗಳು ನಿಗದಿಪಡಿಸಿದ ದಿನಾಂಕ, ಸಮಯ ಮತ್ತು ಕೇಂದ್ರಗಳಲ್ಲಿ ತರಬೇತಿ, ಮಸ್ಟರಿಂಗ್ ಮತ್ತು ಮತದಾನ ಕಾರ್ಯಕ್ಕೆ ಕಡ್ಡಾಯವಾಗಿ ಹಾಜರಾಗುವುದು. ಸಿಬ್ಬಂದಿಯು ಯಾರಾದರೂ ಗೈರುಹಾಜರಾದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Election Duty Training Warning For Officials

ಸಿಬ್ಬಂದಿ ಗೈರಾದರೆ ಅವರ ವಿರುದ್ಧ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 134ರಂತೆ ಕೂಡಲೇ ಎಫ್. ಐ. ಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಸೇವಾ ನಿಯಾಮಾವಳಿಗಳಂತೆ ಮತ್ತು ಅಪರಾಧ ಕಾಯ್ದೆಯಂತೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಚುನಾವಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಪ್ರತಿ ಕಚೇರಿಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶಿಸಲಾಗಿದೆ. ಸದರಿ ನೋಡಲ್ ಅಧಿಕಾರಿಯು ತಮ್ಮ ಕಚೇರಿಯ ಸಿಬ್ಬಂದಿಗೆ ಚುನಾವಣೆ ಕರ್ತವ್ಯದ ಆದೇಶಗಳನ್ನು ಜಾರಿ ಮಾಡಿ, ಚುನಾವಣಾ ತರಬೇತಿಗೆ ಹಾಗೂ ಚುನಾವಣಾ ಕರ್ತವ್ಯಕ್ಕೆ ಹಾಜರುಪಡಿಸುವ ಜವಾಬ್ದಾರಿ ವಹಿಸಬೇಕು ಎಂದು ಸೂಚಿಸಲಾಗಿದೆ.

ಈ ಮೇಲಿನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಯಾವುದೇ ನಿರ್ಲಕ್ಷ್ಯತನ ತೋರಿದ್ದಲ್ಲಿ, ನೋಡಲ್‌ ಅಧಿಕಾರಿ ವಿರುದ್ಧ ಪ್ರತಿನಿಧಿ ಕಾಯ್ದೆ 1951ರ ಕಲಂ 134ರಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಚುನಾವಣಾ ಕರ್ತವ್ಯದ ಆದೇಶಗಳನ್ನು ಬಿಬಿಎಂಪಿ ವೆಬ್‌ಸೈಟ್ www.bbmp.gov.in ರಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಮತಗಟ್ಟೆ ಸಿಬ್ಬಂದಿಯು ಪ್ರಿಸಿಡಿಂಗ್ ಆಫೀಸರ್ ಕೈಪಿಡಿಯನ್ನು https://eci.gov.in ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿವೆ. ಒಟ್ಟು ಮತದಾರರು 95,13,830 ಆಗಿದೆ. ಇವರಲ್ಲಿ ಪುರುಷರು 49,26,270, ಮಹಿಳೆಯರು 45,85,824 ಮತ್ತು ಇತರರು 1,736. ನಗರದ ಯುವ ಮತದಾರರು 1,05,000. ನಗರದ 28 ಕ್ಷೇತ್ರಗಳಲ್ಲಿ ಒಟ್ಟು 8,615 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ.

ಬೆಂಗಳೂರು ನಗರದಲ್ಲಿ ಪ್ರತಿಬಾರಿಯು ಮತದಾನದ ಪ್ರಮಾಣ ಕಡಿಮೆ ಆಗುತ್ತದೆ. ಆದ್ದರಿಂ ನಗರದಲ್ಲಿ ಈ ಬಾರಿ ಮತದಾನದ ಪ್ರಮಾಣ ಹೆಚ್ಚಳ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜೊತೆ ಸೇರಿ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಮತದಾನದ ಮಹತ್ವ, ಮತದಾನದಲ್ಲಿ ಜನರ ಪಾತ್ರವೇನು ಹಾಗೂ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಅಭಿಯಾನ ನಡೆಸಲಾಗುತ್ತಿದೆ.

ಮೇ 10ರ ಬುಧವಾರ ಮತದಾನ ಮಾಡಲು ಅನುಕೂಲವಾಗುವಂತೆ ಈಗಾಗಲೇ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ರಜೆ ನೀಡದ ಕಂಪನಿ, ಕಚೇರಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಚುನಾವಣಾ ಆಯೋಗ ಸಹ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕರೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+